ಕರ್ನಾಟಕ ರಾಜ್ಯೋತ್ಸವ, ವಿವಿಧ ಕಾರ್ಯಕ್ರಮಗಳಲ್ಲಿ ವಿಭಿನ್ನ ರೀತಿಯಲ್ಲಿ ಕರ್ನಾಟಕ ಮಾತೆಯ ಚಿತ್ರಗಳಿರುವುದನ್ನು ಗಮನಿಸಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು, ಕರ್ನಾಟಕ ಮಾತೆಯ ಹೊಸ ಚಿತ್ರವನ್ನು ಅಧಿಕೃತವಾಗಿ ಬಳಸುವಂತೆ ಆದೇಶ ಹೊರಡಿಸಲು ಮುಂದಾಗಿದೆ.
ಬೆಂಗಳೂರು (ನ.21): ಕರ್ನಾಟಕ ರಾಜ್ಯೋತ್ಸವ, ವಿವಿಧ ಕಾರ್ಯಕ್ರಮಗಳಲ್ಲಿ ವಿಭಿನ್ನ ರೀತಿಯಲ್ಲಿ ಕರ್ನಾಟಕ ಮಾತೆಯ ಚಿತ್ರಗಳಿರುವುದನ್ನು ಗಮನಿಸಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು, ಕರ್ನಾಟಕ ಮಾತೆಯ ಹೊಸ ಚಿತ್ರವನ್ನು ಅಧಿಕೃತವಾಗಿ ಬಳಸುವಂತೆ ಆದೇಶ ಹೊರಡಿಸಲು ಮುಂದಾಗಿದೆ.
ಕಳೆದ ಸೆಪ್ಟಂಬರ್ ತಿಂಗಳಲ್ಲಿ ರಾಜ್ಯದ ಕಲೆ, ಸಂಸ್ಕೃತಿಯನ್ನು (Art and culture) ಬಿಂಬಿಸುವ ಚಿತ್ರವನ್ನು ರಚಿಸಿಕೊಡುವಂತೆ ಲಲಿತಕಲಾ ಅಕಾಡೆಮಿ ಅಧ್ಯಕ್ಷ ಡಿ. ಮಹೇಂದ್ರ ನೇತೃತ್ವದ ನಾಲ್ವರು ಸದಸ್ಯರನ್ನು ಒಳಗೊಂಡ ಸಮಿತಿ ರಚಿಸಲಾಗಿತ್ತು. ಈ ಸಮಿತಿಯಿಂದ ಕರ್ನಾಟಕ ಮಾತೆಯ ಒಂದು ಚಿತ್ರವನ್ನು ಆಯ್ಕೆ ಮಾಡಲಾಗಿದ್ದು, ಇದನ್ನು ಅಂತಿಮಗೊಳಿಸಿ ಅಧಿಕೃತ ಆದೇಶ ಹೊರಡಿಸುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇನ್ನು ಮುಂದೆ ಎಲ್ಲ ಸರ್ಕಾರಿ ಕಾರ್ಯಕ್ರಮಗಳಲ್ಲಿ, ಶಾಲಾ-ಕಾಲೇಜುಗಳ ಗೋಡೆಯ ಮೇಲೆ ಇದೇ ಚಿತ್ರವನ್ನು (Picture)ಕಡ್ಡಾಯವಾಗಿ ಬಳಸುವಂತೆ ತಿಳಿಸಲಾಗಿದೆ. ಅಧಿಕೃತ ಚಿತ್ರದಲ್ಲಿ ಕರ್ನಾಟಕದ ಸಾಂಪ್ರದಾಯಿಕ ಕಲೆಯನ್ನು ಬಿಂಬಿಸುವ ಹಾಗೂ ನಾಡಗೀತೆಯಲ್ಲಿರುವ ಕೆಲವು ಅಂಶಗಳನ್ನು ಸಾಂಕೇತಿಕವಾಗಿ ಬಳಸಲಾಗಿದೆ.
Raymo 'ಈಗ ಕನ್ನಡ ಚಿತ್ರರಂಗದಲ್ಲಿ ಆಗುತ್ತಿರುವ ಬದಲಾವಣೆಯನ್ನು ರವಿಚಂದ್ರನ್ ಆಗಲೇ ಮಾಡಿದ್ದರು'
ಕಣ್ಮನ ಸೆಳೆಯುವ ನಾಡದೇವಿ ಅಲಂಕಾರ: ರಾಜ್ಯವನ್ನಾಳಿದ ಚಾಲುಕ್ಯರ ಕಾಲದ ಕರಂಡ ಮುಕುಟೋಪಾದಿಯಂತಿರುವ ಕಿರೀಟ, ಕಿವಿಯಲ್ಲಿ ಸುಂದರ ಕರ್ಣಪರ್ಯಗಳು, ಭುಜದ ಮೇಲೆ ರಾಜ್ಯ ವೈಶಿಷ್ಟ್ಯದ ಸಿಂಹ ಲಾಂಛನ ಭುಜಕೀರ್ತಿಗಳು, ಕುತ್ತಿಗೆಯಲ್ಲಿ ಕಂಠಿ, ಕಟ್ಟಾಣಿ, ಮಣಿ ಹಾರಗಳು, ಕರ್ನಾಟಕ ಲಾಂಛನ ಗಂಡ ಭೇರುಂಡ ಪದಕ, ಟೊಂಕದಲ್ಲಿ ಬೆಳ್ಳಿಯ ಡಾಬು, ಕೀರ್ತಿಮುಖ ಲಾಂಛನದ ವಡ್ಯಾಣ, ಉದ್ದನೆಯ ವೈಜಯಂತಿ ಹಾರ, ನಡುವೆ ಹೊಯ್ಸಳ ಲಾಂಛನದ ಪದಕ ಕರ್ನಾಟಕ ಮಾತೆಯನ್ನು ಅಲಂಕರಿಸಿವೆ. ಕಾಲಿನಲ್ಲಿ ಕಡಗ, ಋಳಿ ಮತ್ತು ಕಾಲುಂಗುರಗಳು, ಹಣಿಯ ಲಲಾಟ ತಿಲಕ, ಶಿರದಲ್ಲಿ ಮುಡಿದಿರುವ ಹೂವು ಸೌಭಾಗ್ಯ ದ್ಯೋತಕಗಳಾಗಿವೆ.
ಸೋಮಶೇಖರ್ ರಚಿತ ಚಿತ್ರ:
ನಾಡದೇವತೆಯ ಸಂಪೂರ್ಣ ಅಲಂಕಾರಕ್ಕೆ ತೆಳುವಾದ- ಮೃದುವಾದ ಹೂವಿನ ತೋಮಾಲೆಯು ಮೆರಗು ನೀಡಿದೆ. ಕೆಳಗೆ ಸುಂದರ ಸದೃಢ ತಾವರೆ ಹೂವು ದೇವಿಯ ಕಾಲುಗಳಿಗೆ ಆಸರೆ ನೀಡಿದೆ. ಈ ಮೂಲಕ ಪಶ್ಚಿಮ ಘಟ್ಟ, ಸಸ್ಯಕಾಶಿಯ ಸೊಬಗನ್ನು ಚಿತ್ರಿಸಲಾಗಿದೆ. ಈವರೆಗೆ ರಾಜ್ಯದಲ್ಲಿ ವಿಭಿನ್ನ ಚಿತ್ರಗಳನ್ನು ಬಳಸಿಕೊಳ್ಳಲಾಗುತ್ತಿದೆ. ಅದರಲ್ಲಿಯೂ ಅತಿ ಹೆಚ್ಚು ಪ್ರಮಾಣದಲ್ಲಿ ಕಲಾವಿದ ಬಿ.ಕೆ.ಎಸ್. ವರ್ಮ ಅವರ ಚಿತ್ರವನ್ನು ಬಳಸಲಾಗುತ್ತಿತ್ತು. ಇದೀಗ ಹೊಸ ಚಿತ್ರವನ್ನು ಸಮಿತಿಯು ಸೂಚಿಸಿದಂತೆ ಕೆ. ಸೋಮಶೇಖರ್ ರಚಿಸಿದ್ದಾರೆ.
ಈ ವರ್ಷದ ಕನ್ನಡದ ಜನಪ್ರಿಯ ಸ್ಟಾರ್ ಯಾರು?: ಸಮೀಕ್ಷೆ ಏನ್ ಹೇಳುತ್ತೆ?
ದೇವಿಯ ಭಾವಚಿತ್ರದಲ್ಲಿರುವ ವಿಶೇಷ ಅಂಶಗಳು:
* ನಾಡದೇವತೆಯ ಹಿನ್ನೆಲೆಯಲ್ಲಿ ಕರ್ನಾಟಕದ ನಕ್ಷೆ ಇರುತ್ತದೆ.
* ಮುಖದಲ್ಲಿ ಸ್ವಾಭಾವಿಕ ಸೌಂದರ್ಯ ಮತ್ತು ದೈವಿ ಭಾವವಿದೆ.
* ದ್ವಿಭುಜ ಅಂದರೆ ಎರಡು ಕೈಗಳು ವಾಸ್ತವಿಕತೆಗೆ ಹತ್ತಿರವಾಗಿದೆ.
* ಬಲಗೈಯಲ್ಲಿ ಅಭಯ ಮುದ್ರೆ ಸಾಂಕೇತಿಕವಾಗಿ ರಕ್ಷಣೆ ನೀಡಲಾಗುತ್ತಿದೆ.
* ಎಡಗೈಯಲ್ಲಿರುವ ತಾಳೆಗರಿ ಕನ್ನಡ ಭಾಷಾ ಸಂಪತ್ತು, ಜ್ಞಾನ ಸಮೃದ್ಧಿಯನ್ನು ಪ್ರವಹಿಸುವುದನ್ನು ಸೂಚಿಸುತ್ತಿದೆ.
* ನಾಡದೇವತೆಯು ಕುಳಿತಿರುವ ಭಂಗಿಯು ಭವ್ಯತೆಯನ್ನು ಹಾಗೂ ಸಾಕ್ಷ್ಯತೆಯನ್ನು ಪ್ರತಿಬಿಂಬಿಸುತ್ತಿದೆ.
* ಕರ್ನಾಟಕದ ಧ್ವಜ ಕನ್ನಡಾಭಿಮಾನದ ಸಂಕೇತವಾಗಿ ರಾರಾಜಿಸುತ್ತಿದೆ.
* ಹಸಿರು ಸೀರೆಯು ಸಿರಿ ಸಂಪದ ಸಮೃದ್ಧಿಯನ್ನು ಸೂಚಿಸುತ್ತಿದೆ.
* ಕರ್ನಾಟಕದ ಭವ್ಯ ವೈಶಿಷ್ಟ್ಯವನ್ನು ಸಾರುವ ಆಭರಣಗಳು ನಮ್ಮ ನಾಡನ್ನು ಆಳಿದ ಸಾಮ್ರಾಜ್ಯಗಳ ವೈಭವವನ್ನು ಸಾರುತ್ತಿವೆ.