One Ward One Drive campaign: ಉತ್ತರ ಪಾಲಿಕೆಯ ಈ 18 ಜಂಕ್ಷನ್‌ ಗಳಲ್ಲಿ ಆಗಲಿದೆ ದೊಡ್ಡ ಬದಲಾವಣೆ!

Kannadaprabha News   | Kannada Prabha
Published : Oct 30, 2026, 06:12 AM IST
One Ward One Drive campaign

ಸಾರಾಂಶ

ನವೆಂಬರ್ 1ರಿಂದ ಆರಂಭವಾಗುವ ವಾರ್ಡ್ ಒನ್ ಅಭಿಯಾನದಲ್ಲಿ ಉತ್ತರ ಪಾಲಿಕೆಯ 18 ಪ್ರಮುಖ ಜಂಕ್ಷನ್‌ಗಳ ಸುಧಾರಣೆಗೆ ಆಯುಕ್ತ ಪೊಮ್ಮುಲ ಸುನಿಲ್ ಕುಮಾರ್ ಸೂಚಿಸಿದ್ದಾರೆ. ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಸಣ್ಣಪುಟ್ಟ ಸಮಸ್ಯೆ ಪರಿಹರಿಸಲಿದ್ದಾರೆ.

ಬೆಂಗಳೂರು (ಅ.30): ನವೆಂಬರ್ 1ರಿಂದ ಆರಂಭವಾಗುವ ವಾರ್ಡ್ ಒನ್ ಅಭಿಯಾನದಲ್ಲಿ ಉತ್ತರ ಪಾಲಿಕೆಯಲ್ಲಿ ಗುರುತಿಸಿರುವ 18 ಪ್ರಮುಖ ಜಂಕ್ಷನ್‌ಗಳ ಸುಧಾರಣೆಗೆ ಕ್ರಮ ಕೈಗೊಳ್ಳಲು ಆಯುಕ್ತ ಪೊಮ್ಮುಲ ಸುನಿಲ್ ಕುಮಾರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಉತ್ತರ ಪಾಲಿಕೆಯಲ್ಲಿ 18 ಜಂಕ್ಷನ್‌ಗಳು ಗುರುತು

ಈ 18 ಪ್ರಮುಖ ಜಂಕ್ಷನ್‌ಗಳಲ್ಲಿ ಸ್ಥಳ ಪರಿಶೀಲಿಸಿ ಸಮಸ್ಯೆಗಳನ್ನು ಗುರುತಿಸಿ ಪರಿಹರಿಸಲು ಸೂಚಿಸಿದ್ದು, ಸಂಬಂಧಿಸಿದ ಎಂಜಿನಿಯರ್‌ಗಳು, ಕಾರ್ಯಪಾಲಕ ಎಂಜಿನಿಯರ್‌ಗಳು ಸ್ಥಳಕ್ಕೆ ಭೇಟಿ ನೀಡಿ, ಯಾವ ಇಲಾಖೆಯಿಂದ ಯಾವ ಕಾಮಗಾರಿ ಕೈಗೊಳ್ಳಬೇಕೆಂಬುದನ್ನು ನಿರ್ಧರಿಸಬೇಕು. ಸಣ್ಣಪುಟ್ಟ ಸಮಸ್ಯೆಗಳನ್ನೂ ನಿರ್ಲಕ್ಷಿಸದೆ ಪರಿಹರಿಸುವ ಮೂಲಕ ಸಾರ್ವಜನಿಕರ ಸಂಚಾರಕ್ಕೆ ಅನುಕೂಲ ಕಲ್ಪಿಸಬೇಕು ಎಂದು ತಿಳಿಸಿದರು.

ಸಮಸ್ಯೆಗಳಿಗೆ ಪರಿಹಾರ

ಬೀಡಾಡಿ ವಾಹನಗಳ ತೆರವು, ಕಟ್ಟಡ ತ್ಯಾಜ್ಯ ವಿಲೇವಾರಿ, ಟ್ರಾನ್ಸ್‌ಫಾರ್ಮರ್‌ಗಳ ಸ್ಥಳಾಂತರ, ಬಸ್ ನಿಲ್ದಾಣಗಳ ಸ್ಥಳ ಬದಲಾವಣೆ, ನೀರು ಸರಬರಾಜು ಮತ್ತು ಒಳಚರಂಡಿ ಪೈಪ್‌ಲೈನ್‌ಗಳ ದುರಸ್ತಿ, ಜೋತುಬಿದ್ದಿರುವ ತಂತಿಗಳ ತೆರವುವಿಕೆ, ವಿದ್ಯುತ್ ತಂತಿಗಳ ಸರಿಪಡಿಸುವಿಕೆ ಸೇರಿದಂತೆ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವ ವಿವಿಧ ಸಮಸ್ಯೆಗಳನ್ನು ಪರಿಹರಿಸುವ ಕಾರ್ಯಗಳನ್ನು ಕೈಗೊಳ್ಳಲಾಗುವುದು ಎಂದರು.

ಅಭಿಯಾನವು ಒಂದು ವಾರಕ್ಕೆ ಸೀಮಿತವಾಗದೆ ವಾರ್ಡ್‌ಗಳಲ್ಲಿ ಸ್ವಚ್ಛತೆ ಮತ್ತು ಮೂಲಸೌಕರ್ಯಗಳ ಗುಣಮಟ್ಟವನ್ನು ನಿರಂತರವಾಗಿ ಕಾಪಾಡುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು ಎಂದು ಆಯುಕ್ತರು ಸೂಚಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ನೀರು ಹರಿಸಿದ್ದಕ್ಕೆ ₹1.5 ಲಕ್ಷ ಕೋಟಿ ಕೊಡಿ: ರಾಜಸ್ಥಾನಕ್ಕೆ ಪಂಜಾಬ್‌ ತಾಕೀತು, ಕರ್ನಾಟಕದಿಂದ ತಮಿಳುನಾಡಿಗೆ ಈ ಬೇಡಿಕೆ ಸಾಧ್ಯವೇ?
ವೈದ್ಯರ ನಿರ್ಲಕ್ಷ್ಯ ಆರೋಪ; ಚಿಕಿತ್ಸೆ ಬಳಿಕ ಒಂದು ವರ್ಷದ ಮಗು ಕೋಮಾಗೆ! ನ್ಯಾಯಕ್ಕಾಗಿ ಆಸ್ಪತ್ರೆಯಲ್ಲೇ ಮಲಗಿದ ಕುಟುಂಬಸ್ಥರು!