
ಬೆಂಗಳೂರು (ನ.21) : ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಉಳಿದಂತೆ ಯಾರೊಬ್ಬರ ಬಿಪಿಎಲ್ ಪಡಿತರ ಚೀಟಿಯನ್ನೂ ರದ್ದು ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಹಾರ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಅನರ್ಹರ ಬಿಪಿಎಲ್ ಕಾರ್ಡ್ ರದ್ದತಿ ಮಾಡುವ ರಾಜ್ಯ ಸರ್ಕಾರದ ಅಭಿಯಾನಕ್ಕೆ ಭಾರೀ ಜನಾಕ್ರೋಶ ಮತ್ತು ಈ ಅಭಿಯಾನದ ವಿರುದ್ಧ ಬಿಜೆಪಿ ನಾಯಕರು ಸರಣಿ ವಾಗ್ದಾಳಿ ನಡೆಸಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಸೂಚನೆ ನೀಡಿದ್ದಾರೆ.
ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿದಾರರರಿಗೆ ಬಿಪಿಎಲ್ ಕಾರ್ಡ್ ನೀಡಿದ್ದರೆ ಅದನ್ನು ರದ್ದುಪಡಿಸಿ ಎಪಿಎಲ್‌ಗೆ ಪರಿವರ್ತಿಸಬೇಕು. ಇವರನ್ನು ಹೊರತುಪಡಿಸಿದಂತೆ ಉಳಿದ ಯಾವುದೇ ಕುಟುಂಬದವರ ಪಡಿತರ ಚೀಟಿ ರದ್ದಾಗಿದ್ದರೆ ತಕ್ಷಣ ವಾಪಸು ನೀಡುವಂತೆ ಮುಖ್ಯಮಂತ್ರಿಗಳು ಆದೇಶಿಸಿರುವುದಾಗಿ ಮುಖ್ಯಮಂತ್ರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ಬಿಪಿಎಲ್ ಗದ್ದಲದ ನಡುವೆಯೇ ರೇಷನ್ ಕಾರ್ಡ್‌ಗಳ ಡಿಜಿಟಲೀಕರಣ ದೇಶವ್ಯಾಪಿ 5.8 ಕೋಟಿ ನಕಲಿ ಕಾರ್ಡ್ ಕೇಂದ್ರ ರದ್ದು!
ಬಡ ಕುಟುಂಬಗಳ ಪಡಿತರ ಚೀಟಿಗಳನ್ನು ವಿನಾಕಾರಣ ರದ್ದು ಮಾಡಿದರೆ ಆಹಾರ ಇಲಾಖೆ ಅಧಿಕಾರ ವಿರುದ್ಧ ಕ್ರಮ ಜರುಗಿಸುವುದಾಗಿ ಮುಖ್ಯಮಂತ್ರಿಗಳು ಎಚ್ಚರಿಕೆ ನೀಡಿದ್ದಾರೆ.
ಇನ್ನಾರದೇ ಕಾರ್ಡ್ ರದ್ದು ಮಾಡ್ಬೇಡಿ: ಸಿದ್ದು ತಾಕೀತು
ಈಗಾಗ್ಲೇ ಬಿಪಿಎಲ್ ಕಾರ್ಡ್ ರದ್ದಾಗಿದ್ದರೆ ಮರಳಿಸಬೇಕು
ಇವರ ಬಿಪಿಎಲ್ ಕಾರ್ಡ್ ಬಚಾವ್?
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ