ಚಿತ್ರದುರ್ಗ (ಸೆ.02): ಚಿತ್ರದುರ್ಗ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿಗೆ ಇಂದು ಮತ್ತೆ ಇಡಿ ಬಿಗ್ ಶಾಕ್ ಕೊಟ್ಟಿದೆ. ಚಿತ್ರದುರ್ಗದ ಚಳ್ಳಕೆರೆಯ ಪಟ್ಟಣದಲ್ಲಿರುವ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸದ್ಯ ಇಡಿ ವಶದಲ್ಲೇ ಇರುವ ಕಾಂಗ್ರೆಸ್ ಶಾಸಕನಿಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ಸದ್ಯ ಅವರ ಮನೆಯಲ್ಲಿ ಶೋಧ ನಡೆಸಿದ್ದು, ಕಾರುಗಳ ಜಪ್ತಿ ಸೇರಿ ಇತರೆ ಕ್ರಮಕ್ಕೆ ಇಡಿ ಅಧಿಕಾರಿಗಳು ಆಗಮಿಸಿದ್ದಾರೆ. ಆನ್‌ಲೈನ್ ಬೆಟ್ಟಿಂಗ್ ಮತ್ತು ಅಕ್ರಮ ಹಣ ವರ್ಗಾವಣೆ ಕೇಸ್ ಹಿನ್ನೆಲೆ ಈ ದಾಳಿ ನಡೆದಿದೆ.
3 ವಿದೇಶಗಳಲ್ಲಿ ವ್ಯವಹಾರ?: ಅಕ್ರಮ ಆನ್‌ಲೈನ್ ಬೆಟ್ಟಿಂಗ್ ಮತ್ತು ಅಕ್ರಮ ಹಣ ವರ್ಗಾವಣೆ ಆರೋಪದಡಿ ಬಂಧನಕ್ಕೆ ಒಳಗಾಗಿರುವ ಚಿತ್ರದುರ್ಗ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಶ್ರೀಲಂಕಾ, ನೇಪಾಳ ಮತ್ತು ಜಾರ್ಜಿಯಾ ದೇಶಗಳ ಕೆಲ ಶೆಲ್ ಕಂಪನಿಗಳು ಮತ್ತು ಕ್ಯಾಸಿನೊಗಳೊಂದಿಗೆ ಸಂಪರ್ಕ ಹೊಂದಿರುವ ಶಂಕೆ ವ್ಯಕ್ತವಾಗಿದೆ.
ಸೈಬರ್ ವಂಚನೆಯ ಹಣವನ್ನು ಬಳಸಿಕೊಂಡು ಕ್ರೆಡಿಟ್ ಕಾರ್ಡ್ ಪಾವತಿ ತೋರಿಸುವ ಮುಖಾಂತರ ವೀರೇಂದ್ರಗೆ ಸೇರಿದ ಕ್ಯಾಸಿನೋಗಳ ನಗದು ಹಣವನ್ನು ಕಾನೂನು ಬದ್ಧ ಆದಾಯವಾಗಿ ಪರಿವರ್ತಿಸಿರುವ ಶಂಕೆಯೂ ವ್ಯಕ್ತವಾಗಿದೆ. ಇ.ಡಿ.ಶೋಧನೆ ವೇಳೆ ವೀರೇಂದ್ರ ಸಾಗರೋತ್ತರ ವ್ಯವಹಾರ ನಡೆಸುತ್ತಿರುವ ಸಂಬಂಧ ಕೆಲ ದಾಖಲೆಗಳು ಪತ್ತೆಯಾಗಿವೆ ಎನ್ನಲಾಗಿದೆ. ಹೀಗಾಗಿ ಇ.ಡಿ. ಅಧಿಕಾರಿಗಳು ಈ ಶೆಲ್ ಕಂಪನಿಗಳು ಹಾಗೂ ಸಾಗರೋತ್ತರ ವ್ಯವಹಾರದ ಬಗ್ಗೆ ಕೆ.ಸಿ.ವೀರೇಂದ್ರ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ