ಪಂಚಮಸಾಲಿ 2ಎ ಮೀಸಲಾತಿ: ಸರ್ಕಾರಕ್ಕೆ ಸಂಕ್ರಾಂತಿವರೆಗೆ ಗಡುವು ನೀಡಿದ ಜಯಮೃತ್ಯುಂಜಯಶ್ರೀ

By Ravi JanekalFirst Published Dec 23, 2023, 2:37 PM IST
Highlights

ನಾಳೆ ಜಿಲ್ಲೆಯಲ್ಲಿ ಪಂಚಮಸಾಲಿಗೆ 2ಎ ಮೀಸಲಾತಿ ನೀಡುವಂತೆ ರಾಜ್ಯ ಹೆದ್ದಾರಿ ತಡೆದು ಇಷ್ಟಲಿಂಗ ಪೂಜೆ ಮಾಡುವ ಮೂಲಕ ಹೋರಾಟ, ಸಮಾವೇಶ ನಡೆಸಲಾಗುವುದು ಎಂದು ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.

ರಾಯಚೂರು (ಡಿ.23): ನಾಳೆ ಜಿಲ್ಲೆಯಲ್ಲಿ ಪಂಚಮಸಾಲಿಗೆ 2ಎ ಮೀಸಲಾತಿ ನೀಡುವಂತೆ ರಾಜ್ಯ ಹೆದ್ದಾರಿ ತಡೆದು ಇಷ್ಟಲಿಂಗ ಪೂಜೆ ಮಾಡುವ ಮೂಲಕ ಹೋರಾಟ, ಸಮಾವೇಶ ನಡೆಸಲಾಗುವುದು ಎಂದು ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.

ಇಂದು ರಾಯಚೂರು ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,  ಲಿಂಗಾಯತ ಸಮಾಜಕ್ಕೆ 2ಎ  ಮೀಸಲಾತಿ ಕೋರಿ ಆರನೇ ಹಂತದ ಹೋರಾಟಕ್ಕೆ ಚಾಲನೆ ನೀಡಿದ್ದು, ಡಿ.24 ರಂದು ಲಿಂಗಸೂಗುರು ತಾಲೂಕಿನ ಯರಡೋಣಿ ಗ್ರಾಮದಲ್ಲಿ ರಾಜ್ಯ ಹೆದ್ದಾರಿ ತಡೆದು ಇಷ್ಟಲಿಂಗ ಪೂಜೆ ಮೂಲಕ ಹೋರಾಟ ಮಾಡುತ್ತೇವೆ ಎಂದರು.

ಪಂಚಮಸಾಲಿಗಳಿಂದ ಮತ್ತೆ ಶುರುವಾಯ್ತು ಹೋರಾಟ : ಮೀಸಲಾತಿಗೆ ಪಟ್ಟು

 

ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದಾಗ ಸಿಎಂ ಒಂದು ವಾರದೊಳಗೆ ಕಾನೂನು ತಜ್ಞರ ಜತೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುವ ಭರವಸೆ ನೀಡಿದ್ದರು. ಆದರೆ ಇಂದಿಗೆ ಅವರು ಹೇಳಿದ ಕಾಲಮಿತಿ ಮುಗಿದಿದೆ. ಹೀಗಾಗಿ ಪುನಃ ಹೋರಾಟ ಆರಂಭಿಸುತ್ತಿದ್ದೇವೆ. ಎಲ್ಲ ಜಿಲ್ಲೆಗಳಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಇಷ್ಟಲಿಂಗ ಪೂಜೆ ಹೋರಾಟ ಮಾಡಲಾಗುವುದು. ನಾಳಿನ ಹೋರಾಟಕ್ಕೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಚಾಲನೆ ನೀಡಲಿದ್ದಾರೆ. ಶಾಸಕ ವಿಜಯಾನಂದ ಕಾಶಪ್ಪನವರ್, ಸಂಸದ ಕರಡಿ ಸಂಗಣ್ಣ ಸೇರಿ ಸಮಾಜದ ಗಣ್ಯರು ಪಾಲ್ಗೊಳ್ಳುವರು. ಸರ್ಕಾರಕ್ಕೆ ಸಂಕ್ರಾಂತಿವರೆಗೆ ಗಡುವು ನೀಡಲಾಗುತ್ತಿದೆ ಅಷ್ಟರೊಳಗೆ ನಿರ್ಧಾರ ಪ್ರಕಟಿಸಬೇಕು ಎಚ್ಚರಿಕೆ ನೀಡಿದರು.

ಸಿಎಂ ಭರವಸೆ ನಂತರ ಪಂಚಮಸಾಲಿ 2ಎ ಹೋರಾಟ ಅಂತ್ಯ

ಹಿಂದಿನ ಸರ್ಕಾರ 2ಡಿ ಮೀಸಲಾತಿ ನೀಡಲು ಮುಂದಾಗಿತ್ತು. ಆದರೆ, ಚುನಾವಣಾ ವೇಳೆ ನೀತಿ ಸಂಹಿತೆ ಜಾರಿಯಾದ ಕಾರಣ ಅದು ಜಾರಿ ಆಗಲಿಲ್ಲ. ಬಿಜೆಪಿ ಸರ್ಕಾರದ ನಿರ್ಧಾರವನ್ನು ಈ ಸರ್ಕಾರ ಒಪ್ಪುತ್ತಿಲ್ಲ. ಹೀಗಾಗಿ ನಮ್ಮ ಬೇಡಿಕೆಯನುಸಾರ 2ಎ ಮೀಸಲಾತಿಯನ್ನೆ ನೀಡಲಿ. ಹಿಂದೆ ಸಿದ್ದರಾಮಯ್ಯನವರೇ ಮೀಸಲಾತಿ ಪ್ರಮಾಣವನ್ನು ಶೇ.70ರಷ್ಡು ಹೆಚ್ಚಿಸಲು ಸಾಧ್ಯವಿದೆ ಎಂದಿದ್ದರು. ಅದರಂತೆ ಮೀಸಲಾತಿ ಹೆಚ್ಚಿಸಿ  ಬೇಡಿಕೆ ಈಡೇರಿಸಲು ಅಗ್ರಹಿಸಿದರು.

click me!