ಜಯದೇವ ಆಸ್ಪತ್ರೆಯಲ್ಲಿ ಮೃತನ ಸಂಬಂಧಿಕರಿಂದ ದಾಂಧಲೆ: ಹಾಸ್ಪಿಟಲ್‌ ಗ್ಲಾಸ್‌ ಪುಡಿ ಪುಡಿ

Kannadaprabha News   | Asianet News
Published : Aug 03, 2020, 08:30 AM IST
ಜಯದೇವ ಆಸ್ಪತ್ರೆಯಲ್ಲಿ ಮೃತನ ಸಂಬಂಧಿಕರಿಂದ ದಾಂಧಲೆ: ಹಾಸ್ಪಿಟಲ್‌ ಗ್ಲಾಸ್‌ ಪುಡಿ ಪುಡಿ

ಸಾರಾಂಶ

ಎದೆನೋವಿನಿಂದ ರೋಗಿ ಸಾವು|ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯದಿಂದಲೇ ರೋಗಿನ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆಯಲ್ಲೇ ಕೂಗಾಡಿದ ಮೃತನ ಸಂಬಂಧಿಕರು| ಬಾಗಿಲು ಹಾಗೂ ಕೊಠಡಿಗೆ ಅಳವಡಿಸಿದ್ದ ಗಾಜುಗಳನ್ನು ಒಡೆದು ಹಾಕಿದ್ದಾರೆ. ಕುರ್ಚಿ, ಟೇಬಲ್‌ಗಳನ್ನು ಎತ್ತಿ ಬಿಸಾಡಿದ್ದಾರೆ|

ಬೆಂಗಳೂರು(ಆ.03): ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದರಿಂದ ಆಕ್ರೋಶಗೊಂಡ ಸಂಬಂಧಿಕರು ಜಯದೇವ ಆಸ್ಪತ್ರೆಯ ಗಾಜು ಒಡೆದು ದಾಂಧಲೆ ನಡೆಸಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ. ವಿಷಯ ತಿಳಿದು ಸ್ಥಳಕ್ಕೆ ತೆರಳಿದ್ದ ತಿಲಕ್‌ನಗರ ಠಾಣೆ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

ಅನ್ಸರ್‌ ಪಾಷ ಎಂಬುವರಿಗೆ ಎದೆ ನೋವು ಕಾಣಿಸಿಕೊಳ್ಳುತ್ತಿತ್ತು. ಹಲವು ಬಾರಿ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ಭಾನುವಾರ ಸಂಜೆ ಅನ್ಸರ್‌ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಅನ್ಸರ್‌ ಪಾಷ ಸಾವನ್ನಪ್ಪಿದ್ದರು. ಇದರಿಂದ ಆಕ್ರೋಶಗೊಂಡ ಸಂಬಂಧಿಕರು, ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯದಿಂದಲೇ ಅನ್ಸರ್‌ ಪಾಷ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆಯಲ್ಲೇ ಕೂಗಾಡಿದ್ದರು. ಬಾಗಿಲು ಹಾಗೂ ಕೊಠಡಿಗೆ ಅಳವಡಿಸಿದ್ದ ಗಾಜುಗಳನ್ನು ಒಡೆದು ಹಾಕಿದ್ದಾರೆ. ಕುರ್ಚಿ, ಟೇಬಲ್‌ಗಳನ್ನು ಎತ್ತಿ ಬಿಸಾಡಿದ್ದಾರೆ.

ಖಾಸಗಿ ಆಸ್ಪತ್ರೆಗಳ ನಿರ್ಲಕ್ಷ್ಯ: ಚಿಕಿತ್ಸೆ ಸಿಗದೆ ಬಾಣಂತಿ ಸಾವು

ಸಂದರ್ಭದಲ್ಲೂ ಸಂಬಂಧಿಕರು ಬ್ಯಾರಿಕೇಡ್‌ಗಳಿಗೆ ಒದ್ದು ಬೀಳಿಸಿದ್ದರು. ಆಸ್ಪತ್ರೆಯಲ್ಲಿ ನಡೆದ ಗಲಾಟೆ ಬಗ್ಗೆಯೂ ದೂರು ನೀಡುವಂತೆ ವೈದ್ಯರಿಗೆ ಹೇಳಿದ್ದೇವೆ. ಈ ಬಗ್ಗೆ ಯಾರಿಂದಲೂ ಇನ್ನೂ ದೂರು ದಾಖಲಾಗಿಲ್ಲ ಎಂದು ಪೊಲೀಸರು ಹೇಳಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಡಿಕೆಸು ಹೆಸರಿನಲ್ಲಿ ಕೋಟ್ಯಂತರ ವಂಚನೆ ಪ್ರಕರಣ.. 'ಬಂಗಾರಿ' ಕೇಸ್‌ನಲ್ಲಿ ನಟ ಧರ್ಮಗೆ ಧ್ವನಿ ಪರೀಕ್ಷೆ?
ಬೆಳಗಾವಿಯ 31 ಕೃಷ್ಣಮೃಗ ಸಾವಿಗೆ ಸಿಬ್ಬಂದಿ ನಿರ್ಲಕ್ಷ್ಯ ಕಾರಣವಲ್ಲ: ಸಚಿವ ಈಶ್ವರ್ ಖಂಡ್ರೆ