ಬಂಡೀಪುರ ಅರಣ್ಯಕ್ಕೆ ಬೆಂಕಿ: ಒಬ್ಬನ ಬಂಧನ

Published : Mar 01, 2019, 10:18 AM ISTUpdated : Mar 01, 2019, 10:55 AM IST
ಬಂಡೀಪುರ ಅರಣ್ಯಕ್ಕೆ ಬೆಂಕಿ: ಒಬ್ಬನ ಬಂಧನ

ಸಾರಾಂಶ

ಬಂಡೀಪುರ ಅರಣ್ಯದಲ್ಲಿ ಬೆಂಕಿ ಕಾಣಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ವ್ಯಕ್ತಿಯನ್ನು ಬಂಧಿಸಲಾಗಿದೆ. 

ಗುಂಡ್ಲುಪೇಟೆ: ಬಂಡೀಪುರ ಅರಣ್ಯದ ಗೋಪಾಲಸ್ವಾಮಿ ಬೆಟ್ಟದ ವಲಯದಲ್ಲಿ ಬೆಂಕಿ ಬಿದ್ದು ಸುಮಾರು 15 ಸಾವಿರ ಎಕರೆ ಅರಣ್ಯ ನಾಶವಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಗುರುವಾರ ಅರಣ್ಯ ಇಲಾಖೆ ಅಧಿಕಾರಿಗಳು ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ. 

ಗುಂಡ್ಲುಪೇಟೆ ತಾಲೂಕಿನ ಕಳ್ಳೀಪುರ ಗ್ರಾಮದ ಅರುಣ್‌ ಕುಮಾರ್‌ ಬಂಧಿತ ಆರೋಪಿಯಾಗಿದ್ದಾನೆ. ಗೋಪಾಲಸ್ವಾಮಿ ಬೆಟ್ಟವಲಯ ಅರಣ್ಯಾಧಿಕಾರಿ ಪುಟ್ಟಸ್ವಾಮಿ ಆರೋಪಿ ಅರುಣ್‌ ಕುಮಾರ್‌ನನ್ನು ಬಂಧಿಸಿ ಗುಂಡ್ಲುಪೇಟೆ ನ್ಯಾಯಾಲಯಕ್ಕೆ ಹಾಜರು ಪಡಿಸಿದರು. ನ್ಯಾಯಾಲಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಬಂಧಿತನ ವಿಚಾರಣೆ ನಡೆಯುತ್ತಿದೆ. ಬೆಂಕಿ ಹಚ್ಚಲು ಕಾರಣ ಏನು ಎಂದು ಹಲವಾರು ರೀತಿಯಲ್ಲಿ ಆರೋಪಿಯನ್ನು ಅರಣ್ಯಾಧಿಕಾರಿ ಪುಟ್ಟಸ್ವಾಮಿ ವಿಚಾರಣೆ ನಡೆಸಿದ್ದಾರೆ. ಆದರೆ, ಆತ ತುಟಿ ಬಿಚ್ಚಿಲ್ಲ ಎಂದು ಇಲಾಖೆಯ ಮೂಲಗಳಿಂದ ತಿಳಿದುಬಂದಿದೆ.

ಬೆಂಕಿ ಹಚ್ಚಿದ ಸಂಬಂಧ ಬಂಧಿತ ಆರೋಪಿ ಅರುಣ್‌ ಕುಮಾರ್‌ ಮತ್ತೆ ತನಿಖಾಧಿಕಾರಿ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿದರೆ ಬೆಂಕಿ ಹಚ್ಚಲು ಹೇಳಿದವರ ಮತ್ತಷ್ಟುಮಂದಿಯ ಹೆಸರು ಬಯಲಾಗುವ ಸಾಧ್ಯತೆ ಹೆಚ್ಚಿದೆ. ಈ ಕುರಿತು ಗೋಪಾಲಸ್ವಾಮಿ ಬೆಟ್ಟದ ಅರಣ್ಯಾಧಿಕಾರಿ ಪುಟ್ಟಸ್ವಾಮಿ ಮಾತನಾಡಿ, ಈ ಸಂಬಂಧ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಮೊಬೈಲ್‌ ಹಾಗೂ ಅನುಮಾನಿತರ ಮೊಬೈಲ್‌ಗಳನ್ನು ಸಿಡಿಆರ್‌ ಹಾಕಿಸಲು ಪೊಲೀಸರಿಗೆ ಮನವಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ದರ್ಶನ್ ಗ್ಯಾಂಗ್‌ನಿಂದ ಕೊಲೆಗೀಡಾದ ರೇಣುಕಾಸ್ವಾಮಿಗೆ ಸತ್ತಮೇಲೂ ನೆಮ್ಮದಿಯಿಲ್ಲ! ಸಮಾಧಿ ಧ್ವಂಸಗೈದ ಡೆವಿಲ್ ಗ್ಯಾಂಗ್‌!
ಧರ್ಮಸ್ಥಳ ನೂರಾರು ಶವ ಹೂಳಿದ ಕೇಸ್: ಬುರುಡೆ ಗ್ಯಾಂಗ್ ಷಡ್ಯಂತ್ರ ಬಯಲು - SIT ವರದಿಯಲ್ಲಿ ಒಬ್ಬರಿಗೆ ಕ್ಲೀನ್ ಚಿಟ್!