ಕರ್ನಾಟಕದಲ್ಲಿ ಮತಾಂತರ ನಿಷೇಧ ವಾಪಸ್‌ಗೆ ಆಕ್ರೋಶ

By Kannadaprabha NewsFirst Published Jun 18, 2023, 12:34 PM IST
Highlights

ಅನ್ಯಧರ್ಮೀಯರ ಜೊತೆ ಅತಿ ಹೆಚ್ಚಿ​ನ ಸಂಖ್ಯೆಯಲ್ಲಿ ಹಿಂದೂಗಳೂ ಮತ ಹಾಕಿದ್ದು ಅವರ ಮತದಿಂದಲೇ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಿದೆ. ಈ ಕಾನೂನಿನಿಂದ ಕಾಂಗ್ರೆಸ್‌ ತನಗೆ ಮತ ನೀಡಿದ ಸಮಸ್ತ ಹಿಂದೂ ಸಮಾಜಕ್ಕೆ ದ್ರೋಹ ಬಗೆದಂತಾಗಿದೆ. ಕರ್ನಾಟಕದ ಹಿಂದೂಗಳು ಇದನ್ನು ಖಂಡಿಸುತ್ತೇವೆ. ಹೀಗಾಗಿ, ಸರ್ಕಾರ ತಾನು ತೆಗೆದುಕೊಂಡಿರುವ ನಿರ್ಧಾರವನ್ನು ಕೂಡಲೇ ಹಿಂತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ಗದಗ/ಬೆಳಗಾವಿ(ಜೂ.18): ಮತಾಂತರ ನಿಷೇಧ ಕಾನೂನಿಗೆ ತಿದ್ದುಪಡಿ ತರುವ ಕಾಂಗ್ರೆಸ್‌ ಸರ್ಕಾರದ ನಿರ್ಧಾರ ಖಂಡಿಸಿ ವಿಶ್ವಹಿಂದೂ ಪರಿಷತ್‌ ಹಾಗೂ ಇತರ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಶನಿವಾರ ಬೆಳಗಾವಿ, ಗದಗ, ಚಾಮರಾಜನಗರ ಹಾಗೂ ಬಾಗಲಕೋಟೆಗಳಲ್ಲಿ ಪ್ರತಿಭಟನೆ ನಡೆಸಿದರು. ಕಾನೂನಿಗೆ ತಿದ್ದುಪಡಿ ತರುವ ತೀರ್ಮಾನವನ್ನು ಕೂಡಲೇ ಹಿಂಪ​ಡೆಯಲು ಒತ್ತಾ​ಯಿಸಿ ಜಿಲ್ಲಾ​ಧಿ​ಕಾ​ರಿ​ಗ​ಳಿಗೆ ಮನವಿ ಸಲ್ಲಿಸಿದರು.

ಬೆಳಗಾವಿಯಲ್ಲಿ ಚನ್ನಮ್ಮ ವೃತ್ತದಿಂದ ಪ್ರತಿಭಟನಾ ರಾರ‍ಯಲಿ ನಡೆಸಿದ ವಿಶ್ವ ಹಿಂದೂ ಪರಿಷತ್‌ನ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಪತ್ರ ಸಲ್ಲಿಸಿದರು. ಗದಗದಲ್ಲಿ ಜಿಲ್ಲಾ ವಿಶ್ವ ಹಿಂದೂ ಪರಿಷತ್‌ನಿಂದ ಪ್ರತಿಭಟನಾ ಮೆರವಣಿಗೆ ನಡೆಯಿತು. ಈ ವೇಳೆ ಮಾತನಾಡಿದ ವಿಶ್ವ ಹಿಂದೂ ಪರಿಷತ್‌ನ ಗದಗ ಜಿಲ್ಲಾ​ಧ್ಯಕ್ಷ ಶ್ರೀಧರ ಕುಲಕರ್ಣಿ, ಕಾಂಗ್ರೆಸ್‌ ಸರ್ಕಾರ ಜೂ.15ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಹಿಂದೆ ಜಾರಿಯಲ್ಲಿದ್ದ ಮತಾಂತರ ನಿಷೇಧ ಕಾನೂನನ್ನು ಹಿಂಪಡೆಯಲು ತೀರ್ಮಾನಿಸಿರುವುದನ್ನು ವಿಶ್ವ ಹಿಂದೂ ಪರಿಷತ್‌ ಖಂಡಿಸುತ್ತದೆ. ಭಾರತ ಹಿಂದೂ ರಾಷ್ಟ್ರವಾಗಿದ್ದು, ಇಲ್ಲಿ ಹಿಂದುಗಳ ಜೊತೆ ಅನ್ಯಧರ್ಮೀಯರು ಸಹಬಾಳ್ವೆ ನಡೆಸಲು ಸಂವಿಧಾನ ಅವಕಾಶ ಮಾಡಿಕೊಟ್ಟಿದೆ. ಇದನ್ನು ನಾವು ಒಪ್ಪುತ್ತೇವೆ ಮತ್ತು ಪ್ರಶ್ನಿಸುವುದಿಲ್ಲ. ಆದರೆ, ಹಿಂದೂಗಳಿಗೆ ಆಮೀಷ ತೋರಿಸಿ ಅಥವಾ ಹೆದರಿಸಿ ಬಲವಂತವಾಗಿ ಮತಾಂತರಿಸುವುದನ್ನು ಅಥವಾ ಮರುಳು ಮಾಡಿ ಮತಾಂತರಿಸುವುದನ್ನು ನಾವು ಖಂಡಿಸುತ್ತೇವೆ ಎಂದರು.

ಮತಾಂತರ ಕಾಯ್ದೆ ರದ್ದು: ರಾಜ್ಯ ಸರ್ಕಾರದ ವಿರುದ್ಧ ಸಂಸದ ಕರಡಿ ಸಂಗಣ್ಣ ವಾಗ್ದಾಳಿ

ಚಾಮರಾಜನಗರದಲ್ಲಿ ಜಿಲ್ಲಾಡಳಿತ ಭವನದ ಪ್ರವೇಶ ದ್ವಾರದಲ್ಲಿ ಜಮಾಯಿಸಿದ ವಿಶ್ವ ಹಿಂದೂ ಪರಿಷತ್‌ ಹಾಗೂ ಬಜರಂಗದಳದ ಕಾರ್ಯಕರ್ತರು, ಅಲ್ಲಿಂದ ಜಿಲ್ಲಾಡಳಿತ ಭವನದ ಅಂಗಳಕ್ಕೆ ಮೆರವಣಿಗೆಯಲ್ಲಿ ತೆರಳಿದರು. ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಬಳಿಕ, ಜಿಲ್ಲಾಡಳಿತದ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಇದೇ ವೇಳೆ, ಬಾಗಲಕೋಟೆಯಲ್ಲಿಯೂ ವಿಶ್ವ ಹಿಂದೂ ಪರಿಷತ್‌ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಅನ್ಯಧರ್ಮೀಯರ ಜೊತೆ ಅತಿ ಹೆಚ್ಚಿ​ನ ಸಂಖ್ಯೆಯಲ್ಲಿ ಹಿಂದೂಗಳೂ ಮತ ಹಾಕಿದ್ದು ಅವರ ಮತದಿಂದಲೇ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಿದೆ. ಈ ಕಾನೂನಿನಿಂದ ಕಾಂಗ್ರೆಸ್‌ ತನಗೆ ಮತ ನೀಡಿದ ಸಮಸ್ತ ಹಿಂದೂ ಸಮಾಜಕ್ಕೆ ದ್ರೋಹ ಬಗೆದಂತಾಗಿದೆ. ಕರ್ನಾಟಕದ ಹಿಂದೂಗಳು ಇದನ್ನು ಖಂಡಿಸುತ್ತೇವೆ. ಹೀಗಾಗಿ, ಸರ್ಕಾರ ತಾನು ತೆಗೆದುಕೊಂಡಿರುವ ನಿರ್ಧಾರವನ್ನು ಕೂಡಲೇ ಹಿಂತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

click me!