ಈದ್‌ ಮಿಲಾದ್‌ ವೇಳೆ ಪ್ಯಾಲೆಸ್ತೀನ್ ಬಾವುಟ ಪ್ರದರ್ಶನ: ಐವರ ಬಂಧನ

Kannadaprabha News, Ravi Janekal |   | Kannada Prabha
Published : Sep 09, 2025, 08:26 AM IST
Vijayapur

ಸಾರಾಂಶ

ಬಂಗಾರಪೇಟೆಯಲ್ಲಿ ಈದ್ ಮಿಲಾದ್ ಮೆರವಣಿಗೆಯಲ್ಲಿ ಪ್ಯಾಲೆಸ್ತೀನ್ ಧ್ವಜ ಪ್ರದರ್ಶಿಸಿದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ವಿಜಯಪುರದಲ್ಲೂ ಇದೇ ರೀತಿಯ ಘಟನೆ ವರದಿಯಾಗಿದೆ.

ಬಂಗಾರಪೇಟೆ (ಸೆ.9): ಕಳೆದ ಶುಕ್ರವಾರ ಪಟ್ಟಣದಲ್ಲಿ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ನಡೆದ ಮೆರವಣಿಗೆಯಲ್ಲಿ ಪುಂಡರು ಪ್ಯಾಲೆಸ್ತೀನ್ ಬಾವುಟ ಪ್ರದರ್ಶಿಸಿ ಅಶಾಂತಿ ಉಂಟು ಮಾಡಿದ ಘಟನೆಗೆ ಸಂಬಂಧಿಸಿದಂತೆ ಕೋಲಾರ ಜಿಲ್ಲೆಯ ಬಂಗಾರಪೇಟೆ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. 

ಪಟ್ಟಣದ ಖಾದರ್ ಲೇಔಟ್‌ನ ಸೈಯದ್ ಗೌಸ್, ಸೋನು, ಸಿ.ರಹೀಂ ಕಾಂಪೌಂಡ್‌ನ ಸುಲ್ತಾನ್, ನಾಸೀರ್ ಮತ್ತು ಸೇಟ್ ಕಾಂಪೌಂಡ್‌ನ ಸೈಯದ್ ಬಂಧಿತ ಆರೋಪಿಗಳಾಗಿದ್ದು, ಪೊಲೀಸರು ಹೆಚ್ಚಿನ ವಿಚಾರಣೆ ನಡೆಸಿದ್ದಾರೆ. ಕಳೆದ ಎರಡು ದಿನಗಳಿಂದ ಪ್ಯಾಲೆಸ್ತೀನ್ ಧ್ವಜ ಪ್ರದರ್ಶನ ಮಾಡಿ ಪುಂಡಾಟಿಕೆ ಮಾಡಿದವರನ್ನು ಬಂಧಿಸಿ ಗಡಿ ಪಾರು ಮಾಡಲು ಮಾಜಿ ಸಂಸದ ಎಸ್.ಮುನಿಸ್ವಾಮಿ, ವಿವಿಧ ಹಿಂದೂ ಪರ ಸಂಘಟನೆಗಳು ಪೊಲೀಸರ ಮೇಲೆ ಒತ್ತಡ ಹೇರಿದ್ದರು.

ವಿಜಯಪುರದಲ್ಲೂ ಪ್ಯಾಲೆಸ್ತೀನ್ ಧ್ವಜ ಪ್ರದರ್ಶನ:

ವಿಜಯಪುರದಲ್ಲೂ ಸೆಪ್ಟಂಬರ್ 8ರಂದು ಈದ್ ಮಿಲಾದ್‌ ಆಚರಣೆಯ ನಿಮಿತ್ತ ಸ್ಥಳೀಯ ಮುಸ್ಲಿಂ ಸಂಘಟನೆಯೊಂದು ಆಯೋಜಿಸಿದ್ದ ಮೆರವಣಿಗೆಯಲ್ಲಿ ಪ್ಯಾಲೆಸ್ತೀನ್ ರಾಷ್ಟ್ರಧ್ವಜವನ್ನು ಪ್ರದರ್ಶಿಸಲಾದ ಬಗ್ಗೆ ವರದಿಯಾಗಿತ್ತು. ನಗರದ ವಿವಿಧ ಭಾಗಗಳಿಂದ ಗಾಂಧಿ ಚೌಕ್‌ ಕಡೆಗೆ ಸಾಗಿದ ಈ ಮೆರವಣಿಗೆಯ ಸಂದರ್ಭದಲ್ಲಿ ಘಟನೆ ನಡೆದಿತ್ತು. ಘಟನೆಗೆ ಸಂಬಂಧಿಸಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌