ಗ್ಯಾರಂಟಿ ಯೋಜನೆಗಳಿಗೆ ಬೆಚ್ಚಿ ವಿಪಕ್ಷಗಳ ಪಲಾಯನ: ಸಲೀಂ ಅಹ್ಮದ್ ವ್ಯಂಗ್ಯ

By Kannadaprabha NewsFirst Published Jul 21, 2023, 6:20 AM IST
Highlights

ರಾಜ್ಯದ ಎಲ್ಲಾ ವರ್ಗದ ಜನರಿಗೆ ಕಾಂಗ್ರೆಸ್‌ ಸರ್ಕಾರ ಕೊಟ್ಟಿರುವ ಐದು ಗ್ಯಾರಂಟಿ ಯೋಜನೆ ಬಿಜೆಪಿಗೆ ನಡುಕ ಹುಟ್ಟಿಸಿದೆ. ಜನಸಾಮಾನ್ಯರು ಮೆಚ್ಚುವಂತಹ ಈ ಐದು ಗ್ಯಾರಂಟಿಗಳನ್ನು ಕೊಟ್ಟಿರುವುದು ವಿಪಕ್ಷಗಳಿಗೆ ತಡೆದುಕೊಳ್ಳಲು ಆಗುತ್ತಿಲ್ಲ. ಹೀಗಾಗಿ ಸದನದ ಕಲಾಪದಲ್ಲಿ ಭಾಗವಹಿಸದೆ ಪಲಾಯನವಾದ ಮಾಡಿವೆ ಎಂದು ಆಡಳಿತ ಪಕ್ಷದ ಮುಖ್ಯ ಸಚೇತಕ ಸಲೀಂ ಅಹ್ಮದ್‌ ವ್ಯಂಗ್ಯವಾಡಿದರು.

ವಿಧಾನ ಪರಿಷತ್‌ (ಜು.21) :  ರಾಜ್ಯದ ಎಲ್ಲಾ ವರ್ಗದ ಜನರಿಗೆ ಕಾಂಗ್ರೆಸ್‌ ಸರ್ಕಾರ ಕೊಟ್ಟಿರುವ ಐದು ಗ್ಯಾರಂಟಿ ಯೋಜನೆ ಬಿಜೆಪಿಗೆ ನಡುಕ ಹುಟ್ಟಿಸಿದೆ. ಜನಸಾಮಾನ್ಯರು ಮೆಚ್ಚುವಂತಹ ಈ ಐದು ಗ್ಯಾರಂಟಿಗಳನ್ನು ಕೊಟ್ಟಿರುವುದು ವಿಪಕ್ಷಗಳಿಗೆ ತಡೆದುಕೊಳ್ಳಲು ಆಗುತ್ತಿಲ್ಲ. ಹೀಗಾಗಿ ಸದನದ ಕಲಾಪದಲ್ಲಿ ಭಾಗವಹಿಸದೆ ಪಲಾಯನವಾದ ಮಾಡಿವೆ ಎಂದು ಆಡಳಿತ ಪಕ್ಷದ ಮುಖ್ಯ ಸಚೇತಕ ಸಲೀಂ ಅಹ್ಮದ್‌ ವ್ಯಂಗ್ಯವಾಡಿದರು.

ಬಜೆಟ್‌ ಮೇಲಿನ ಚರ್ಚೆ ಸಂದರ್ಭದಲ್ಲಿ ಮಾತನಾಡಿದ ಅವರು, ಸಮಾಜದ ಎಲ್ಲಾ ವರ್ಗದ ಜನ ರಾಜ್ಯ ಕಾಂಗ್ರೆಸ್‌ ಸರ್ಕಾರಕ್ಕೆ ಸಹಕಾರ ಕೊಟ್ಟಿದ್ದಾರೆ. ಇದರಿಂದ ಬಿಜೆಪಿ ನಾಯಕರಿಗೆ ನಡುಕ ಉಂಟಾಗಿದೆ. ಹಾಗಾಗಿ ಕಾಂಗ್ರೆಸ್‌ ಆಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಸ್ವಲ್ಪ ಸಮಯವೂ ಕೊಡದೆ ಯೋಜನೆಗಳ ಜಾರಿಗೆ ಒತ್ತಡ ಹೇರುವ ಪ್ರಯತ್ನ ಮಾಡುತ್ತಿದ್ದಾರೆ. ಆದರೆ, ಕೇಂದ್ರದಲ್ಲಿ 9 ವರ್ಷದಿಂದ ಅಧಿಕಾರ ನಡೆಸುತ್ತಿದ್ದರೂ ಬಿಜೆಪಿ ಯಾವುದೇ ಅಭಿವೃದ್ಧಿ ಮಾಡದಿರುವ ಬಗ್ಗೆ ಪ್ರಶ್ನಿಸುವ ಧೈರ್ಯ ಇಲ್ಲಿನ ಬಿಜೆಪಿಯವರಿಗಿಲ್ಲ ಎಂದು ಟೀಕಿಸಿದರು.

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ 20 ಸ್ಥಾನ: ಸಲೀಂ ಅಹ್ಮದ್‌

ಪ್ರಧಾನಿ ನರೇಂದ್ರ ಮೋದಿ ಅವರು, ಜನರ ಖಾತೆಗೆ 15 ಲಕ್ಷ ಹಣ ಹಾಕಲಿಲ್ಲ. ವರ್ಷಕ್ಕೆ 2 ಕೋಟಿಯಂತೆ 9 ವರ್ಷಗಳಲ್ಲಿ 18 ಕೋಟಿ ಉದ್ಯೋಗ ಕೊಡಬೇಕಿತ್ತು. 18 ಲಕ್ಷ ಉದ್ಯೋಗವನ್ನೂ ಕೊಡಲಿಲ್ಲ. ರೈತರ ಆದಾಯ ದ್ವಿಗುಣವನ್ನೂ ಮಾಡಲಿಲ್ಲ. ಆದರೆ, ಅಧಿಕಾರಕ್ಕೆ ಬಂದು 50 ದಿನ ಕಳೆಯದಿದ್ದರೂ ಬಿಜೆಪಿಗರು ಕಾಂಗ್ರೆಸ್‌ ಸರ್ಕಾರದ ವಿರುದ್ಧ ಟೀಕೆ ಮಾಡುತ್ತಿದ್ದಾರೆ. ಇದು ಕಾಂಗ್ರೆಸ್‌ ಗ್ಯಾರಂಟಿಗಳು ಅವರಲ್ಲಿ ನಡುಕ ಉಂಟಿಸಿವೆ ಎನ್ನುವುದಕ್ಕೆ ಸಾಕ್ಷಿ ಎಂದರು.

ಗ್ಯಾರಂಟಿ ಯೋಜನೆಗಳಿಂದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಜನಸಾಮಾನ್ಯರು ವೋಟು ಹಾಕುತ್ತಾರೆ ಎಂಬ ಆತಂಕ ಬಿಜೆಪಿಯವರದ್ದು. ಅದಕ್ಕಾಗಿ ಈಗಿನಿಂದಲೇ ನಮ್ಮ ಐದು ಗ್ಯಾರಂಟಿಗಳ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. ಬಡ ಮಹಿಳೆಯರಿಗೆ, ನಿರುದ್ಯೋಗಿ ಯುವಜನರಿಗೆ ಯೋಜನೆ ರೂಪಿಸಿದ್ದು ಮಹಾ ಅಪರಾಧ ಎನ್ನುವಂತೆ ವಿಪಕ್ಷಗಳು ಟೀಕಿಸುತ್ತಿರುವುದು ಬೇಸರದ ಸಂಗತಿ. ನಮ್ಮ ಜನಪರ ಯೋಜನೆಯಿಂದಾಗಿ ರಾಜ್ಯದ ಒಟ್ಟು 1.30 ಕೋಟಿ ಕುಟುಂಬಗಳಿಗೆ ಸಹಾಯವಾಗುತ್ತಿದೆ. ಪ್ರತಿ ತಿಂಗಳು ಪ್ರತಿ ಕುಟುಂಬಕ್ಕೆ 4ರಿಂದ 5 ಸಾವಿರ ರು.ಸಿಗುವಂತಾಗಿದೆ. ಇಂತಹ ದೊಡ್ಡ ಬದಲಾವಣೆ ಮಾಡಿದ ಐತಿಹಾಸಿಕ ಬಜೆಟ್‌ನ್ನು ಸ್ವಾಗತಿಸದೇ ವಿಧಿಯಿಲ್ಲ. ಹೀಗಾಗಿ ಬಿಜೆಪಿಯವರು ಸದನಕ್ಕೆ ಬಾರದೆ ಪಲಾಯನ ಮಾಡಿದ್ದಾರೆ ಎಂದು ವ್ಯಂಗ್ಯವಾಡಿದರು.

ಗೆದ್ದಿದ್ದೇವೆಂದು ಬೀಗದೇ ಭ್ರಷ್ಟಾಚಾರ ಮುಕ್ತ ಆಡಳಿತ ನೀಡುತ್ತೇವೆ: ಸಲೀಂ ಅಹ್ಮದ್‌

click me!