ಪಾಕಿಸ್ತಾನವನ್ನು ಭಯೋತ್ಪಾದಕ ಎಂದು ಘೋಷಿಸಿ : ಜಮೀರ್

Published : Feb 20, 2019, 08:29 AM IST
ಪಾಕಿಸ್ತಾನವನ್ನು ಭಯೋತ್ಪಾದಕ ಎಂದು ಘೋಷಿಸಿ : ಜಮೀರ್

ಸಾರಾಂಶ

ಪಾಕಿಸ್ತಾನವನ್ನು ಭಯೋತ್ಪಾದಕ ರಾಷ್ಟ್ರ ಎಂದು ಘೋಷಿಸಬೇಕೆಂದು ನಾನೂ ಒತ್ತಾಯಿಸುತ್ತೇನೆ. ಭಯೋತ್ಪಾದಕರು ಮುಸ್ಲಿಮರಲ್ಲಿ ಮಾತ್ರವಲ್ಲ, ಇತರೆ ಧರ್ಮದಲ್ಲೂ ಇದ್ದಾರೆ ಎಂದು ಸಚಿವ ಜಮೀರ್ ಅಹಮದ್ ಹೇಳಿದರು. 

ಚಿಕ್ಕಬಳ್ಳಾಪುರ :  ಪದೇ ಪದೇ ಭಾರತದ ಸ್ವಾಭಿಮಾನ ಕೆಣಕುತ್ತಿರುವ ಪಾಕಿಸ್ತಾನವನ್ನು ಭಯೋತ್ಪಾದಕ ರಾಷ್ಟ್ರ ಎಂದು ಘೋಷಣೆ ಮಾಡುವ ಜೊತೆಗೆ, ಭಾರತೀಯ ಯೋಧರ ಮೇಲಿನ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳುವ ಅನಿವಾರ್ಯತೆ ಎದುರಾಗಿದೆ ಎಂದು ಸಚಿವ ಜಮೀರ್‌ ಅಹಮದ್‌ ಖಾನ್‌ ಅಭಿಪ್ರಾಯಪಟ್ಟರು. 

ಬಾಗೇಪಲ್ಲಿ ಹೊರವಲಯದ ಕೊಡಿಕೊಂಡ ರಸ್ತೆಯಲ್ಲಿ ಷಾದಿ ಮಹಲ್‌ ಉದ್ಘಾಟಿಸಿದ ನಂತರ ಮಾತನಾಡಿದ ಅವರು, ಪಾಕಿಸ್ತಾನವನ್ನು ಭಯೋತ್ಪಾದಕ ರಾಷ್ಟ್ರ ಎಂದು ಘೋಷಿಸಬೇಕೆಂದು ನಾನೂ ಒತ್ತಾಯಿಸುತ್ತೇನೆ. ಭಯೋತ್ಪಾದಕರು ಮುಸ್ಲಿಮರಲ್ಲಿ ಮಾತ್ರವಲ್ಲ, ಇತರೆ ಧರ್ಮದಲ್ಲೂ ಇದ್ದಾರೆ ಎಂದರು. ಇಸ್ಲಾಂ ಧರ್ಮವೂ ಶಾಂತಿಯನ್ನು ಬಯಸುತ್ತದೆ. ಸೈನ್ಯದಲ್ಲಿಯೂ ಮುಸ್ಲಿಂ ಯೋಧರಿದ್ದಾರೆ. ಹಾಗಾಗಿ ಭಯೋತ್ಪಾದನೆ ಎಂಬುದು ಇಸ್ಲಾಂಗೆ ಸೀಮಿತವಲ್ಲ ಎಂದರು.

ಕಾಂಗ್ರೆಸ್ ಅಧಿಕಾರಕ್ಕೆ :  ದೇಶದಲ್ಲಿರುವ ಮುಸ್ಲಿಮರು ಮತದಾನ ಮಾಡುವುದೇ ಶೇ.50ರಷ್ಟುಮಾತ್ರ. ಒಂದು ವೇಳೆ ಶೇ.90ರಷ್ಟುಮತದಾನವನ್ನು ಮುಸ್ಲಿಮರು ಮಾಡಿದರೆ ರಾಜ್ಯದಲ್ಲಿ ಮಾತ್ರವಲ್ಲ, ದೇಶದಲ್ಲಿಯೇ ಕಾಂಗ್ರೆಸ್‌ ಅಧಿಕಾರಕ್ಕೆ ಬರಲಿದೆ. ರಾಹುಲ್‌ಗಾಂಧಿ ಪ್ರಧಾನಿಯಾಗಲಿದ್ದಾರೆ ಎಂದು ಹೇಳಿದರು.

ಇದೇ ವೇಳೆ ಕೃಷಿ ಸಚಿವ ಎನ್‌.ಎಚ್‌. ಶಿವಶಂಕರರೆಡ್ಡಿ ಮಾತನಾಡಿ, ದೇಶದಲ್ಲಿ ಅಲ್ಪಸಂಖ್ಯಾತರು ಭಯದಿಂದ ಬದುಕುವ ವಾತಾವರಣ ನಿರ್ಮಾಣವಾಗಿದೆ ಎಂದರು.

ನಮ್ಮದು ಜಾತ್ಯತೀತ ದೇಶವಾಗಿದೆ. ಆದರೆ ಇಂದಿನ ಪರಿಸ್ಥಿತಿಯಲ್ಲಿ ಅಲ್ಪಸಂಖ್ಯಾತರು ಭಯದ ವಾತಾವರಣದಲ್ಲಿ ಜೀವನ ಸಾಗಿಸುವ ಪರಿಸ್ಥಿತಿ ಇದೆ. ಜಾತ್ಯತೀತತೆ ಮತ್ತು ಸಂವಿಧಾನ ಉಳಿಸುವ ಕೆಲಸಕ್ಕೆ ಮುಂದಾಗಬೇಕಿದೆ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬೀಚ್‌ಗಳಲ್ಲಿ ಮದ್ಯ ಮಾರಾಟಕ್ಕೆ ಪರವಾನಗಿ ಬಗ್ಗೆ ಚರ್ಚೆ: ಡಿ.ಕೆ.ಶಿವಕುಮಾರ್‌
‘ನೆಕ್ಸ್ಟ್‌ ಸಿಎಂ’ ಬೆಟ್ಟಿಂಗ್‌ ನಿಯಂತ್ರಿಸಿ: ವಿ.ಸುನೀಲ್‌ ಕುಮಾರ್‌ ಆಗ್ರಹ