
ಬೆಂಗಳೂರು, (ಜುಲೈ.13): ಕೊರೋನಾ ಕಾಟದಿಂದಾಗಿ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್ ಡೌನ್ ಮಾಡುವುದಾಗಿ ಕರ್ನಾಟಕ ಸರ್ಕಾರ ಘೋಷಣೆ ಮಾಡಿದೆ.
ಬೆಂಗಳೂರು ನಗರದಲ್ಲಿ ಜುಲೈ 14ರ ಮಂಗಳವಾರ ರಾತ್ರಿ 8 ಗಂಟೆಯಿಂದ ಜುಲೈ 23ರ ತನಕ ಒಂದು ವಾರದ ಲಾಕ್ ಡೌನ್ ಮಾಡುವುದಾಗಿ ಘೋಷಣೆ ಮಾಡಿದೆ.
ಯಾವ್ಯಾವ ಜಿಲ್ಲೆಗಳು ಲಾಕ್‌ಡೌನ್ ಆಗಲಿದೆ? ಇಲ್ಲಿದೆ ಮಾಹಿತಿ
ಬೆಂಗಳೂರು ನಗರದಲ್ಲಿನ ಲಾಕ್ ಡೌನ್ ಒಂದು ವಾರದ ಬಳಿಕ ಮುಂದುವರೆಯಲಿದೆ ಎಂಬ ಆತಂಕದಲ್ಲಿ ಜನರು ಊರುಗಳತ್ತ ಹೊರಟಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಟ್ವೀಟ್ ಮಾಡುವ ಮೂಲಕ ಸ್ಪಷ್ಟನೆಯನ್ನು ಕೊಟ್ಟಿದ್ದಾರೆ.
ಮತ್ತೊಮ್ಮೆ ಸ್ಪಷ್ಟನೆ ಕೊಟ್ಟ ಸಿಎಂ
ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮಂಗಳವಾರದಿಂದ ಜಾರಿಗೆ ಬರಲಿರುವ ಲಾಕ್‌ಡೌನ್ ಕೇವಲ ಒಂದು ವಾರಕ್ಕೆ ಸೀಮಿತವಾಗಿರುತ್ತದೆ. ಅದನ್ನು ವಿಸ್ತಿಸುವ ಪ್ರಸ್ತಾಪ ಸರ್ಕಾರ ಮುಂದಿಲ್ಲ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.
ಕೋವಿಡ್ ಟಾಸ್ಕ್ ಫೋರ್ಸ್ ತಂಡದೊಂದಿಗೆ ಇಂದು (ಸೋಮವಾರ) ಚೆರ್ಚೆ ನಡೆಸಿದ ಬಳಿಕ ಅವರು ಈ ಸ್ಪಷ್ಟನೆ ನೀಡಿದ್ದಾರೆ. ಯಾವುದೇ ಕಾರಣಕ್ಕೂ ಒಂದು ವಾರಕ್ಕಿಂತ ಹೆಚ್ಚಿನ ಅವಧಿಗೆ ಲಾಕ್‌ಡೌನ್ ವಿಸ್ತರಿಸುವುದಿಲ್ಲ. ಆದ್ದರಿಂದ ಜನರು ಆತಂಕಪಡುವ ಅವಶ್ಯಕತೆ ಇಲ್ಲ ಎಂದು ಟ್ವೀಟ್ ಮಾಡಿದ್ದಾರೆ. ಅಲ್ಲದೇ ಜನರು ವದಂತಿಗಳಿಗೆ ಕಿವಿಗೊಡಬಾರದು. ಸರ್ಕಾರದೊಂದಿಗೆ ಸಹಕರಿಸಬೇಕು ಎಂದು ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ