ಆ.30ರಂದು ಮೈಸೂರಿನಲ್ಲಿ ‘ಗೃಹಲಕ್ಷ್ಮೀ’ ಗೆ ಚಾಲನೆ, ದೇಶದಲ್ಲೇ ಅತಿ ದೊಡ್ಡ ಕಾರ್ಯಕ್ರಮ ಇದು: ಡಿಕೆಶಿ

Published : Aug 24, 2023, 10:17 PM IST
ಆ.30ರಂದು ಮೈಸೂರಿನಲ್ಲಿ ‘ಗೃಹಲಕ್ಷ್ಮೀ’ ಗೆ ಚಾಲನೆ, ದೇಶದಲ್ಲೇ ಅತಿ ದೊಡ್ಡ ಕಾರ್ಯಕ್ರಮ ಇದು: ಡಿಕೆಶಿ

ಸಾರಾಂಶ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಗೃಹಲಕ್ಷ್ಮೀ’ ಯೋಜನೆ ಇಡೀ ದೇಶದಲ್ಲಿಯೇ ದೊಡ್ಡ ಕಾರ್ಯಕ್ರಮವಾಗಿದ್ದು, ಈಗಾಗಲೇ 1.10 ಕೋಟಿ ಮಹಿಳೆಯರು ಯೋಜನೆಗೆ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದರು.

ಮೈಸೂರು (ಆ.24) :  ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಗೃಹಲಕ್ಷ್ಮೀ’ ಯೋಜನೆ ಇಡೀ ದೇಶದಲ್ಲಿಯೇ ದೊಡ್ಡ ಕಾರ್ಯಕ್ರಮವಾಗಿದ್ದು, ಈಗಾಗಲೇ 1.10 ಕೋಟಿ ಮಹಿಳೆಯರು ಯೋಜನೆಗೆ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದರು.

ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಗುರುವಾರ ಕಾರ್ಯಕ್ರಮದ ಸಿದ್ಧತೆ ಕುರಿತು ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಆ.30ರಂದು ಗೃಹಲಕ್ಷ್ಮಿ ಯೋಜನೆಗೆ ಮೈಸೂರಿನಲ್ಲಿ ಚಾಲನೆ ನೀಡುತ್ತಿದ್ದು, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಹಲವರು ಪಾಲ್ಗೊಳ್ಳುತ್ತಿದ್ದಾರೆ. ಮೈಸೂರು, ಮಂಡ್ಯ, ಚಾಮರಾಜನಗರ, ಕೊಡಗು, ಹಾಸನ ಜಿಲ್ಲೆಗಳ ಫಲಾನುಭವಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದು, ಇದಕ್ಕಾಗಿ 2 ಸಾವಿರ ಬಸ್‌ಗಳ ವ್ಯವಸ್ಥೆ ಮಾಡಲಾಗುತ್ತಿದೆ. ಕೆಲವು ಫಲಾನುಭವಿಗಳು ತಮ್ಮ ಅನಿಸಿಕೆ ಹಂಚಿಕೊಳ್ಳಲು ವ್ಯವಸ್ಥೆ ಮಾಡಲಾಗುತ್ತಿದೆ ಎಂದರು.

ಬೇರೆ ಪಕ್ಷಗಳಿಂದ ಎಷ್ಟು ಜನ ಬರ್ತಾರೆಂದು ಕಾಲವೇ ಹೇಳುತ್ತದೆ: ಡಿಕೆಶಿ

ರಾಜ್ಯಾದ್ಯಂತ ಏಕಕಾಲಕ್ಕೆ ಕಾರ್ಯಕ್ರಮಕ್ಕೆ ಚಾಲನೆ ಸಿಗಲಿದೆ. ಆನ್‌ಲೈನ್‌ ಮೂಲಕ ಸಂವಾದಕ್ಕೂ ವ್ಯವಸ್ಥೆ ಮಾಡುತ್ತೇವೆ. ಒಂದು ಬಟನ್‌ ಒತ್ತಿದರೆ ಕೂಡಲೇ ಎಲ್ಲಾ ಫಲಾನುಭವಿಗಳಿಗೆ ಹಣ ಸಂದಾಯ ಆಗುತ್ತದೆ. ಸಂದೇಶಗಳು ಅವರ ಮೊಬೈಲ್‌ ನಂಬರ್‌ಗೆ ಬರುತ್ತವೆ. ನಮ್ಮಲ್ಲಿ ಹಣದ ಕೊರತೆ ಇಲ್ಲ. ಎಲ್ಲಾ ಹಣವನ್ನೂ ಬ್ಯಾಂಕ್‌ಗೆ ಡೆಪಾಸಿಟ್‌ ಮಾಡಿದ್ದೇವೆ. ಸರ್ವರ್‌ ಸಮಸ್ಯೆ ಇದ್ದರಷ್ಟೆಹಣ ಬರುವುದು ತಡವಾಗಬಹುದು. ಕಾರ್ಯಕ್ರಮದ ಸ್ಥಳದಲ್ಲಿ ಕುಡಿಯುವ ನೀರು ಹೊರತುಪಡಿಸಿ ಬೇರೆ ಯಾವುದೇ ವ್ಯವಸ್ಥೆ ಇರುವುದಿಲ್ಲ. ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಒಂದು ಲಕ್ಷ ಚೇರ್‌ ಹಾಕಲಾಗುತ್ತಿದೆ. ಸಾರ್ವಜನಿಕರು ಕುಳಿತ ಸ್ಥಳದಲ್ಲಿ ಸುಮಾರು 140 ಅಡಿಯ ಬೃಹತ್‌ ಎಲ್‌ಇಡಿ ಪರದೆ ಅಳವಡಿಸಲಾಗುವುದು. ಇದು ಸರ್ಕಾರಿ ಕಾರ್ಯಕ್ರಮವಾಗಿದ್ದು, ಪಕ್ಷಾತೀತವಾಗಿ ನಡೆಯಲಿದೆ. ಎಲ್ಲಾ ಪಕ್ಷಗಳ ಶಾಸಕರು ಕಾರ್ಯಕ್ರಮದಲ್ಲಿ ಭಾಗವಹಿಸಬಹುದು ಎಂದು ಹೇಳಿದರು.

ರಾಜಕೀಯ ಇಲ್ಲ:

ಬೆಳಗಾವಿಯಿಂದ ಮೈಸೂರಿಗೆ ಕಾರ್ಯಕ್ರಮದ ಸ್ಥಳ ಬದಲಾಗುವುದರ ಹಿಂದೆ ಯಾವುದೇ ರಾಜಕೀಯ ಇಲ್ಲ. ಬೆಳಗಾವಿಯಲ್ಲಿ ಇನ್ನೊಂದು ಕಾರ್ಯಕ್ರಮ ಮಾಡಲು ಯೋಜನೆ ರೂಪಿಸಿದ್ದೇವೆ. ಎಲ್ಲರ ಒಮ್ಮತದ ತೀರ್ಮಾನದಿಂದ ಮೈಸೂರಿನಲ್ಲಿ ಈ ಕಾರ್ಯಕ್ರಮ ಮಾಡುತ್ತಿದ್ದೇವೆ. ಮೈಸೂರಿನಲ್ಲಿ ‘ಅನ್ನಭಾಗ್ಯ’ ಯೋಜನೆಗೆ ಚಾಲನೆ ನೀಡುವ ಉದ್ದೇಶ ನಮ್ಮದಾಗಿತ್ತು. ಆದರೆ ಅಕ್ಕಿ ವಿಚಾರದಲ್ಲಿ ಒಂದಷ್ಟುಅಡೆತಡೆ ಆಗಿರುವುದರಿಂದ ಮೈಸೂರಿನಲ್ಲಿ ಗೃಹಲಕ್ಷ್ಮೀ ಆರಂಭಿಸುತ್ತಿದ್ದೇವೆ. ಬೆಂಗಳೂರಿನಲ್ಲಿ ಕಾರ್ಯಕ್ರಮ ಆಯೋಜಿಸಲು ಟ್ರಾಫಿಕ್‌ ಸಮಸ್ಯೆ ಉಂಟಾಗುತ್ತದೆ ಎಂಬ ಕಾರಣಕ್ಕೆ ಮೈಸೂರಿಗೆ ಕಾರ್ಯಕ್ರಮ ಸ್ಥಳ ಬದಲಿಸಲಾಗಿದೆ ಅಷ್ಟೆಎಂದರು.

ವಿರೋಧದ ಮಧ್ಯೆನೂ ಘರ್ ವಾಪ್ಸಿ ಮಾಡ್ತಿದ್ದಾರಾ ಡಿಕೆಶಿ ? ರಾಜೀನಾಮೆ ಮಾತುಗಳಾಡಿದ್ದೇಕೆ ತನ್ವೀರ್ ಸೇಠ್..?

ಬಿಜೆಪಿ ಆಡಳಿತದ ರಾಜ್ಯದಲ್ಲೂ ಗ್ಯಾರಂಟಿ ಜಾರಿ:

ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿಯಾಗುತ್ತದೆ ಎಂದು ಪ್ರಧಾನಿ ಮೋದಿ ಹೇಳುತ್ತಿದ್ದರು. ಆದರೆ, ಈಗ ಅವರದೇ ಆಡಳಿತವಿರುವ ಮಧ್ಯಪ್ರದೇಶ ಸರ್ಕಾರ ನಮ್ಮನ್ನು ನೋಡಿ ಗ್ಯಾರಂಟಿ ಯೋಜನೆ ಜಾರಿಗೊಳಿಸಿದೆ. ಇದಕ್ಕೆ ಪ್ರಧಾನಿ ಏನು ಹೇಳುತ್ತಾರೆ? ಎಂದು ಪ್ರಶ್ನಿಸಿದರು. ದೇಶದ ಎಲ್ಲಾ ಕಡೆಯೂ ನಮ್ಮ ಗ್ಯಾರಂಟಿ ಯೋಜನೆಗಳು ಈಗ ಸದ್ದು ಮಾಡುತ್ತಿವೆ ಎಂದು ಪ್ರತಿಪಾದಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್