
ಹಾವೇರಿ (ಆ.7): ಕರ್ನಾಟಕ ಸರ್ಕಾರದ ಶಕ್ತಿ ಯೋಜನೆ ಜಾರಿಯಾದ ನಂತರ ರಾಜ್ಯದ ಸಾರಿಗೆ ಬಸ್‌ಗಳು ಮಹಿಳಾ ಪ್ರಯಾಣಿಕರಿಂದ ತುಂಬಿ ತುಳುಕುತ್ತಿವೆ. ಒಳಗೆ ನಿಲ್ಲಲು ಜಾಗವಿಲ್ಲದಷ್ಟು ಜನದಟ್ಟಣೆಯಿಂದ ಮಕ್ಕಳು, ವೃದ್ಧರು ಬಸ್ ಹತ್ತಲು ಹರಸಾಹಸ ಪಡುವ ಸ್ಥಿತಿ ನಿರ್ಮಾಣವಾಗಿದೆ. ಈ ಸನ್ನಿವೇಶಕ್ಕೆ ತಾಜಾ ಉದಾಹರಣೆಯಾಗಿ ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನಲ್ಲಿ ಘಟನೆಯೊಂದು ನಡೆದಿದೆ.
ರಾಣೇಬೆನ್ನೂರು ಬಸ್ ನಿಲ್ದಾಣದಿಂದ ಸಂಜೆ ಹಾವೇರಿಗೆ ತೆರಳುವ ಬಸ್‌ಗೆ ಸಮರ್ಪಕ ವ್ಯವಸ್ಥೆ ಇಲ್ಲದ ಕಾರಣ, ನೂರಾರು ಪ್ರಯಾಣಿಕರು ಒಂದೇ ಬಸ್‌ಗೆ ಮುಗಿಬಿದ್ದರು. ಶಕ್ತಿ ಯೋಜನೆಯಡಿ ಉಚಿತ ಪ್ರಯಾಣದ ಪರಿಣಾಮ ಮಹಿಳೆಯರು ದೊಡ್ಡ ಸಂಖ್ಯೆಯಲ್ಲಿ ಆಗಮಿಸಿದ್ದರಿಂದ, ಬಸ್‌ನಲ್ಲಿ ಕಾಲಿಡಲು ಜಾಗವಿಲ್ಲದ ಸ್ಥಿತಿ ಉಂಟಾಯಿತು. ಆಶ್ಚರ್ಯಕರವಾಗಿ, ಬಸ್ ಕಂಡಕ್ಟರ್‌ಗೂ ಒಳಗೆ ಹತ್ತಲು ಸಾಧ್ಯವಾಗದೇ, ಹೊರಗೆ ನಿಂತು ನೂಕುನುಗ್ಗಲಿನಲ್ಲಿ ಪರಿತಪಿಸುವಂತಾಯಿತು. ಘಟನೆಯ ದೃಶ್ಯ ಸಾರ್ವಜನಿಕರ ಮೊಬೈಲ್ ಕ್ಯಾಮರಾಗಳಲ್ಲಿ ಸೆರೆಯಾಗಿದೆ.
ಪ್ರಯಾಣಿಕರ ಜನದಟ್ಟಣೆಯಿಂದ ಕಂಗಾಲಾದ ಕಂಡಕ್ಟರ್:
ಬಸ್‌ನ ಒಳಗೆ ಜಾಗವಿಲ್ಲದೇ ಬಾಗಿಲ ಬಳಿಯೇ ನಿಂತು ಟಿಕೆಟ್ ಕೊಡಲು ಪರದಾಡಿದ ದೃಶ್ಯ ಸಾರ್ವಜನಿಕರ ಮೊಬೈಲ್‌ನಲ್ಲಿ ರೆಕಾರ್ಡ್ ಆಗಿದೆ. ಈ ಘಟನೆಯಿಂದ ಸಾರಿಗೆ ಇಲಾಖೆಯ ಮೇಲೆ ಒತ್ತಡ ಹೆಚ್ಚಿದ್ದು, ಹೆಚ್ಚಿನ ಬಸ್‌ಗಳನ್ನು ಒದಗಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ. ಶಕ್ತಿ ಯೋಜನೆಯಿಂದ ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ದೊರೆತರೂ, ಬಸ್‌ಗಳ ಕೊರತೆಯಿಂದ ಉಂಟಾಗಿರುವ ಈ ಗೊಂದಲಕ್ಕೆ ಶೀಘ್ರ ಪರಿಹಾರಿಸುವಂತೆ ಪ್ರಯಾಣಿಕರು ಆಗ್ರಹಿಸಿದ್ದಾರೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ