
ಕೋಲಾರ (ಮೇ.8) 'ಪಹಲ್ಗಾಮ್ ದಾಳಿ ಕೇಂದ್ರ ಸರ್ಕಾರದ ಪೂರ್ವ ನಿಯೋಜಿತ' ಎಂಬ ಆಧಾರ ರಹಿತ ಸುಳ್ಳು ಸುದ್ದಿಯನ್ನು ತನ್ನ ಯೂಟ್ಯೂಬ್ ಚಾನೆಲ್ ಮೂಲಕ ಹಬ್ಬಿಸಿದ ಕೋಲಾರದ ಕುಂಬಾರಪೇಟೆ ನಿವಾಸಿ ಮುನೀರ್ ಖಾನ್ ಖುರೇಷಿ ಎಂಬ ವ್ಯಕ್ತಿಯ ವಿರುದ್ಧ ಗಲ್‌ಪೇಟೆ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿದ್ದಾರೆ.
ಮುನೀರ್ ಖಾನ್, ಚಿಕನ್ ಅಂಗಡಿಯ ಮಾಲೀಕನಾಗಿದ್ದು, ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್‌ಲೋಡ್ ಮಾಡಿದ ವಿಡಿಯೋದಲ್ಲಿ, ಪಹಲ್ಗಾಮ್ ದಾಳಿಯನ್ನು ಕೇಂದ್ರ ಸರ್ಕಾರದ 'ಪೂರ್ವ ಯೋಜಿತ ಕೃತ್ಯ' ಎಂದು ಬಿಂಬಿಸಿ, 'ಬಿಹಾರ ಚುನಾವಣೆಯಲ್ಲಿ ಹಿಂದೂಗಳ ಮತ ಗಳಿಸಲು ಈ ದಾಳಿ ನಡೆಸಲಾಗಿದೆ' ಎಂದು ಕೇಂದ್ರ ಸರ್ಕಾರದ ವಿರುದ್ಧ ಅಪಪ್ರಚಾರ ನಡೆಸಿದ್ದಾನೆ.
ಇದನ್ನೂ ಓದಿ: ಉಗ್ರ ಹಫೀಸ್ ಸಯೀದ್ ಮನೆ ಟಾರ್ಗೆಟ್; ಲಾಹೋರ್ ಮೇಲೆ ಭಾರತೀಯ ಸೇನೆ ಡ್ರೋನ್ ಅಟ್ಯಾಕ್!
ಈ ವಿಡಿಯೋ ಸಾರ್ವಜನಿಕರಲ್ಲಿ ಗೊಂದಲ, ಅಶಾಂತಿ ಹಾಗೂ ಕೋಮು ಸಂಘರ್ಷಕ್ಕೆ ಕಾರಣವಾಗುವ ಸಾಧ್ಯತೆ ಇದ್ದ ಕಾರಣ, ಪೊಲೀಸರು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) ಅಡಿಯಲ್ಲಿ ಕೇಸ್ ದಾಖಲಿಸಿದ್ದಾರೆ. ಕೋಮು ಗಲಭೆ ತಡೆಗಟ್ಟಲು ಯೂಟ್ಯೂಬ್‌ನಿಂದ ಆ ವಿಡಿಯೋವನ್ನು ತೆಗೆದುಹಾಕಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಲ್‌ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ವಿಚಾರಣೆಗೊಳಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ