
ಬೆಂಗಳೂರು : ಯಲಹಂಕದ ಕೋಗಿಲು ಲೇಔಟ್‌ನಲ್ಲಿ ಅಕ್ರಮವಾಗಿ ನೆಲೆಸಿದ 167 ಕುಟುಂಬಗಳ ಪೈಕಿ 25 ಕುಟುಂಬಕ್ಕೆ ಶುಕ್ರವಾರ ವಸತಿ ಇಲಾಖೆಯಿಂದ ಹಕ್ಕುಪತ್ರ ವಿತರಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಕೋಗಿಲು ಅಕ್ರಮ ನಿವಾಸಿ ಪ್ರಕರಣಗಳಿಗೆ ಸಂಬಂಧಿಸಿ 25 ಕುಟುಂಬಕ್ಕೆ ವಸತಿ ಇಲಾಖೆಯಿಂದ ಹಕ್ಕುಪತ್ರ ವಿತರಣೆಗೆ ತೀರ್ಮಾನಿಸಲಾಗಿದೆ. ಹೀಗಾಗಿ, ಶುಕ್ರವಾರ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಕೇಂದ್ರ ಕಚೇರಿ ಆವರಣದಲ್ಲಿರುವ ಡಾ.ರಾಜಕುಮಾರ್ ಗಾಜಿನ ಮನೆ ಸಭಾಂಗಣದಲ್ಲಿ ಹಕ್ಕುಪತ್ರ ವಿತರಣೆಗೆ ತಯಾರಿ ಮಾಡಿಕೊಳ್ಳಲಾಗಿದೆ.
ಕಂದಾಯ ಸಚಿವ ಕೃಷ್ಣ ಬೈರೇಗೌಡ ಹಾಗೂ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹಕ್ಕುಪತ್ರ ವಿತರಣೆ ಸಾಧ್ಯತೆ ಇದೆ. ಸಂಜೆ 4 ಗಂಟೆಗೆ ಸಮಾರಂಭ ಆಯೋಜಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶುಕ್ರವಾರ ಬಳ್ಳಾರಿ ಹಾಗೂ ವಿಜಯಪುರ ಜಿಲ್ಲೆಯ ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಆ ಬಳಿಕ ಸಂಜೆ 5.45ರ ಸುಮಾರಿಗೆ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ. ಅವರೂ ಹಕ್ಕುಪತ್ರ ವಿತರಣೆ ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಾಧ್ಯತೆ ಇದೆ.
ಕಾರ್ಯಕ್ರಮದ ವೇದಿಕೆ ಮೇಲೆ 8 ರಿಂದ 10 ಮಂದಿ ಗಣ್ಯರ ಆಸೀನಕ್ಕೆ ವ್ಯವಸ್ಥೆ ಮಾಡಲಾಗಿದೆ. ವೇದಿಕೆ ಮುಂಭಾಗದಲ್ಲಿ ಸುಮಾರು 100 ಮಂದಿಗೆ ಕುಳಿತುಕೊಳ್ಳುವುದಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
- ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಅಕ್ರಮ ಮನೆಗಳನ್ನು ಧ್ವಂಸಗೊಳಿಸಿದ್ದ ಪಾಲಿಕೆ
- ಇದು ‘ಬುಲ್ಡೋಜರ್ ನ್ಯಾಯ’ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಆಕ್ರೋಶ
- ಬೆನ್ನಲ್ಲೇ, ಮನೆ ಕಳೆದುಕೊಂಡವರಿಗೆ ಸೂರು ಕಲ್ಪಿಸಲು ಸರ್ವೇ ನಡೆಸಿದ್ದ ರಾಜ್ಯ ಸರ್ಕಾರ
- ರಾಜೀವ್ ಗಾಂಧಿ ವಸತಿ ನಿಗಮದಿಂದ ಫ್ಲ್ಯಾಟ್ ನೀಡುವ ಬಗ್ಗೆ ಚರ್ಚೆ. ಭಾರಿ ವಿರೋಧ
- ಸಮೀಕ್ಷೆಯಲ್ಲಿ 167 ಕುಟುಂಬಗಳ 25 ಮಂದಿ ಮಾತ್ರ ಅರ್ಹರು ಪತ್ತೆ. ಅವರಿಗೆ ಹಕ್ಕುಪತ್ರ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ