ಬೆಂಗಳೂರು (ಮೇ.26): ಆಮ್ಲಜನಕ ಉತ್ಪಾದನಾ ಘಟಕಗಳಲ್ಲಿ ಉಂಟಾಗಿದ್ದ ತಾಂತ್ರಿಕ ದೋಷದಿಂದಾಗಿ ಸೋಮವಾರ ಹಾಗೂ ಮಂಗಳವಾರ ಎರಡು ದಿನಗಳಿಗೆ ಸೀಮಿತವಾಗಿ ರಾಜ್ಯಕ್ಕೆ ಸಿಗಬೇಕಾಗಿದ್ದ ಆಕ್ಸಿನ್‌ನಲ್ಲಿ 286.64 ಮೆಟ್ರಿಕ್ ಟನ್ ಆಕ್ಸಿಜನ್ ಕೊರತೆ ಉಂಟಾಗಿತ್ತು. ತಕ್ಷಣ ಎಚ್ಚೆತ್ತು ಸಮಯೋಜಿತ ಕ್ರಮಗಳನ್ನು ಕೈಗೊಳ್ಳುವ ಮೂಲಕ ಪರಿಸ್ಥಿತಿಯನ್ನು ಯಶಸ್ವಿಯಾಗಿ ನಿಭಾಯಿಸಿದ್ದೇವೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹೆಚ್ಚುವರಿಯಾಗಿ ದಾಸ್ತಾನಿದ್ದ 120 ಟನ್ ಹಾಗೂ ಜಿಲ್ಲೆಗಳಲ್ಲಿ ದಾಸ್ತಾನಿದ್ದ 100 ಟನ್ ಬಳಕೆ ಮಾಡಿಕೊಂಡು ಮರು ಹೊಂದಾಣಿಕೆ ಮಾಡಿಕೊಂಡೆವು. ಜತೆಗೆ ಸೋಮವಾರ 130 ಟನ್ ಆಕ್ಸಿಜನ್ ಹೊತ್ತ ಕೇಂದ್ರದ ಆಕ್ಸಿಜನ್ ಎಕ್ಸ್‌ಪ್ರೆಸ್ ರೈಲು ಸಹ ನಗರಕ್ಕೆ ಆಗಮಿಸಿತ್ತು. ಲಭ್ಯವಿದ್ದ ಆಕ್ಸಿಜನ್‌ನ್ನು ಬಹಳ ಸೂಕ್ತವಾಗಿ ಬಳಕೆ ಮಾಡಿದೆವು. ಈ ಸಂಬಂಧ ಎಲ್ಲಾ ಜಿಲ್ಲಾಡಳಿತಗಳಿಗೆ ಮಾರ್ಗಸೂಚಿ ನೀಡಿ ಯಾವುದೇ ಸಮಸ್ಯೆಯಾಗದಂತೆ ನಿರ್ವಹಣೆ ಮಾಡಿದೆವು. ಹೀಗಾಗಿ ರಾಜ್ಯದಲ್ಲಿ ಎಲ್ಲೂ ಆಕ್ಸಿಜನ್ ಸಮಸ್ಯೆ ಉಂಟಾಗಲಿಲ್ಲ ಎಂದು ಮಂಗಳವಾರ ಸಚಿವರು ಮಾಹಿತಿ ನೀಡಿದರು.
undefined
ಬಳ್ಳಾರಿ ಘಟಕಗಳಲ್ಲಿ ದೋಷ: ಬಳ್ಳಾರಿಯ ಆಮ್ಲಜನಕ ಉತ್ಪಾದನಾ ಘಟಕಗಳಲ್ಲಿ ತಾಂತ್ರಿಕ ದೋಷ ಉಂಟಾಗಿತ್ತು. ಈ ಸಮಸ್ಯೆ ಎರಡು ದಿನಗಳಿಗೆ ಮಾತ್ರ ಸೀಮಿತವಾಗಿದ್ದು, ಮಂಗಳವಾರ ದೋಷ ಸರಿಪಡಿಸಿದ್ದು, ಬುಧವಾರದಿಂದ ಯಾವುದೇ ಸಮಸ್ಯೆ ಇಲ್ಲದೆ ಆಮ್ಲಜನಕ ಪೂರೈಕೆ ಆಗಲಿದೆ.
KSRTC ಬಸ್‌ಗಳನ್ನೇ ICU ಬೆಡ್ ಆಗಿ ಪರಿವರ್ತನೆ; ತುರ್ತು ಚಿಕಿತ್ಸೆಗೆ ಸರ್ಕಾರದ ಮಹತ್ವದ ಹೆಜ್ಜೆ! ...
ಇದರ ನಡುವೆ ರಾಜ್ಯಕ್ಕೆ ನಿಗದಿಪಡಿಸಿದ್ದ 1015 ಮೆಟ್ರಿಕ್ ಟನ್ ಆಕ್ಸಿಜನ್ ಪ್ರಮಾಣವನ್ನು ಕೇಂದ್ರವು 1200 ಮೆಟ್ರಿಕ್ ಟನ್‌ಗಳಿಗೆ ಹೆಚ್ಚಿಸಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಸಚಿವರು ರಾಜ್ಯದ ಪರಿಸ್ಥಿತಿಯನ್ನು ಕೇಂದ್ರಕ್ಕೆ ಮನವರಿಕೆ ಮಾಡಿಕೊಟ್ಟಿದ್ದೆವು. ಇದರಿಂದ ಆಕ್ಸಿಜನ್ ಪ್ರಮಾಣ ಹೆಚ್ಚಾಗಿದೆ. ನೆರೆಯ ಮಹಾರಾಷ್ಟ್ರದಿಂದಲೇ ನಮಗೆ ಅಲಾಟ್ ಮಾಡಿರುವುದರಿಂದ ಸರಬರಾಜಿಗೂ ಹೆಚ್ಚು ಅನುಕೂಲ ಆಗಲಿದೆ ಎಂದು ಹೇಳಿದರು.
8 ಹುದ್ದೆಗಳ ಪದನಾಮ ಬದಲು ಆದೇಶ
ಕಳೆದ ಆರು ತಿಂಗಳಿಂದ ಸಚಿವಾಲಯದಲ್ಲಿ ನನೆಗುದಿಗೆ ಬಿದ್ದಿದ್ದ ಆರೋಗ್ಯ ಇಲಾಖೆ ಸಿಬ್ಬಂದಿಗಳ ಪದನಾಮ (ಡೆಸಿಗ್ನೇಷನ್) ಬದಲಾವಣೆ ಕಡತ ವಿಲೇವಾರಿ ಮಾಡಲಾಗಿದೆ. ಹೀಗಾಗಿ ಅನೇಕ ದಿನಗಳಿಂದ ಬಾಕಿ ಉಳಿದಿದ್ದ ಸಿಬ್ಬಂದಿ ಬೇಡಿಕೆಯನ್ನು ಈಡೇರಿಸಿದಂತಾಗಿದೆ ಎಂದೂ ಸಚಿವರು ತಿಳಿಸಿದ್ದಾರೆ.
ಈ ನಿರ್ಧಾರದಿಂದ ಎಂಟು ಹುದ್ದೆಗಳ ಪದನಾಮವನ್ನು ಮರು ನಾಮಕರಣ ಮಾಡಲಾಗಿದೆ. ನೌಕರರ ಸಂಘದ ಬೇಡಿಕೆಯಂತೆ ಇನ್ನು ಮುಂದೆ ಕಿರಿಯ ಆರೋಗ್ಯ ಸಹಾಯಕರಿಗೆ (ಪುರುಷ) - ಆರೋಗ್ಯ ನಿರೀಕ್ಷಣಾಧಿಕಾರಿ, ಹಿರಿಯ ಆರೋಗ್ಯ ಸಹಾಯಕರಿಗೆ (ಪುರುಷ) - ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ, ಆರೋಗ್ಯ ಮೇಲ್ವಿಚಾರಕರಿಗೆ - ಆರೋಗ್ಯ ಮೇಲ್ವಿಚಾರಣಾಧಿಕಾರಿ, ಆರೋಗ್ಯ ಮೇಲ್ವಿಚಾರಕರನ್ನು (ಪತ್ರಾಂಕಿತ) - ಮುಖ್ಯ ಆರೋಗ್ಯ ಮೇಲ್ವಿಚಾರಣಾಧಿಕಾರಿ ಎಂದು, ಕಿರಿಯ ಆರೋಗ್ಯ ಸಹಾಯಕಿಗೆ (ಮಹಿಳೆ) - ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ, ಹಿರಿಯ ಆರೋಗ್ಯ ಸಹಾಯಕಿಗೆ (ಮಹಿಳೆ) - ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ, ಜಿಲ್ಲಾ ಸುರಕ್ಷಾಧಿಕಾರಿಯನ್ನು - ಜಿಲ್ಲಾ ಶುಶ್ರೂಷಣಾಧಿಕಾರಿ, ರೇಡಿಯಾಲಜಿಕಲ್ ಟೆಕ್ನಾಲಜಿಸ್ಟ್ ಹುದ್ದೆಗೆ - ಕಿರಿಯ/ಹಿರಿಯ ವಿಕಿರಣ ಚಿತ್ರಣ ಅಧಿಕಾರಿ ಎಂದು ಮರು ನಾಮಕರಣ ಮಾಡಲಾಗಿದೆ ಎಂದು ಸಚಿವರು ವಿವರಣೆ ನೀಡಿದ್ದಾರೆ.
ಭತ್ಯೆ ಕುರಿತು ಸಿಎಂ ಜತೆ ಚರ್ಚೆ
ಆರೋಗ್ಯ ಇಲಾಖೆಯಲ್ಲಿ ಕೊರೋನಾ ಕರ್ತವ್ಯದಲ್ಲಿರುವ ಪ್ಯಾರಾ ಮೆಡಿಕಲ್ ಸಿಬ್ಬಂದಿಗಳಾದ ಶುಶ್ರೂಷಕರು, ಪ್ರಯೋಗಶಾಲೆ ತಂತ್ರಜ್ಞರು, ರೇಡಿಯಾಲಜಿ ಟೆಕ್ನಾಲಜಿಸ್ಟ್$್ಸ, ಆರೋಗ್ಯ ಸಹಾಯಕರು, ಫಾರ್ಮಾಸಿಸ್ಟ್$್ಸ, ವಾಹನ ಚಾಲಕರು ಮತ್ತು ಗ್ರೂಪ್ ಡಿ ನೌಕರರು ವಿಶೇಷ ಭತ್ಯೆ ಯೋಜನೆಯನ್ನು ತಮಗೂ ವಿಸ್ತರಿಸುವಂತೆ ಮನವಿ ಮಾಡಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಅವರ ಜತೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವ ಸುಧಾಕರ್ ತಿಳಿಸಿದ್ದಾರೆ.