ಇಡೀ ರಾಜ್ಯಕ್ಕೆ ಅನ್ವಯವಾಗುವಂತೆ ಎರಡು - ಮೂರು ಗ್ರಾಮ ಪಂಚಾಯಿತಿಗೆ ಒಂದು ನವೋದಯ ಅಥವಾ ಸಿಬಿಎಸ್ಸಿ ಮಾದರಿಯಲ್ಲಿ ಶಾಲೆ ಪ್ರಾರಂಭಿಸುವಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಸೂಚನೆ ನೀಡಿದರು.
ರಾಮನಗರ (ಜೂ.27): ಇಡೀ ರಾಜ್ಯಕ್ಕೆ ಅನ್ವಯವಾಗುವಂತೆ ಎರಡು - ಮೂರು ಗ್ರಾಮ ಪಂಚಾಯಿತಿಗೆ ಒಂದು ನವೋದಯ ಅಥವಾ ಸಿಬಿಎಸ್ಸಿ ಮಾದರಿಯಲ್ಲಿ ಶಾಲೆ ಪ್ರಾರಂಭಿಸುವಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಸೂಚನೆ ನೀಡಿದರು.
ನಗರದಲ್ಲಿ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದ ಹಲವೆಡೆ ಇದೇ ಮಾದರಿಯ 20 ಶಾಲೆಗಳನ್ನು ಪ್ರಾರಂಭಿಸುವ ಚಿಂತನೆಯಿದೆ. ಜಿಲ್ಲೆಯ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಉದ್ದೇಶದಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಿ ಕ್ರಾಂತಿ ಮಾಡಿದೆವು. ಅದೇ ರೀತಿ ಶಿಕ್ಷಣದ ವಿಚಾರದಲ್ಲಿಯೂ ಬದಲಾವಣೆ ತರಬೇಕಿದೆ. ಎರಡು - ಮೂರು ಪಂಚಾಯಿತಿಗೆ ಒಂದು ಮಾದರಿ ಶಾಲೆ ಪ್ರಾರಂಭಿಸುವುದು ನನ್ನ ಕನಸಿನ ಯೋಜನೆಯಾಗಿದೆ. ಗ್ರಾಮೀಣರು ಮಕ್ಕಳ ಶಿಕ್ಷಣದ ಉದ್ದೇಶದಿಂದ ನಗರ ಪ್ರದೇಶಗಳಿಗೆ ವಲಸೆ ಬರುವುದನ್ನು ತಪ್ಪಿಸುವುದು ಪ್ರಮುಖ ಉದ್ದೇಶ ಎಂದು ಹೇಳಿದರು.
ಅರಣ್ಯ ಇಲಾಖೆ ಪರಿಸರ ಸಂರಕ್ಷಿಸುವ ನಿಟ್ಟಿನಲ್ಲಿ ಗಿಡಗಳನ್ನು ನೆಟ್ಟು ಪೋಷಿಸಲು ಶಾಲೆಗಳೊಂದಿಗೆ ಒಪ್ಪಂದ ಮಾಡಿಕೊಳ್ಳಬೇಕು. ಮಕ್ಕಳ ಹೆಸರಿನಲ್ಲಿಯೇ ಗಿಡಗಳನ್ನು ನೆಟ್ಟು ಅದರ ಪಾಲನೆ ಪೋಷಣೆ ಜವಾಬ್ದಾರಿಯನ್ನು ವಿದ್ಯಾರ್ಥಿಗಳಿಗೆ ನೀಡಬೇಕು. ಸುಳ್ಳು ಲೆಕ್ಕದಲ್ಲಿ ಗಿಡ ನೆಡಬೇಡಿ, ಗಾಂಧಿ ಲೆಕ್ಕ ಬರೆಯಬೇಡಿ ಎಂದು ತಾಕೀತು ಮಾಡಿದರು.
ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ವಾಸ್ತವ್ಯವಿರಿ: ಡಿಸಿಎಂ ಡಿಕೆ ಶಿವಕುಮಾರ ಸೂಚನೆ
ವಾರಕ್ಕೊಮ್ಮೆ ಕಂದಾಯ ಅದಾಲತ್:
ಶಾಸಕ ಬಾಲಕೃಷ್ಣ ಮಾತನಾಡಿ, ಜಿಲ್ಲಾಮಟ್ಟದ ಅಧಿಕಾರಿಗಳು ಮಧ್ಯಾಹ್ನದೊಳಗೆ ಸಭೆಗಳನ್ನು ಪೂರ್ಣಗೊಳಿಸಬೇಕು. ಮಧ್ಯಾಹ್ನದ ನಂತರ ತಾಲೂಕು ಅಧಿಕಾರಿಗಳು ಕಚೇರಿಗಳಲ್ಲಿ ಕಡ್ಡಾಯವಾಗಿ ಜನ ಸಾಮಾನ್ಯರಿಗೆ ಸಿಗುವಂತಾಗಬೇಕು. ಜಿಲ್ಲಾಧಿಕಾರಿಗಳು ತಾಲೂಕುಗಳಿಗೆ ಭೇಟಿ ನೀಡಬೇಕು. ಅಪರ ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ ಹಾಗೂ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳು ಹೋಬಳಿ ಕೇಂದ್ರಗಳಿಗೆ ಭೇಟಿ ನೀಡಿ ಅಹವಾಲು ಆಲಿಸಿ ಬಗೆಹರಿಸಬೇಕು ಎಂದು ಸಲಹೆ ನೀಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, ವಾರದಲ್ಲಿ ಒಂದು ದಿನ ಹೋಬಳಿವಾರು ಕಂದಾಯ ಅದಾಲತ್ ಆಯೋಜಿಸಬೇಕು. ಕಂದಾಯ ಇಲಾಖೆಗೆ ಸಂಬಂಧಿಸಿದ ಎಲ್ಲ ಅಧಿಕಾರಿಗಳು ಕಡ್ಡಾಯ ಹಾಜರಾಗಬೇಕು.ಯಾವುದೇ ಕಾಮಗಾರಿ ಪ್ರಾರಂಭಕ್ಕೂ ಮುನ್ನಾ ಹಾಗೂ ಮುಗಿದ ನಂತರ ವಿಡಿಯೋ, ಪೋಟೋ ತೆಗೆಯಬೇಕು. ಕೆಲಸ ಪ್ರಗತಿ ಪ್ರತಿ ಹಂತದ ವಿಡಿಯೋ, ಫೋಟೋ ಇರಬೇಕು. ಕಳ್ಳಬಿಲ್ಲು, ಡಬಲ… ಎಂಟ್ರಿಗೆ ಆಸ್ಪದ ಇಲ್ಲದಂತೆ ಎಚ್ಚರ ವಹಿಸಬೇಕು. ಎರಡು ಇಲಾಖೆ, ಎರಡು ಬಿಲ… ಸೃಷ್ಟಿಮಾಡಿದರೆ ಕ್ರಮ ಜರುಗಿಸುತ್ತೇವೆ. ರಸ್ತೆ ಮ್ಯಾಪಿಂಗ್ ಮಾಡಿ. ಯಾವ ಇಲಾಖೆ ಅನುದಾನ, ಶಾಸಕರು ಹಾಗೂ ಸಂಸದರ ಅನುದಾನದ ಬಗ್ಗೆ ವಿವರ ಇಡುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಸರ್ಕಾರಿ ಆಸ್ತಿ ಒತ್ತುವರಿ ಮಾಡಿರುವ ಬಗ್ಗೆ ಪಟ್ಟಿಮಾಡಬೇಕು. ಬಂದಿರುವ ಅನುದಾನ, ಆಗಿರುವ ಕೆಲಸದ ಬಗ್ಗೆ ವಿವರ ಕೊಡಬೇಕು. ಜಲ ಜೀವನ್ ಮಿಷನ್ ಸೇರಿದಂತೆ ಕುಡಿಯುವ ನೀರು ಪೂರೈಕೆ ಯೋಜನೆಗಳ ಪ್ರಗತಿಯ ಸಂಪೂರ್ಣ ವಿವರ ಸಲ್ಲಿಸುವಂತೆ ಹೇಳಿದರು.
ರಸ್ತೆಯಲ್ಲಿ ಬೆಳೆಗಳ ಕಣ ಮಾಡಲು ಅವಕಾಶ ಕೊಡಬೇಡಿ. ಟ್ರಾಕ್ಟರ್‌ಗಳಿಗೆ ಡ್ರೈವಿಂಗ್ ಲೈಸೆ®್ಸ…, ಇನ್ಸೂರೆ®್ಸ… ಕಡ್ಡಾಯವಾಗಿ ಇರಬೇಕು. ಇದಕ್ಕೆ 100 ದಿನಗಳ ಗಡುವು ನೀಡುತ್ತಿದ್ದು, ಕರಪತ್ರ ಹಂಚಿ ಪ್ರಚಾರ ಮಾಡಿ ಹೋಬಳಿವಾರು ಅಭಿಯಾನ ನಡೆಸುವಂತೆ ಶಿವಕುಮಾರ್ ಸಲಹೆ ನೀಡಿದರು.
ಚರಂಡಿಯಲ್ಲಿ ಕುಡಿವ ನೀರಿನ ಪೈಪು ಅಳವಡಿಕೆ: ಅಧಿಕಾರಿ ಅಮಾನತಿಗೆ ಡಿಸಿಎಂ ಸೂಚನೆ
ರಾಮನಗರ: ಕನಕಪುರದ ಗೇರಳ್ಳಿಯಲ್ಲಿ ಒಳಚರಂಡಿಯೊಳಗೆ ಕುಡಿಯುವ ಪೈಪು ಅಳವಡಿಸಿರುವ ಪ್ರಕರಣಕ್ಕೆ ಸಂಬಂಧಪಟ್ಟಅಧಿಕಾರಿಗಳನ್ನು ಅಮಾನತು ಮಾಡುವಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಜಿಪಂ ಸಿಇಒ ದಿಗ್ವಿಜಯ್ ಬೋಡ್ಕೆ ಅವರಿಗೆ ಆದೇಶಿಸಿದರು.
ಕೆಡಿಪಿ ಸಭೆಯಲ್ಲಿ ಫೋಟೋ ಪ್ರದರ್ಶಿಸಿದ ಶಿವಕುಮಾರ್, ಒಳಚರಂಡಿಯಲ್ಲಿ ಕುಡಿಯುವ ನೀರು ಪೈಪು ಅಳವಡಿಸಿದ ಅಧಿಕಾರಿಗಳಿಗೆ ಸಾಮಾನ್ಯ ಜ್ಞಾನ ಇಲ್ಲವೇ ಎಂದು ಪ್ರಶ್ನಿಸಿದರು. ತಕ್ಷಣವೇ ಆ ಅಧಿಕಾರಿಗಳ ಅಮಾನತು ಮಾಡುವಂತೆ ಆದೇಶ ನೀಡಿದರು.
ಡಿ.ಕೆ.ಶಿವಕುಮಾರ್ ಭೇಟಿ ಬಗ್ಗೆ ಯತ್ನಾಳ್, ಬೊಮ್ಮಾಯಿ ಮಧ್ಯೆ ಘರ್ಷಣೆ
ಶ್ರೀಗಳ ಹುಟ್ಟೂರಿನ ಅಭಿವೃದ್ಧಿ ವರದಿ ಸಲ್ಲಿಸಿ:
ಲಿಂಗೈಕ್ಯ ಶ್ರೀ ಡಾ.ಶಿವಕುಮಾರ ಸ್ವಾಮೀಜಿಗಳ ಹುಟ್ಟೂರು ವೀರಾಪುರ, ಆದಿ ಚುಂಚನಗಿರಿ ಮಠದ ಭೈರವೈಕ್ಯ ಶ್ರೀ ಡಾ.ಬಾಲಗಂಗಾಧರನಾಥ ಸ್ವಾಮೀಜಿ ಜನ್ಮ ಸ್ಥಳ ಬಾನಂದೂರು ಹಾಗೂ ಬೆಂಗಳೂರು ನಿರ್ಮಾತೃ ಕೆಂಪೇಗೌಡರ ಸಮಾಧಿ ಸ್ಥಳ ಕೆಂಪಾಪುರದ ಅಭಿವೃದ್ಧಿ ಕಾಮಗಾರಿ ಪ್ರಗತಿ ವರದಿ ನೀಡುವಂತೆ ಸಂಬಂಧಪಟ್ಟಅಧಿಕಾರಿಗಳಿಗೆ ಶಿವಕುಮಾರ್ ಸೂಚನೆ ನೀಡಿದರು. ಸ್ವಾಮೀಜಿಗಳ ಪ್ರತಿಮೆ ನಿರ್ಮಾಣ ಎಲ್ಲಿಗೆ ಬಂತು, ಅವರ ಹುಟ್ಟೂರುಗಳ ಅಭಿವೃದ್ಧಿ ಕೆಲಸ ಏನಾಗಿದೆ ಎಂಬ ಬಗ್ಗೆ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.