
ಬೆಂಗಳೂರು(ಜು.16): ಶಾಲಾ ಮಕ್ಕಳಿಗೆ ಕಳಪೆ ಮೊಟ್ಟೆಪೂರೈಸುತ್ತಿರುವ ಬಗ್ಗೆ ರಾಜ್ಯಾದ್ಯಂತ ತನಿಖೆಗೆ ಆದೇಶಿಸಲಾಗಿದೆ. ತನಿಖಾ ವರದಿ ಆಧಾರದ ಮೇಲೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ವಿಧಾನಸೌಧದಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ‘ಕಳಪೆ ಮೊಟ್ಟೆ ವಿತರಿಸುತ್ತಿರುವ ಪ್ರಕರಣಗಳು ವರದಿಯಾದ ಜಿಲ್ಲೆಗಳಷ್ಟೇ ಅಲ್ಲ ರಾಜ್ಯಾದ್ಯಂತ ತನಿಖೆಗೆ ಸೂಚಿಸಿದ್ದೇನೆ. ಇದಕ್ಕಾಗಿ ಪ್ರತ್ಯೇಕ ತನಿಖಾ ತಂಡವನ್ನೂ ರಚನೆ ಮಾಡಲಾಗಿದೆ. ತಂಡವು ವರದಿ ನೀಡಿದ ಬಳಿಕ ಕ್ರಮ ಕೈಗೊಳ್ಳಲಾಗುವುದು’ ಎಂದರು.
ಸುವರ್ಣ ನ್ಯೂಸ್ ಇಂಪ್ಯಾಕ್ಟ್: ಅಂಗನವಾಡಿಗೆ ಕೊಳೆತ ಮೊಟ್ಟೆ ಸರಬರಾಜು ಮಾಡಿದ ಗುತ್ತಿಗೆದಾರ ಕಪ್ಪುಪಟ್ಟಿಗೆ ಸೇರ್ಪಡೆ
‘ಇನ್ನು ಈಗಾಗಲೇ ಕಳಪೆ ಮೊಟ್ಟೆ ಪೂರೈಕೆಯಾಗಿರುವ ಕಡೆಗಳಲ್ಲಿ ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಟೆಂಡರ್ ಕರೆದು ಮೊಟ್ಟೆಪೂರೈಕೆ ಗುತ್ತಿಗೆ ನೀಡಿರುವ ಕಾರಣ ಆಯಾ ಅಧಿಕಾರಿಗಳಿಗೆ ನೋಟಿಸ್ ನೀಡಿ ಕ್ರಮವಹಿಸಲು ತಿಳಿಸಲಾಗಿದೆ. ಇನ್ನು ಮೊಟ್ಟೆಪೂರೈಸಿದ ಗುತ್ತಿಗೆದಾರರಿಗೆ ಈಗಾಗಲೇ ನೋಟಿಸ್ ನೀಡಲಾಗಿದೆ’ ಎಂದು ಹೇಳಿದರು.
‘ಅಂಗನವಾಡಿಗೆ ವಿತರಣೆಯಾಗುವ ಪೌಷ್ಟಿಕ ಆಹಾರದ ಗುಣಮಟ್ಟದ ಬಗ್ಗೆಯೂ ಗಮನಕ್ಕೆ ಬಂದಿದೆ. ಹಲವೆಡೆ ತಿನ್ನಲು ಯೋಗ್ಯವಲ್ಲದ ಆಹಾರ ನೀಡಲಾಗುತ್ತಿದೆ. 3 ವರ್ಷದೊಳಗಿನ ಮಕ್ಕಳಿಗೆ ಅತಿ ಕಳಪೆ ಆಹಾರ ನೀಡುತ್ತಿರುವ ಬಗ್ಗೆ ಈಗಾಗಲೇ ಕ್ರಮಕ್ಕೆ ಸೂಚಿಸಿದ್ದೇನೆ’ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ