ಕಮಲ್ ಹಾಸನ್‌ ವಿರುದ್ಧ ಕಿಚ್ಚು: ಕನ್ನಡ ಹೋರಾಟಗಾರರಿಗೆ ಎಚ್ಚರಿಕೆ, ಪೊಲೀಸರಿಂದ ನೋಟಿಸ್‌ ಜಾರಿ

Kannadaprabha News   | Kannada Prabha
Published : Jun 19, 2025, 05:11 AM IST
kamal haasan unrealized films chamayam do deewane pyar ke to athi veerapandiyan

ಸಾರಾಂಶ

ನಟ ಕಮಲ್ ಹಾಸನ್‌ ನಟನೆಯ ಥಗ್‌ ಲೈಫ್‌ ಸಿನಿಮಾ ಬಿಡುಗಡೆಗೆ ಸುಪ್ರೀಂ ಕೋರ್ಟ್‌ ಹಸಿರು ನಿಶಾನೆ ತೋರಿದ ಬೆನ್ನಲ್ಲೇ, ಮುಂಜಾಗ್ರತಾ ಕ್ರಮವಾಗಿ ಶಾಂತಿ ಕದಡದಂತೆ ಸೂಚಿಸಿ ಕನ್ನಡಪರ ಸಂಘಟನೆಗಳಿಗೆ ರಾಜಧಾನಿ ಪೊಲೀಸರು ಬುಧವಾರ ನೋಟಿಸ್ ನೀಡಿದ್ದಾರೆ.

ಬೆಂಗಳೂರು (ಜೂ.19): ನಟ ಕಮಲ್ ಹಾಸನ್‌ ನಟನೆಯ ಥಗ್‌ ಲೈಫ್‌ ಸಿನಿಮಾ ಬಿಡುಗಡೆಗೆ ಸುಪ್ರೀಂ ಕೋರ್ಟ್‌ ಹಸಿರು ನಿಶಾನೆ ತೋರಿದ ಬೆನ್ನಲ್ಲೇ, ಮುಂಜಾಗ್ರತಾ ಕ್ರಮವಾಗಿ ಶಾಂತಿ ಕದಡದಂತೆ ಸೂಚಿಸಿ ಕನ್ನಡಪರ ಸಂಘಟನೆಗಳಿಗೆ ರಾಜಧಾನಿ ಪೊಲೀಸರು ಬುಧವಾರ ನೋಟಿಸ್ ನೀಡಿದ್ದಾರೆ. ಕನ್ನಡಪರ ಸಂಘಟನೆ ಮುಖಂಡ, ಮಾಜಿ ಶಾಸಕ ವಾಟಾಳ್ ನಾಗರಾಜ್‌, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣಗೌಡ, ಪ್ರವೀಣ್ ಶೆಟ್ಟಿ, ಕುಮಾರ್‌ ಹಾಗೂ ಶಿವರಾಮೇಗೌಡ ಸೇರಿ ಹಲವು ಮುಖಂಡರಿಗೆ ಪೊಲೀಸರು ನೋಟಿಸ್ ಜಾರಿಗೊಳಿಸಿದ್ದಾರೆ. ಅಲ್ಲದೆ, ಈ ಮುಖಂಡರ ಮನೆಗಳಿಗೆ ಖುದ್ದು ತೆರಳಿ ಶಾಂತಿ ಭಂಗಕ್ಕೆ ಅವಕಾಶ ಕೊಡದಂತೆ ಪೊಲೀಸರು ಸೂಚಿಸಿದ್ದಾರೆ.

ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದ್ದು ಎಂದು ಹೇಳಿ ನಟ ಕಮಲ್ ಹಾಸನ್‌ ವಿವಾದ ಹುಟ್ಟು ಹಾಕಿದ್ದರು. ಈ ಹೇಳಿಕೆ ಖಂಡಿಸಿ ನಟನ ವಿರುದ್ಧ ರಾಜ್ಯದಲ್ಲಿ ತೀವ್ರ ಪ್ರತಿಭಟನೆ ವ್ಯಕ್ತವಾಗಿತ್ತು. ಇದರಿಂದಾಗಿ ಕಮಲ್‌ ಹಾಸನ್ ನಟನೆಯ ಥಗ್ ಲೈಫ್‌ ಸಿನಿಮಾ ಬಿಡುಗಡೆಗೆ ರಾಜ್ಯ ಚಲನಚಿತ್ರ ವಾಣಿಜ್ಯ ಮಂಡಳಿ ನಿರ್ಬಂಧಿಸಿತ್ತು. ಆದರೆ ಚಿತ್ರ ಬಿಡುಗಡೆಗೆ ಇದೀಗ ಸುಪ್ರೀಂಕೋರ್ಟ್ ಆದೇಶಿಸಿದೆ. ಚಿತ್ರ ಬಿಡುಗಡೆ ವಿರೋಧಿಸಿ ಕನ್ನಡಪರ ಸಂಘಟನೆಗಳು ಚಿತ್ರಮಂದಿರ ಬಳಿ ಪ್ರತಿಭಟನೆಗಿಳಿದರೆ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ಉಂಟಾಗಬಹುದು ಎಂದು ಪೊಲೀಸರು ಮುಂಜಾಗ್ರತೆ ವಹಿಸಿದ್ದಾರೆ. ಜತೆಗೆ ಶಾಂತಿ ಭಂಗಕ್ಕೆ ಯತ್ನಿಸಿದರೆ ಕಾನೂನು ಕ್ರಮ ಜರುಗಿಸುವುದಾಗಿ ಕನ್ನಡಪರ ಸಂಘಟನೆಗಳ ಹಲವು ಮುಖಂಡರಿಗೆ ನೋಟಿಸ್ ನೀಡಿ ಎಚ್ಚರಿಕೆಯನ್ನೂ ನೀಡಿದ್ದಾರೆ.

ಶಾಂತಿ ಕದಡದಂತೆ ಪೊಲೀಸರ ಸೂಚನೆ: ನಟ ಕಮಲ್ ಹಾಸನ್‌ ನಟನೆಯ ಥಗ್‌ ಲೈಫ್‌ ಸಿನಿಮಾ ಬಿಡುಗಡೆಗೆ ಸುಪ್ರೀಂ ಕೋರ್ಟ್‌ ಹಸಿರು ನಿಶಾನೆ ತೋರಿದ ಬೆನ್ನಲ್ಲೇ, ಮುಂಜಾಗ್ರತಾ ಕ್ರಮವಾಗಿ ಶಾಂತಿ ಕದಡದಂತೆ ಸೂಚಿಸಿ ಕನ್ನಡಪರ ಸಂಘಟನೆಗಳಿಗೆ ರಾಜಧಾನಿ ಪೊಲೀಸರು ಬುಧವಾರ ನೋಟಿಸ್ ನೀಡಿದ್ದಾರೆ. ಕನ್ನಡಪರ ಸಂಘಟನೆ ಮುಖಂಡ, ಮಾಜಿ ಶಾಸಕ ವಾಟಾಳ್ ನಾಗರಾಜ್‌, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣಗೌಡ, ಪ್ರವೀಣ್ ಶೆಟ್ಟಿ, ಕುಮಾರ್‌ ಹಾಗೂ ಶಿವರಾಮೇಗೌಡ ಸೇರಿ ಹಲವು ಮುಖಂಡರಿಗೆ ಪೊಲೀಸರು ನೋಟಿಸ್ ಜಾರಿಗೊಳಿಸಿದ್ದಾರೆ. ಅಲ್ಲದೆ, ಈ ಮುಖಂಡರ ಮನೆಗಳಿಗೆ ಖುದ್ದು ತೆರಳಿ ಶಾಂತಿ ಭಂಗಕ್ಕೆ ಅವಕಾಶ ಕೊಡದಂತೆ ಪೊಲೀಸರು ಸೂಚಿಸಿದ್ದಾರೆ.

ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದ್ದು ಎಂದು ಹೇಳಿ ನಟ ಕಮಲ್ ಹಾಸನ್‌ ವಿವಾದ ಹುಟ್ಟು ಹಾಕಿದ್ದರು. ಈ ಹೇಳಿಕೆ ಖಂಡಿಸಿ ನಟನ ವಿರುದ್ಧ ರಾಜ್ಯದಲ್ಲಿ ತೀವ್ರ ಪ್ರತಿಭಟನೆ ವ್ಯಕ್ತವಾಗಿತ್ತು. ಇದರಿಂದಾಗಿ ಕಮಲ್‌ ಹಾಸನ್ ನಟನೆಯ ಥಗ್ ಲೈಫ್‌ ಸಿನಿಮಾ ಬಿಡುಗಡೆಗೆ ರಾಜ್ಯ ಚಲನಚಿತ್ರ ವಾಣಿಜ್ಯ ಮಂಡಳಿ ನಿರ್ಬಂಧಿಸಿತ್ತು. ಆದರೆ ಚಿತ್ರ ಬಿಡುಗಡೆಗೆ ಇದೀಗ ಸುಪ್ರೀಂಕೋರ್ಟ್ ಆದೇಶಿಸಿದೆ. ಚಿತ್ರ ಬಿಡುಗಡೆ ವಿರೋಧಿಸಿ ಕನ್ನಡಪರ ಸಂಘಟನೆಗಳು ಚಿತ್ರಮಂದಿರ ಬಳಿ ಪ್ರತಿಭಟನೆಗಿಳಿದರೆ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ಉಂಟಾಗಬಹುದು ಎಂದು ಪೊಲೀಸರು ಮುಂಜಾಗ್ರತೆ ವಹಿಸಿದ್ದಾರೆ. ಜತೆಗೆ ಶಾಂತಿ ಭಂಗಕ್ಕೆ ಯತ್ನಿಸಿದರೆ ಕಾನೂನು ಕ್ರಮ ಜರುಗಿಸುವುದಾಗಿ ಕನ್ನಡಪರ ಸಂಘಟನೆಗಳ ಹಲವು ಮುಖಂಡರಿಗೆ ನೋಟಿಸ್ ನೀಡಿ ಎಚ್ಚರಿಕೆಯನ್ನೂ ನೀಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌