
ಬೆಂಗಳೂರು(ಜೂ.17): ಮತಾಂತರ ನಿಷೇಧ ಕಾಯ್ದೆ ರದ್ದುಪಡಿಸುವ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ಸಭೆಯ ನಿರ್ಣಯವನ್ನು ಪ್ರತಿಪಕ್ಷ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳು ತೀವ್ರವಾಗಿ ವಿರೋಧಿಸಿವೆ. ಬೆಂಗಳೂರಿನಲ್ಲಿ ಶುಕ್ರವಾರ ವಿಶ್ವ ಹಿಂದು ಪರಿಷತ್ ಹಾಗೂ ಬಜರಂಗದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಮತ್ತೊಂದೆಡೆ ಹಿಂದು ಜನಜಾಗೃತಿ ವೇದಿಕೆ ಅಧ್ಯಕ್ಷ ಮೋಹನ್ ಗೌಡ ಕೂಡ ಸರ್ಕಾರದ ನಿರ್ಧಾರ ವಿರೋಧಿಸಿದ್ದಾರೆ. ಇದೇ ವೇಳೆ, ಜಿಲ್ಲೆ, ತಾಲೂಕು ಕೇಂದ್ರಗಳಲ್ಲಿ ಆಂದೋಲನ ನಡೆಸುವ ಸಂಬಂಧ 19ರಂದು ಸಭೆ ನಡೆಸಲಾಗುವುದು. ಬಳಿಕ ಜನಾಂದೋಲನ ರೂಪಿಸಲಿದ್ದೇವೆ ಎಂದು ಬಿಜೆಪಿ ಮುಖಂಡ ಆರ್.ಅಶೋಕ್ ಹೇಳಿದ್ದಾರೆ.
ಬಿಜೆಪಿ ಆಕ್ರೋಶ:
ಶುಕ್ರವಾರ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ಆರ್.ಅಶೋಕ್, ‘ಕಾಂಗ್ರೆಸ್ ಪಕ್ಷವು ಕರ್ನಾಟಕವನ್ನು ಮಿನಿ ಪಾಕಿಸ್ತಾನ ಮಾಡಲು ಹೊರಟಂತಿದ್ದು, ಟಿಪ್ಪುವಿನ ಮತಾಂತರದ ಸಿದ್ಧಾಂತಕ್ಕೆ ಪೂರಕವಾಗಿ ರಾಜ್ಯ ಸರ್ಕಾರ ಹೆಜ್ಜೆ ಹಾಕುತ್ತಿದೆ’ ಎಂದು ಹರಿಹಾಯ್ದರು.
ನಮ್ಮ ರಕ್ಷಣೆಗೆ ಸರ್ಕಾರ ಬರಲ್ಲ, ನಾವೇ ಆ್ಯಕ್ಷನ್‌ಗೆ ಇಳೀಬೇಕು: ಸಿ.ಟಿ.ರವಿ
‘ಕಾಂಗ್ರೆಸ್ ಪಕ್ಷವು ಪಿಎಫ್‌ಐ, ಕೆಎಫ್‌ಡಿ ಪರವಾಗಿದೆಯೇ? ಜನಾದೇಶದ ದುರ್ಬಳಕೆಗೆ ಬಿಜೆಪಿ ಅವಕಾಶ ನೀಡುವುದಿಲ್ಲ. 30ರಿಂದ 40 ಲಕ್ಷ ಹಿಂದೂಗಳು ದುಡ್ಡಿನ ಆಮಿಷ, ಲವ್ ಜಿಹಾದ್, ಆಸ್ಪತ್ರೆಯಲ್ಲಿ ಬಿಲ್ ಕಟ್ಟಲು ಆಗದೆ ಮತಾಂತರ ಆದ ಮಾಹಿತಿ ಇದೆ. ಕಾಂಗ್ರೆಸ್ ಯಾರಿಗಾಗಿ ಈ ಕಾಯ್ದೆ ತರುತ್ತಿದೆ? ಬಲವಂತದ ಮತಾಂತರ ಸಲ್ಲದು ಎಂಬ ಭಾವನೆ ಮತ್ತು ನಿಲುವನ್ನು ಮಹಾತ್ಮ ಗಾಂಧೀಜಿ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಹೊಂದಿದ್ದರು’ ಎಂದು ಹೇಳಿದರು.
19ರಂದು ಸಭೆ ನಡೆಸಿ ಮುಂದಿನ ನಡೆ:
ಕಾಂಗ್ರೆಸ್ ಸರ್ಕಾರವು ರಾಜ್ಯದಲ್ಲಿ ಟಿಪ್ಪು ಆಡಳಿತವನ್ನು ಜಾರಿಗೊಳಿಸಲು ಹೊರಟಿದ್ದು, ಕಾಂಗ್ರೆಸ್‌ನ ದುರಾಡಳಿತ, ಅರಾಜಕತೆ, ಗ್ಯಾರಂಟಿ ವಿಚಾರದಲ್ಲಿ ಕಂಡಿಷನ್, ವಿವಿಧ ಕಾಯ್ದೆಗಳ ಹಿಂತೆಗೆತದ ನಿರ್ಧಾರವನ್ನು ಖಂಡಿಸಿ ಜಿಲ್ಲೆ, ತಾಲೂಕು ಕೇಂದ್ರಗಳಲ್ಲಿ ಆಂದೋಲನ ನಡೆಸುವ ಸಂಬಂಧ 19ರಂದು ಸಭೆ ನಡೆಸಲಾಗುವುದು. ಬಳಿಕ ಜನಾಂದೋಲನ ರೂಪಿಸಲಿದ್ದೇವೆ ಎಂದರು.
ಮಿನಿ ಪಾಕಿಸ್ತಾನ ಮಾಡುತ್ತಿದ್ದಾರೆ!
ಕಾಂಗ್ರೆಸ್ ಪಕ್ಷವು ಕರ್ನಾಟಕವನ್ನು ಮಿನಿ ಪಾಕಿಸ್ತಾನ ಮಾಡಲು ಹೊರಟಂತಿದೆ. ಟಿಪ್ಪುವಿನ ಮತಾಂತರದ ಸಿದ್ಧಾಂತಕ್ಕೆ ಪೂರಕವಾಗಿ ರಾಜ್ಯ ಸರ್ಕಾರ ಹೆಜ್ಜೆ ಹಾಕುತ್ತಿದೆ. 30ರಿಂದ 40 ಲಕ್ಷ ಹಿಂದೂಗಳು ದುಡ್ಡಿನ ಆಮಿಷ, ಲವ್ ಜಿಹಾದ್, ಆಸ್ಪತ್ರೆಯಲ್ಲಿ ಬಿಲ್ ಕಟ್ಟಲು ಆಗದೆ ಮತಾಂತರ ಆದ ಮಾಹಿತಿ ಇದೆ. ಕಾಂಗ್ರೆಸ್ ಯಾರಿಗಾಗಿ ಈ ಕಾಯ್ದೆ ತರುತ್ತಿದೆ? ಅಂತ ಬಿಜೆಪಿ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ