ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಎಲೆವೆಟೆಡ್ ಫ್ಲೈಓವರ್( Elevated flyover) ನಿರ್ಮಾಣ ಮಾಡುವ ಕುರಿತಂತೆ ವನ್ಯಜೀವಿ ಮಂಡಳಿ ಸಭೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಬೆಂಗಳೂರು ರಿಂಗ್ ರೋಡ್ ರಸ್ತೆ ಪ್ರಸ್ತಾಪಿಸಿದ್ದು, ಇದಕ್ಕೆ ವನ್ಯಜೀವಿ ಮಂಡಳಿ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು (ನ.3) : ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಎಲೆವೆಟೆಡ್ ಫ್ಲೈಓವರ್( Elevated flyover) ನಿರ್ಮಾಣ ಮಾಡುವ ಕುರಿತಂತೆ ವನ್ಯಜೀವಿ ಮಂಡಳಿ ಸಭೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಬೆಂಗಳೂರು ರಿಂಗ್ ರೋಡ್ ರಸ್ತೆ ಪ್ರಸ್ತಾಪಿಸಿದ್ದು, ಇದಕ್ಕೆ ವನ್ಯಜೀವಿ ಮಂಡಳಿ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ರಿಂಗ್ ರೋಡ್ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ ಅರಣ್ಯ ಪ್ರದೇಶದಲ್ಲಿ ಹಾದು ಹೋಗಿದೆ. ಹೀಗಾಗಿ ಎಲೆವೆಟೆಡ್ ಪ್ಲೈಓವರ್ ನಿರ್ಮಿಸುವ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ವನ್ಯಜೀವಿ ಮಂಡಳಿ ಸಭೆಯಲ್ಲಿ ಪ್ರಸ್ತಾಪಿಸಿತ್ತು. ಆದರೆ ಸಭೆಯಲ್ಲಿ ಎಲೆವೆಟೆಡ್ ನಿರ್ಮಾಣಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ವನ್ಯಜೀವಿ ಮಂಡಳಿ ಸದಸ್ಯರು, ಬನ್ನೇರುಘಟ್ಟದಲ್ಲಿ ಫ್ಲೈ ಓವರ್ ನಿರ್ಮಾಣಕ್ಕೆ ಅವಕಾಶ ಕೊಟ್ಟರೆ, ಬಂಡಿಪುರ, ನಾಗರಹೊಳೆಯಲ್ಲೂ ಕೇಳುವ ಸಾಧ್ಯತೆ ಇದೆ. ಹೀಗಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಸ್ತಾಪಕ್ಕೆ ಅನುಮತಿ ನೀಡಬಾರದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಎದುರೇ ಒತ್ತಾಯಿಸಿದರು.
undefined
ವನ್ಯಜೀವಿ ಮಂಡಳಿ ಸದಸ್ಯರ ಅಭಿಪ್ರಾಯಕ್ಕೆ ಮನ್ನಣೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ ಅವರು, ಪರ್ಯಾಯ ವ್ಯವಸ್ಥೆ ಬಗ್ಗೆ ಚಿಂತನೆ ಮಾಡಿ. ನಂತರ ಅರಣ್ಯ ಪ್ರದೇಶದಲ್ಲಿ ಎಲೆವೆಟೆಡ್ ಫ್ಲೈ ಓವರ್ ನಿರ್ಮಿಸೋದು ಬೇಡ ಎಂದು ತಿಳಿಸಿದರು.
ತಾಯಿ ಇದ್ದರೂ ದೂರಾದ ಹುಲಿ ಮರಿಯನ್ನು ಆರೈಕೆ ಮಾಡಿದ್ದೇ ಬನ್ನೇರುಘಟ್ಟ ಜೈವಿಕ ಉದ್ಯಾನವನ ಸಿಬ್ಬಂದಿ!