* ಕಾಂಗ್ರೆಸ್, ಬಿಜೆಪಿ ನಾಯಕರುಗಳಿಗೆ ಕೊರೋನಾ
* ಕರ್ನಾಟಕದ ಮತ್ತೋರ್ವ ಸಚಿವ ಕೊರೋನಾ ಸೋಂಕು
* ಇನ್ನೋರ್ವ ಸಚಿವ ಅಜ್ಞಾತ ಸ್ಥಳದಲ್ಲಿ
ಬೆಂಗಳೂರು, (ಜ.11): ಕೊರೋನಾ ವೈರಸ್ ಮೂರೇ ಅಲೆಯ (Coronavirus Third Wave) ದೇಶದಲ್ಲಿ ದಿನದಿಂ ದಿನಕ್ಕೆ ಹೆಚ್ಚಳವಾಗುತ್ತಿದೆ. ಮತ್ತೊಂದೆಡೆ ಹಲವಾರು ರಾಜಕೀಯ ನಾಯಕರಿಗೆ ಸೋಂಕು ಅಂಟಿಕೊಳ್ಳುತ್ತಿದೆ.
ಹೌದು....ಕರ್ನಾಟಕ ರಾಜಕೀಯ ನಾಯಕರನ್ನ ತೆಗೆದುಕೊಳ್ಳುವುದಾದರೆ, ಈಗಾಗಲೇ ಸಚಿವ ಆರ್. ಅಶೋಕ್ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೊರೋನಾ ಸೋಂಕು (Coronavirus) ತಗುಲಿರುವುದು ದೃಢಪಟ್ಟಿದೆ. ಇದರ ಬೆನ್ನಲ್ಲೇ ಇದೀಗ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಅವರಿಗೂ ಸೋಂಕು ತಗುಲಿದೆ.
Karnataka Breaking News ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಕೊರೋನಾ
ಸಚಿವ ಮಾಧುಸ್ವಾಮಿಗೆ ಕೊರೋನಾ ಪಾಸಿಟಿವ್ ದೃಢಪಟ್ಟ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದು, ಇದೀಗ ಹೋಮ್ ಕ್ವಾರಂಟೈನ್ ಆಗಲಿದ್ದಾರೆ ಎಂದು ತಿಳಿದುಬಂದಿದೆ.
ನಿನ್ನೆ(ಜ.10) ಚಿಕ್ಕನಾಯಹಳ್ಳಿ ತಾಲ್ಲೂಕು ಕಚೇರಿಯಲ್ಲಿ ಮಾಧುಸ್ವಾಮಿ ನೇತೃತ್ವದಲ್ಲಿ ಎಸ್‌ಸಿ, ಎಸ್.ಟಿ ಕುಂದ ಕೂರತೆ ಸಭೆ ನಡೆದಿತ್ತು. ಆ ಸಭೆಯಲ್ಲಿ ಭಾಗಿಯಾಗಿದ್ದ ಇನ್ಸೆಪೆಕ್ಟರ್ ನಿರ್ಮಾಲಗೆ ಕೊರೋನಾ ಪಾಸಿಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ಅವರ ಸಂಪರ್ಕಕ್ಕೆ ಬಂದಿದ್ದ ಮಾಧುಸ್ವಾಮಿ ಸಹ ಕೋವಿಡ್ ಪರೀಕ್ಷೆ ಒಳಗಾಗಿದ್ದರು.
ಎರಡು ದಿನಗಳ ಹಿಂದೆ ಸಚಿವ ಮಾಧುಸ್ವಾಮಿ ಪುತ್ರಿಗೂ ಕೊರೋನಾ ಪಾಸಿಟಿವ್ ಕಾಣಿಸಿಕೊಂಡಿತ್ತು. ಈಗ ಕೊವಿಡ್-19 ಸೋಂಕಿತ ರಾಜಕೀಯ ನಾಯಕರ ಪಟ್ಟಿಗೆ ಮತ್ತೊಂದು ಹೆಸರು ಸೇರ್ಪಡೆಯಾಗಿದೆ.
ಅಜ್ಞಾತ ಸ್ಥಳದಲ್ಲಿ ಮತ್ತೋರ್ವ ಸಚಿವ
ಯೆಸ್...ಸಹಕಾರ ಸಚಿವ ಎಸ್.ಟಿ ಸೋಮಶೇಖರ್ ಅವರು ಜ್ವರ ಹಾಗೂ ಕೆಮ್ಮಿನಿಂದ ಬಳಲುತ್ತಿದ್ದಾರೆ. ಕಳೆದ ಮೂರು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿರುವ ಎಸ್.ಟಿ. ಸೋಮಶೇಖರ್ ಅವರು ಬೆಂಗಳೂರಿನ ಸದಾಶಿವನಗರದಲ್ಲಿರುವ ತಮ್ಮ ಸರ್ಕಾರಿ ನಿವಾಸ, ಬಿಟಿಎಂ ಲೇ ಔಟ್ ಸ್ವಂತ ನಿವಾಸಕ್ಕೆ ಬರದೇ ಅಜ್ಞಾತ ಸ್ಥಳದಲ್ಲಿದ್ದಾರೆ ಎಂದು ತಿಳಿದುಬಂದಿದೆ.
ಪುತ್ರ ನಿಶಾಂತ್ ಬ್ಲಾಕ್ ಮೇಲ್ ಪ್ರಕರಣ ಬಯಲಾದಾಗಿನಿಂದಲೂ ಸೋಮಶೇಖರ್ ಅವರು ಹೊರಗೆ ಕಂಡಿಲ್ಲ. ಈ ಬಗ್ಗೆ ಎಲ್ಲೂ ಸುದ್ದಿಗೋಷ್ಠಿ ನಡೆಸಿ ಯಾವುದೇ ಪ್ರತಿಕ್ರಿಯೆ ಕೊಟ್ಟಿಲ್ಲ. ಬದಲಾಗಿ ಮೊಬೈಲ್ ಫೋನಿನಲ್ಲಿಯೇ ಸಂಪರ್ಕದಲ್ಲಿದ್ದಾರೆ.
ಕೋವಿಡ್ ಪಾಸಿಟಿವ್ ದೃಢಪಟ್ಟಿರುವುದರಿಂದ ಅವರು ಅಜ್ಞಾತ ಸ್ಥಳದಲ್ಲಿ ಕ್ವಾರಂಟೈನ್ ಆಗಿದ್ದಾರೆ ಎನ್ನಲಾಗಿದೆ. ಆದ್ರೆ, ಪಾಸಿಟಿವ್ ದೃಢಪಟ್ಟಿರುವುದರ ಬಗ್ಗೆ ಸೋಮಶೇಖರ್ ಅವರು ಎಲ್ಲೂ ಬಹಿರಂಗಪಡಿಸಿಲ್ಲ.
ಕಾಂಗ್ರೆಸ್ ನಾಯಕರಿಗೂ ಸೋಂಕು
ಬಿಜೆಪಿ ಮಾತ್ರವಲ್ಲದೇ ಕಾಂಗ್ರೆಸ್ ನಾಯಕರಿಗೂ ಕೊರೋನಾ ಸೋಂಕು ವಕ್ಕರಿಸಿಕೊಂಡಿದೆ. ವಿಧಾನಪರಿಷತ್ ಸದಸ್ಯ ಸಿಎಂ ಇಬ್ರಾಹಿಮ್ ಹಾಗೂ ಮಾಜಿ ಸಚಿವ ಎಚ್.ಎಮ್ ರೇವಣ್ಣ ಅವರಿಗೂ ಕೊರೋನಾ ತಗುಲಿದೆ.
ಸಿಎಂಗೂ ಕೊರೋನಾ ಪಾಸಿಟಿವ್
ಸಚಿವ ಆಶೋಕ್ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಅವರಿಗೂ ಕೊರೋನಾ ಪಾಸಿಟಿವ್ (Corona Positive ದೃಢಪಟ್ಟಿದೆ.
ಈ ಬಗ್ಗೆ ಸ್ವತಃ ಬಸವರಾಜ ಬೊಮ್ಮಾಯಿ ಅವರೇ ಸಾಮಾಜಿಕ ಜಾಲತಾಣಗಳ ಮೂಲಕ ಖಚಿತಪಡಿಸಿದ್ದು, ಸಂಪರ್ಕಿತರು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿಕೊಂಡಿದ್ದಾರೆ.
ನನ್ನ ಆರೋಗ್ಯ ಚೆನ್ನಾಗಿದೆ, ನಾನು ಹೋಮ್ ಕ್ವಾರಂಟೈನ್‌ನಲ್ಲಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಕ್ವಾರಂಟೈನ್ ಆಗಿ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಹೇಳಿದ್ದಾರೆ.ನನ್ನ ಆರೋಗ್ಯ ಚೆನ್ನಾಗಿದೆ, ನಾನು ಹೋಮ್ ಕ್ವಾರಂಟೈನ್‌ನಲ್ಲಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಕ್ವಾರಂಟೈನ್ ಆಗಿ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಹೇಳಿದ್ದಾರೆ.
ಸಚಿವ ಅಶೋಕ್‌ಗೆ ಕೊರೋನಾ
ಕಂದಾಯ ಸಚಿವ ಆರ್ ಅಶೋಕ್‌ಗೆ ಕೊರೊನಾ ಸೋಂಕು ದೃಢ ಪಟ್ಟಿದೆ. ಜ್ವರ, ಶೀತ ಸುಸ್ತಿನಿಂದ ಬಳಲುತ್ತಿರುವ ಅಶೋಕ್ ಅವರನ್ನು ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವರು "ನನಗೆ ಕೋವಿಡ್ ದೃಢವಾಗಿದ್ದು, ಆರೋಗ್ಯವಾಗಿದ್ದೇನೆ ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ" ಎಂದು ಬರೆದುಕೊಂಡಿದ್ದಾರೆ. ಜನವರಿ 6ರ ಗುರುವಾರ ನಡೆದ ಸಚಿವ ಸಂಪುಟ ಸಭೆಗೂ ಅಶೋಕ್ ಗೈರಾಗಿದ್ದರು. ಎರಡು ದಿನದ ಹಿಂದೆ ಅಂದರೆ ಜನವರಿ 5 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಇತರೆ ಸಚಿವರೊಂದಿಗೆ ಕಚೇರಿಯಲ್ಲಿ ಕೊರೊನಾ ಜಾಗೃತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.