ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯೂ ಹೆಚ್ಚಳವಾಗುತ್ತಲೇ ಇದ್ದು, ಆದರೆ ಎಲ್ಲರಿಗೂ ಪೂರೈಸಲು ಆಕ್ಸಿಜನ್ ಕೊರತೆ ಎದುರಾಗುತ್ತಿದೆ.
ಬೆಂಗಳೂರು (ಆ.19): ರಾಜ್ಯದಲ್ಲಿ ಕೊರೋನಾ ಸೋಂಕಿನ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಆಕ್ಸಿಜನ್ ಬೇಡಿಕೆ ನಾಲ್ಕರಿಂದ ಐದು ಪಟ್ಟು ಹೆಚ್ಚಾಗುತ್ತಿದೆ. ಹೀಗಾಗಿ ಲಿಕ್ವಿಡ್ ಆಕ್ಸಿಜನ್ ಘಟಕಗಳಿಂದ ಸುಲಭವಾಗಿ ಆಕ್ಸಿಜನ್ ಪೂರೈಕೆಯಾಗುವಂತೆ ಕ್ರಮ ಕೈಗೊಳ್ಳಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.
ಕಿಮ್ಸ್ ಆಸ್ಪತ್ರೆಯಲ್ಲಿ ಸೋಮವಾರ ಉಂಟಾದ ಆಕ್ಸಿಜನ್ ಕೊರತೆ ಬಗ್ಗೆ ಮಂಗಳವಾರ ಬೆಳಗ್ಗೆ ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆದ ಅವರು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
'ಯಡಿಯೂರಪ್ಪ ತೆಗೆದುಕೊಂಡ ಕಟ್ಟುನಿಟ್ಟಿನ ಕ್ರಮದಿಂದ ಕೊರೋನಾ ನಿಯಂತ್ರಣ'..
ರಾಜ್ಯದಲ್ಲಿ ಕೊರೋನಾ ಸೋಂಕಿನ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಆಕ್ಸಿಜನ್ ಬೇಡಿಕೆ ನಾಲ್ಕರಿಂದ ಐದು ಪಟ್ಟು ಹೆಚ್ಚಾಗುತ್ತಿದೆ. ಬೆಂಗಳೂರಿನಲ್ಲಿ ಐಸಿಯು, ವೆಂಟಿಲೇಟರ್ ಅವಲಂಬಿತ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಆದರೆ ಬೇರೆ ಜಿಲ್ಲೆಗಳಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಿಲ್ಲ ಹಾಗೂ ಆಕ್ಸಿಜನ್ ಬೇಡಿಕೆ ಅಷ್ಟರಮಟ್ಟಿಗೆ ಇಲ್ಲ. ಹೀಗಾಗಿ ಆತಂಕವಿಲ್ಲ .
ಆದರೂ ರಾಜ್ಯದಲ್ಲಿ ಬೇಡಿಕೆಗೆ ತಕ್ಕಷ್ಟುಆಕ್ಸಿಜನ್ ಲಭ್ಯವಿಲ್ಲ. ಲಿಕ್ವಿಡ್ ಆಕ್ಸಿಜನ್ ಘಟಕಗಳಿಂದ ಸುಲಭವಾಗಿ ಆಕ್ಸಿಜನ್ ಲಭ್ಯವಾಗುವಂತೆ ಮಾಡಲು ಕ್ರಮ ಕೈಗೊಳ್ಳಬೇಕೆಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಈಗಾಗಲೇ ಮನವಿ ಮಾಡಿದ್ದೇನೆ. ಗುಜರಾತ್‌ನಲ್ಲಿ ಹೆಚ್ಚು ಘಟಕಗಳಿದ್ದು, ಗುಜರಾತ್‌ನಿಂದ ಲಿಕ್ವಿಡ್ ಆಕ್ಸಿಜನ್ ರಾಜ್ಯಕ್ಕೆ ಲಭಿಸುವಂತೆ ವ್ಯವಸ್ಥೆ ಮಾಡಲು ಕೋರಿದ್ದೇನೆ ಎಂದು ಹೇಳಿದರು.
ಕೊರೋನಾ ಪರೀಕ್ಷಾ ದರದಲ್ಲಿ ಭಾರಿ ಇಳಿಕೆ : ಸರ್ಕಾರದ ಆದೇಶ...
ಕಿಮ್ಸ್ ಆಸ್ಪತ್ರೆಯು ಪ್ರತಿಷ್ಠಿತ ಕಂಪನಿಯೊಂದಿಗೆ ಒಡಂಬಡಿಕೆ ಮಾಡಿಕೊಂಡಿತ್ತು. ಆದರೆ ಬೇಡಿಕೆಗೆ ತಕ್ಕಂತೆ ಆಕ್ಸಿಜನ್ ಪೂರೈಕೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ಆಕ್ಸಿಜನ್ ಪೂರೈಕೆ ಮಾಡುವ ಖಾಸಗಿ ಕಂಪನಿ ಜೊತೆ ಕಿಮ್ಸ್ ಆಸ್ಪತ್ರೆ ಒಪ್ಪಂದ ಮಾಡಿಕೊಂಡು ಅಗತ್ಯಕ್ಕೆ ತಕ್ಕಷ್ಟುಆಕ್ಸಿಜನ್ ಪಡೆಯಲು ಸೂಚಿಸಲಾಗಿದೆ. ಈ ಕುರಿತು ಕೈಗಾರಿಕಾ ಇಲಾಖೆಯ ಅಧಿಕಾರಿಗಳೊಂದಿಗೂ ಚರ್ಚೆ ಮಾಡಿದ್ದೇನೆ. ಬೇರೆ ಆಸ್ಪತ್ರೆಗಳಲ್ಲಿ ಹೊಸ ಆಕ್ಸಿಜನ್ ಘಟಕಗಳನ್ನು ಅಳವಡಿಸಲಾಗುವುದು ಎಂದರು.