ಸಂಪುಟದಿಂದ ಕೆಎನ್ ರಾಜಣ್ಣ ವಜಾ ಕುರಿತು ಡಿಕೆ ಶಿವಕುಮಾರ್ ಹೇಳಿದ್ದೇನು?

Published : Aug 11, 2025, 08:09 PM IST
KN Rajanna Dk Shivakumar

ಸಾರಾಂಶ

ಸಿಎಂ ಸಿದ್ದರಾಮಯ್ಯ ಸಂಪುಟದಿಂದ ಕೆಎನ್ ರಾಜಣ್ಣ ಅವರನ್ನು ವಜಾ ಮಾಡಲಾಗಿದೆ. ಈ ಬೆಳವಣಿಗೆ ರೆಬೆಲ್ ನಾಯಕರಿಗೂ ತೀವ್ರ ಆಘಾತ ನೀಡಿದೆ. ಘಟನೆ ಕುರಿತು ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರು (ಆ.11) ಕರ್ನಾಟಕ ಕಾಂಗ್ರೆಸ್ ಪಕ್ಷದ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ರಾಹುಲ್ ಗಾಂಧಿ ದೇಶಾದ್ಯಂತ ನಡೆಸುತ್ತಿರುವ ಬಿಜೆಪಿ, ಚುನಾವಣಾ ಆಯೋಗದ ಮತ ಕಳ್ಳ ಅಭಿಯಾನದ ವಿರುದ್ಧವಾಗಿ ಮಾತನಾಡಿದ್ದ ಸಚಿವ ಕೆಎನ್ ರಾಜಣ್ಣ ದುಬಾರಿ ಬೆಲೆ ತೆತ್ತಿದ್ದಾರೆ. ಸಂಪುಟದಿಂದ ರಾಜಣ್ಣ ಅವರನ್ನು ವಜಾ ಮಾಡಲಾಗಿದೆ. ಕೆಎನ್ ರಾಜಣ್ಣ ವಜಾ ಘಟನೆ ಕುರಿತು ಬಿಜೆಪಿ ಟೀಕಿಸಿದೆ. ಕಾಂಗ್ರೆಸ್‌ನಲ್ಲಿ ಗಾಂಧಿ ಕುಟುಂಬದ ವಿರುದ್ದ ಸತ್ಯ ಮಾತನಾಡಿದರೆ ತಲೆ ದಂಡ ಖಚಿತ ಎಂದು ವ್ಯಂಗ್ಯವಾಡಿದೆ. ಇತ್ತ ಕಾಂಗ್ರೆಸ್ ನಾಯಕರು ಘಟನೆ ಕುರಿತು ಪ್ರತಿಕ್ರಿಯಿಸಿದ್ದಾರೆ. ಇದೀಗ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ರಾಜಣ್ಣ ವಜಾ ಕುರಿತು ಮಾತನಾಡಿದ್ದಾರೆ. ಘಟನೆ ತುಂಬಾ ನೋವಾಗಿದೆ ಎಂದಿದ್ದಾರೆ.

25 ವರ್ಷದ ಸ್ನೇಹ ನಮ್ಮದು ಎಂದು ಡಿಕೆಶಿ

ಕೆಎನ್ ರಾಜಣ್ಣ ಹಾಗೂ ನಂದು ಬರೋಬ್ಬರಿ 25 ವರ್ಷದ ಸ್ನೇಹ. ಯಾವ ಕಾರಣದಿಂದ ವಜಾ ಮಾಡಿದ್ದಾರೆ ಅನ್ನೋದು ಗೊತ್ತಿಲ್ಲ. ಕಳೆದ 25 ವರ್ಷದಿಂದ ನಾವಿಬ್ಬರು ರಾಜಕಾರಣ ಮಾಡಿಕೊಂಡು ಬಂದಿದ್ದೇವೆ. ಸಚಿವರ ರಾಜೀನಾಮೆ, ವಜಾ ವಿಚಾರ ನನ್ನ ವ್ಯಾಪ್ತಿಗೆ ಬರುವುದಿಲ್ಲ. ಆದರೆ ಈ ಘಟನೆ ನೋವಾಗಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಆತ್ಮೀಯರಾದ ರಾಜಣ್ಣ ಅವರ ವಜಾ ಹಿಂದಿನ ಕಾರಣ ತಿಳಿದಿಲ್ಲ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಸಣ್ಣ ಪುಟ್ಟವರಿಗಷ್ಟೇ ನಾನು ನೋಟಿಸ್ ಕೊಡಬಲ್ಲೆ

ನನ್ನ ವ್ಯಾಪ್ತಿಯಲ್ಲಿ ಸಣ್ಣ ಪುಟ್ಟ ಶಾಸಕರಿಗೆ ಮಾತ್ರ ನೋಟಿಸ್ ಕೊಟ್ಟಿದ್ದೇನೆ. ಇದೆಲ್ಲವೂ ಮುಖ್ಯಮಂತ್ರಿ ವ್ಯಾಪ್ತಿಗೆ ಬರುತ್ತದೆ. ವಜಾ ಮಾಡಿರುವ ಕಾರಣ ನನಗೆ ಸ್ಪಷ್ಟವಾಗಿ ತಿಳಿದಿಲ್ಲ ಎಂದು ಡಿಕ ಶಿವಕುಮಾರ್ ಹೇಳಿದ್ದಾರೆ.

ಕೆಎನ್ ರಾಜಣ್ಣ ಹಾಗೂ ಡಿಕೆ ಶಿವಕುಮಾರ್ ನಡುವೆ ಹಲವು ಬಾರಿ ಮುಸುಕಿನ ಗುದ್ದಾಟಗಳೇ ನಡೆದಿದೆ. ಡಿಕೆ ಶಿವಕುಮಾರ್ ವಿರುದ್ಧ ಹೇಳಿಕೆ ನೀಡಿ ಕೆಂಗಣ್ಣಿಗೆ ಗುರಿಯಾಗಿದ್ದರು. ಪಕ್ಷದ ವಿರುದ್ಧ ಮಾತನಾಡಿ ಹೈಕಮಾಂಡ್ ಆಕ್ರೋಶಕ್ಕೂ ಗುರಿಯಾಗಿದ್ದರು. ಇದೀಗ ರಾಹುಲ್ ಗಾಂಧಿ ಬಿಜೆಪಿ ಹಾಗೂ ಚುನಾವಣಾ ಆಯೋಗದ ವಿರುದ್ಧ ಮತ ಕಳ್ಳತನ ಆರೋಪ ಮಾಡುತ್ತಿದ್ದರೆ, ಇತ್ತ ಕೆಎನ್ ರಾಜಣ್ಣ ರಾಹುಲ್ ಗಾಂಧಿಗೆ ವಿರುದ್ಧವಾಗಿ ಮಾತನಾಡಿದ್ದರು. ಇದೇ ಸಂದರ್ಬ ಬಳಸಿಕೊಂಡು ಸಿದ್ದರಾಮಯ್ಯನವರಿಗೆ ಆಪ್ತರಾಗಿರುವ ಕೆಎನ್ ರಾಜಣ್ಣ ಅವರ ತಲೆದಂಡ ವಾಗಿದೆಯಾ ಅನ್ನೋ ಚರ್ಚೆಗಳು ಶುರುವಾಗಿದೆ.

ಕೆಎನ್ ರಾಜಣ್ಣ ರಾಜೀನಾಮೆ ಅಲ್ಲ, ಸಂಪುಟದಿಂದ ವಜಾ

ಕೆಎನ್ ರಾಜಣ್ಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಅನ್ನೋ ಸುದ್ದಿ ಭಾರಿ ಕೋಲಾಹಲ ಸೃಷ್ಟಿಸಿತ್ತು. ಹೈಕಮಾಂಡ್ ಸೂಚನೆಯಂತೆ ರಾಜಣ್ಣ ರಾಜೀನಾಮೆ ನೀಡಿದ್ದಾರೆ ಅನ್ನೋ ಮಾಹಿತಿ ಹೊರಬಂದಿತ್ತು. ಆದರೆ ಕೆಎನ್ ರಾಜಣ್ಣ ರಾಜೀನಾಮೆ ನೀಡುವ ಮೊದಲೇ ಹೈಕಮಾಂಡ್ ಸೂಚನೆ ಬೆನ್ನಲ್ಲೇ ಸಂಪುಟದಿಂದ ವಜಾ ಮಾಡಲಾಗಿತ್ತು.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌