ಅಂತಾರಾಜ್ಯ ವಾಹನ ಚಾಲಕರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ

By Suvarna News  |  First Published Aug 6, 2021, 10:38 PM IST

* ಅಂತಾರಾಜ್ಯ ವಾಹನ ಚಾಲಕರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ
* ಸಚಿವ ಎಸ್.ಟಿ.ಸೋಮಶೇಖರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ
* ಕೇರಳ- ತಮಿಳುನಾಡು ಗಡಿ ಭಾಗಕ್ಕೆ ಹೊಂದಿಕೊಂಡಿರುವ ಕೆಕ್ಕನಹಳ್ಳ ಚೆಕ್ ಪೋಸ್ಟ್ ಪರಿಶೀಲಿಸಿದ ಸಚಿವರು
* ಸೋಂಕು ಹರಡದಂತೆ ಕಟ್ಟುನಿಟ್ಟಿನ ಕ್ರಮ ಅನಿವಾರ್ಯ ಎಂದ ಸಚಿವರು


ಚಾಮರಾಜನಗರ, (ಆ.06): ಅಂತಾರಾಜ್ಯದಿಂದ ವಾಹನಗಳಲ್ಲಿ ಬರುವವರು ಕಡ್ಡಾಯವಾಗಿ ಕೋವಿಡ್ ನೆಗಟಿವ್ ವರದಿಯನ್ನು ತಂದಿರಬೇಕು. ಒಂದು ವೇಳೆ ತರದೇ ಇದ್ದರೆ ಮುಲಾಜಿಲ್ಲದೆ ಅವರನ್ನು ವಾಪಸ್ ಕಳುಹಿಸಿ ಎಂದು ಸಚಿವ ಎಸ್.ಟಿ.ಸೋಮಶೇಖರ್ ಅವರು ಜಿಲ್ಲಾಧಿಕಾರಿಗಳ ಸಹಿತ ಪೊಲೀಸ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಕೇರಳ- ತಮಿಳುನಾಡು ಗಡಿ ಭಾಗಕ್ಕೆ ಹೊಂದಿಕೊಂಡಿರುವ ಕೆಕ್ಕನಹಳ್ಳ ಚೆಕ್ ಪೋಸ್ಟ್ ಗೆ ಭೇಟಿ ನೀಡಿದ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು, ತೆಗೆದುಕೊಳ್ಳಲಾದ ಕ್ರಮಗಳ ಬಗ್ಗೆ ಅಧಿಕಾರಿಗಳೊಂದಿಗೆ ಮಾಹಿತಿಯನ್ನು ಪಡೆದುಕೊಂಡರು. ಬಳಿಕ ಮಾತನಾಡಿದ ಸಚಿವರು, ಕೇರಳ ಹಾಗೂ ತಮಿಳುನಾಡು ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳು ದಿನೇ ದಿನೆ ಹೆಚ್ಚಳವಾಗುತ್ತಿದೆ. ಅಲ್ಲಿರುವ ಸೋಂಕು ನಮ್ಮ ರಾಜ್ಯಗಳಿಗೆ ವ್ಯಾಪಿಸದಂತೆ ಕ್ರಮ ವಹಿಸಬೇಕಿದೆ ಎಂದು ತಿಳಿಸಿದರು.

Latest Videos

undefined

ರಾಜ್ಯದಲ್ಲಿ ನೈಟ್, ವೀಕೆಂಡ್‌ ಕರ್ಫ್ಯೂ ಜಾರಿ: ಇಲ್ಲಿದೆ ಹೊಸ ಮಾರ್ಗಸೂಚಿ

ಅಂತಾರಾಜ್ಯ ವಹಿವಾಟು ಸೇರಿದಂತೆ ಯಾವುದೇ ರೀತಿಯ ವ್ಯಾಪಾರಗಳಿಗೆ, ಇನ್ನಿತರ ಚಟುವಟಿಕೆಗೆ ತೊಂದರೆಯಾಗಬಾರದು. ಆದರೆ, ಕೋವಿಡ್ ನಿಯಂತ್ರಣ ಸಂಬಂಧ ಕೆಲವೊಂದು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವುದು ಅನಿವಾರ್ಯ. ಹೀಗಾಗಿ ಅಂತಾರಾಜ್ಯಗಳಿಂದ ಬರುವ ವಾಹನಗಳಲ್ಲಿರುವವರ ಕೋವಿಡ್ ತಪಾಸಣೆ ಕಡ್ಡಾಯವಾಗಿರಬೇಕಲ್ಲದೆ, ನೆಗೆಟಿವ್ ಪ್ರಮಾಣಪತ್ರವನ್ನು ಹೊಂದಿರಬೇಕಾಗುತ್ತದೆ. ಒಂದು ವೇಳೆ ನೆಗೆಟಿವ್ ವರದಿಯನ್ನು ಅವರು ತಾರದೇ ಇದ್ದ ಪಕ್ಷದಲ್ಲಿ ಮುಲಾಜಿಲ್ಲದೆ ವಾಪಸ್ ಕಳುಹಿಸಿ ಎಂದು ಸಚಿವರಾದ ಸೋಮಶೇಖರ್ ಅವರು ಸೂಚನೆಯನ್ನು ನೀಡಿದ್ದಾರೆ. 

ಈ ಸಂದರ್ಭದಲ್ಲಿ ಶಾಸಕರಾದ ಎನ್. ಮಹೇಶ್ ಹಾಗೂ ಜಿಲ್ಲಾಧಿಕಾರಿಗಳು ಸೇರಿದಂತೆ ಇತರ ಅಧಿಕಾರಿಗಳು ಹಾಜರಿದ್ದರು.

click me!