
ಬೆಂಗಳೂರು(ಆ.06): ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಹೆಸರಿನಲ್ಲಿ ಹನುಮಂತನಗರದಲ್ಲಿ ಆರಂಭಿಸಲಾಗಿರುವ ‘ನಮ್ಮ ಅಪ್ಪಾಜಿ ಕ್ಯಾಂಟೀನ್’ಗೆ ಇದೀಗ ಮೂರು ವರ್ಷದ ಸಂಭ್ರಮ.
ಈ ಹಿನ್ನೆಲೆಯಲ್ಲಿ ಇಂದಿನಿಂದ(ಗುರುವಾರ) ಮಧ್ಯಾಹ್ನ 12ರಿಂದ ಒಂದು ರು.ಗೆ ಊಟ ವಿತರಿಸಲಾಗುತ್ತದೆ. ಇನ್ನು ಮುಂದೆ ಈ ಕ್ಯಾಂಟೀನ್‌ನಲ್ಲಿ ರೋಗ ನಿರೋಧಕ ಹೆಚ್ಚಿಸುವ ಆಹಾರ ದೊರೆಯುತ್ತದೆ. ಸ್ಯಾನಿಟೈಸರ್, ಸ್ವಚ್ಛತೆ ಹಾಗೂ ಕೋವಿಡ್ ಸುರಕ್ಷಾ ಕ್ರಮಗಳನ್ನು ಪಾಲಿಸಲಾಗುವುದು ಎಂದು ಕ್ಯಾಂಟೀನ್ ಆರಂಭಿಸಿರುವ ಜೆಡಿಎಸ್ ಮುಖಂಡ ಟಿ.ಎ.ಶರವಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಪ್ಪಾಜಿ ಕ್ಯಾಂಟೀನ್ ಇಂದು ಲೋಕಾರ್ಪಣೆ; ವಿಶೇಷತೆಗಳೇನು?
ಹಿಂದಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಬಡವರಿಗೆ ಕಡಮೆ ದರದಲ್ಲಿ ಆಹಾರ ನೀಡಬೇಕು ಎಂಬ ಉದ್ದೇಶದಿಂದ ಇಂದಿರಾ ಕ್ಯಾಂಟೀನ್‌ಗಳನ್ನು ತೆರೆಯಲಾಯಿತು. ಅದರ ಬೆನ್ನಲ್ಲೇ ಶರವಣ ಅವರು ದೇವೇಗೌಡರ ಮೇಲಿನ ಅಭಿಮಾನದಿಂದ ಅವರ ಹೆಸರಿನಲ್ಲಿ ನಮ್ಮ ಅಪ್ಪಾಜಿ ಕ್ಯಾಂಟೀನ್ ಆರಂಭಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ