ಮೂರುಸ್ಥಾನ ಭರ್ತಿಗಷ್ಟೇ ಸಂಪುಟ ವಿಸ್ತರಣೆ ಸೀಮಿತ: ನಳಿನ್

Kannadaprabha News   | Asianet News
Published : Aug 01, 2020, 10:14 AM ISTUpdated : Aug 01, 2020, 04:53 PM IST
ಮೂರುಸ್ಥಾನ ಭರ್ತಿಗಷ್ಟೇ ಸಂಪುಟ ವಿಸ್ತರಣೆ ಸೀಮಿತ: ನಳಿನ್

ಸಾರಾಂಶ

ರಾಜ್ಯ ಸಚಿವ ಸಂಪುಟದ ವಿಸ್ತರಣೆ ಮತ್ತು ಸುಳ್ಯ ಶಾಸಕ ಎಸ್‌. ಅಂಗಾರರಿಗೆ ಸಚಿವ ಸ್ಥಾನ ನೀಡುವುದು ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟಿರುವಂತದ್ದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್‌ ಕುಮಾರ್‌ ಕಟೀಲ್‌ ಹೇಳಿದರು.

ಸುಳ್ಯ(ಆ.01): ರಾಜ್ಯ ಸಚಿವ ಸಂಪುಟದ ವಿಸ್ತರಣೆ ಮತ್ತು ಸುಳ್ಯ ಶಾಸಕ ಎಸ್‌. ಅಂಗಾರರಿಗೆ ಸಚಿವ ಸ್ಥಾನ ನೀಡುವುದು ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟಿರುವಂತದ್ದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್‌ ಕುಮಾರ್‌ ಕಟೀಲ್‌ ಹೇಳಿದರು.

"

ಅವರು ಗ್ರಾಮ ವಿಕಾಸ ಮಂಗಳೂರು ವಿಭಾಗ, ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು, ಸಹಕಾರ ಭಾರತಿ ದ.ಕ. ಮತ್ತು ಸುಳ್ಯ ಕೃಷಿ ಉತ್ಪನ್ನ ಮಾರುಕಟ್ಟೆಸಮಿತಿ ಇದರ ಆಶ್ರಯದಲ್ಲಿ ಸುಳ್ಯ ಎಪಿಎಂಸಿ ಸಭಾಂಗಣದಲ್ಲಿ ನಡೆಯುತ್ತಿರುವ ಆತ್ಮ ನಿರ್ಭರ ಭಾರತಕ್ಕಾಗಿ ಉದ್ಯೋಗ ನೈಪುಣ್ಯ ತರಬೇತಿ ಶಿಬಿರಕ್ಕೆ ಶುಕ್ರವಾರ ಭೇಟಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಹಗ್ಗದಿಂದ ಎಳೆದು ತಂದು ಸೋಂಕಿತನ ಅಂತ್ಯಕ್ರಿಯೆ!

ಶಾಸಕ ಎಸ್‌. ಅಂಗಾರರಿಗೆ ಮಂತ್ರಿ ಸ್ಥಾನ ಸಿಗುವಂತೆ ನಮ್ಮ ಪ್ರಯತ್ನವಿರುತ್ತದೆ. ಈ ಬಾರಿ ಸಂಪುಟ ಪುನಾರಚನೆ ಆಗುವ ಸಾಧ್ಯತೆಯಿಲ್ಲ. ಮೂರು ಸ್ಥಾನಗಳನ್ನು ಭರ್ತಿ ಮಾಡಲಷ್ಟೆಸಂಪುಟ ವಿಸ್ತರಣೆ ಸೀಮಿತವಾಗುತ್ತದೆ. ಈ ಬಗ್ಗೆ ಮುಖ್ಯಮಂತ್ರಿಗಳು ಬಿಜೆಪಿ ಹೈಕಮಾಂಡ್‌ ಜತೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳುತ್ತಾರೆ ಎಂದು ಹೇಳಿದರು.

ದೇಶದಲ್ಲಿ ಕರೋನಾ ಮಹಾಮಾರಿಯಿಂದ ಆರ್ಥಿಕ ಕುಸಿತವಾಗಿದೆ. ಜನ ಸಾಮಾನ್ಯರಿಗೆ ತೊಂದರೆ ಆಗಬಾರದು ಎನ್ನುವ ನಿಟ್ಟಿನಲ್ಲಿ ಪ್ರಧಾನಮಂತ್ರಿಗಳು ನೀಡಿದ 20 ಲಕ್ಷ ಕೋಟಿಗಳ ಅನುದಾನ ಮುಂದಿನ ದಿನಗಳಲ್ಲಿ ಭಾರತದ ಸ್ವಾಭಿಮಾನದ ಸಂಕೇತವಾಗಿ ಮತ್ತು ಯುವಜನತೆಯ ಉದ್ಯಮಶೀಲತೆಯ ಪ್ರೇರಣೆಗಾಗಿ ಆತ್ಮನಿರ್ಭರ ಭಾರತ ಎನ್ನುವ ಘೋಷಣೆ ಮಾಡಿದೆ. ಸ್ವದೇಶಿ ಚಿಂತನೆಯ ಆಧಾರದಲ್ಲಿ ಉದ್ದಿಮೆಗಳ ಮೂಲಕ ಸ್ವ ಉದ್ಯೋಗ ಸೃಷ್ಟಿಯ ಅಭಿನಂದನೀಯ ಕಾರ್ಯ ಶಿಬಿರದ ಮೂಲಕ ನಡೆಯುತ್ತಿದೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ