ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಹೋರಾಟ ಮತ್ತೆ ಆರಂಭ: ಇದು 6ನೇ ಹಂತದ ಚಳವಳಿ

By Sathish Kumar KH  |  First Published Sep 10, 2023, 11:51 AM IST

ರಾಜ್ಯದಲ್ಲಿ ಲಿಂಗಾಯತ ಸಮುದಾಯಕ್ಕೆ 2ಎ ಮೀಸಲಾತಿ ಕಲ್ಪಿಸಬೇಕೆಂಬ ಹೋರಾಟ ಮತ್ತೆ ಮುನ್ನೆಲೆಗೆ ಬಂದಿದ್ದು, ಬೆಳಗಾವಿಯಲ್ಲಿ 6ನೇ ಹಂತದ ಹೋರಾಟವನ್ನು ಆರಂಭಿಸಲಾಗಿದೆ.


ಬೆಳಗಾವಿ (ಸೆ.10): ರಾಜ್ಯದಲ್ಲಿ ಲಿಂಗಾಯತ ಸಮುದಾಯಕ್ಕೆ 2ಎ ಮೀಸಲಾತಿ ಕಲ್ಪಿಸಬೇಕೆಂಬ ಹೋರಾಟ ಮತ್ತೆ ಮುನ್ನೆಲೆಗೆ ಬಂದಿದೆ. ಈಗಾಗಲೇ ಬಿಜೆಪಿ ಸರ್ಕಾರದ ಅವಧಿಯಲ್ಲಿ ತೀವ್ರ ಪ್ರತಿಭಟನೆ ಮತ್ತು ಧರಣಿ ಸತ್ಯಾಗ್ರಹದ ಮೂಲಕ ಸರ್ಕಾರವನ್ನು ನಡುಗಿಸಿ 2ಡಿ ಮೀಸಲಾತಿ ಪಡೆದಿದ್ದರೂ ಅದನ್ನು ಒಪ್ಪದೇ 2ಎ ಮೀಸಲಾತಿಗಾಗಿ ಹೋರಾಟ ಆರಂಭಿಸಿದೆ.

ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ಲಿಂಗಾಯತ ಉಪಪಂಗಡಗಳಿಗೆ ಕೇಂದ್ರ ಸರ್ಕಾರದ ಒಬಿಸಿ ಮೀಸಲಾತಿಗೆ ಶಿಫಾರಸಿಗೆ ಆಗ್ರಹಿಸಿ ಲಿಂಗಾಯತ ಪಂಚಮಸಾಲಿ ಸಮಾಜದಿಂದ ಆರನೇ ಹಂತದ ಹೋರಾಟವನ್ನು ಆರಂಭಿಸಲಾಗಿದೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿಯಲ್ಲಿ ಬಸವೇಶ್ವರ ವೃತ್ತದಲ್ಲಿ ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಬಸವ ಜಯಮೃತ್ಯುಂಜಯ ಶ್ರೀಗಳು ಮೀಸಲಾತಿ ಪ್ರತಿಭಟನಾ ಚಳುವಳಿಗೆ ಚಾಲನೆ ನೀಡಿದರು. 

Tap to resize

Latest Videos

ಎಸ್‌.ಎಲ್.ಭೈರಪ್ಪ: ತಮ್ಮ ಸತ್ತಾಗ ಅಂತ್ಯಕ್ರಿಯೆಗೆ ಯಾರೂ ಬರಲಿಲ್ಲ, ತಿನ್ನಲು ತುತ್ತು ಆಹಾರವನ್ನೂ ಕೊಡಲಿಲ್ಲ

ನಿಪ್ಪಾಣಿಯ ಪ್ರಮುಖ ಬೀದಿಗಳಲ್ಲಿ ತೆರೆದ ವಾಹನದಲ್ಲಿ ಸ್ವಾಮೀಜಿಗಳ ಮೆರವಣಿಗೆ ಮಾಡಿದರು. ಈ ವೇಳೆ ಛತ್ರಪತಿ ಶಿವಾಜಿ ಮಹಾರಾಜ ಸಾಂಸ್ಕೃತಿಕ ಭವನಕ್ಕೆ ಆಗಮಿಸಿದ ಬಸವ ಜಯಮೃತ್ಯುಂಜಯ ಸ್ವಾಮೀಜಿ, ಪಂಚಮಸಾಲಿ ಲಿಂಗಾಯತರ ಮೀಸಲಾತಿ ಕುರಿತು ಸಮಾವೇಶ ನಡೆಸಲಿದ್ದಾರೆ. ಇನ್ನು ಸಮಾವೇಶದ ಬಳಿಕ ರಾಷ್ಟ್ರೀಯ ಹೆದ್ದಾರಿ 4ರವರೆಗೆ ಪಾದಯಾತ್ರೆಯನ್ನು ಮಾಡಲಿದ್ದಾರೆ. ಬಳಿಕ ರಾಷ್ಟ್ರೀಯ ಹೆದ್ದಾರಿ 4ರಲ್ಲಿಯೇ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರಿಂದ ಸಾಮೂಹಿಕ ಇಷ್ಟಲಿಂಗ ಪೂಜೆ ನೆರವೇರಿಸಲಾಗತ್ತಿದೆ. ಇನ್ನು ಸಮಾವೇಶಕ್ಕೆ ಜನರು ತಂಡೋಪತಂಡವಾಗಿ ಆಗಮಿಸುತ್ತಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ನಿಪ್ಪಾಣಿ ನಗರದಾದ್ಯಂತ ಪೊಲೀಸ್ ಬಿಗಿ ಭದ್ರತೆ ಒದಗಿಸಿದ್ದಾರೆ.

2024 ಲೋಕಸಭಾ ಚುನಾವಣೆಯೊಳಗೆ ಮೀಸಲಾತಿಗೆ ಪಟ್ಟು: ಶ್ರಾವಣ ಮಾಸದಲ್ಲಿ ಪಂಚಮಸಾಲಿಗೆ ಮೀಸಲಾತಿಗಾಗಿ ಮತ್ತೆ ಹೋರಾಟ ಆರಂಭಿಸಲಾಗಿದೆ. ಪ್ರತಿ ತಾಲೂಕಿನಲ್ಲಿ ಇಷ್ಟಲಿಂಗ ಪೂಜೆ ಮಾಡುವ ಮೂಲಕ ಮೀಸಲಾತಿಗಾಗಿ ಜಾಗೃತಿ ಮೂಡಿಸಲಾಗುವುದು. ಪಂಚಮಸಾಲಿಗೆ 2 ಎ ಮೀಸಲಾತಿ ನೀಡಬೇಕು. ಇಲ್ಲಿವೆ ಕೇಂದ್ರದ ಒಬಿಸಿ ಪಟ್ಟಿಗೆ ಸೇರಿಸಬೇಕು. ಈ ನಿಟ್ಟಿನಲ್ಲಿ ಇಂದಿನ ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳಬೇಕು. ಕಾಂಗ್ರೆಸ್ ಪಕ್ಷಕ್ಕೆ ಪಂಚಮಸಾಲಿ ಸಮಾಜದ ಶಕ್ತಿ ಏನು ಎಂಬುವುದು ಗೊತ್ತಾಗಿದೆ. ಮುಖ್ಯಮಂತ್ರಿಗಳ ಮೇಲೆ ನಾವು ಭರವಸೆ ಇಟ್ಟುಕೊಂಡಿದ್ದೇವೆ. 2024 ರ ಲೋಕಸಭಾ ಚುನಾವಣೆಯೊಳಗೆ ಮೀಸಲಾತಿಯ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಮಂಗಳೂರು ಬೆಡಗಿ ಆಶಿಕಾ ಪಡುಕೋಣೆ ಹಾಟ್‌ ಲುಕ್‌ ನೋಡಿ: ಇವಳೇನಾ ಸೀರೆಯುಡುವ 'ತ್ರಿನಯನಿ'

ಪಂಚಮಸಾಲಿ ಸಮಾಜಕ್ಕೆ ದುಡಿದವರಿಗೆ ಸಚಿವ ಸ್ಥಾನ ಕೊಡಿ: ರಾಜ್ಯದ ಸರಕಾರ ಪಂಚಮಸಾಲಿ ಸಮಾಜಕ್ಕೆ ದುಡಿದವರಿಗೆ ಸಚಿವ ಸ್ಥಾನ ನೀಡಬೇಕಿತ್ತು. ಈಗ ಇಬ್ಬರಿಗೆ ಸಚಿವ ಸ್ಥಾನ ನೀಡಿದೆಸಮಾಜಕ್ಕಾಗಿ ದುಡಿದ ಲಕ್ಷ್ಮೀ ಹೆಬ್ಬಾಳಕರ್, ವಿಜಯಾನಂದ ಕಾಶಪ್ಪನವರ, ವಿನಯ್‌ ಕುಲಕರ್ಣಿ, ಬಿ.ಆರ್. ಪಾಟೀಲರನ್ನು ಸಚಿವರನ್ನಾಗಿ ಮಾಡಬೇಕಿತ್ತು ಎಂದು ಪಂಚಮಸಾಲಿ ಸಮಾಜದ ಕೂಡಲಸಂಗಮದ ಪೀಠದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು. ಈ ಕುರಿತು ಕೊಪ್ಪಳದಲ್ಲಿ ಮಾತನಾಡಿದ್ದ ಜಯಮೃತ್ಯುಂಜಯ ಸ್ವಾಮೀಜಿ ಅವರು, ಈಗ ಶಿವಾನಂದ ಪಾಟೀಲರನ್ನು ಮಾಡಿದ್ದು ಎಷ್ಟು ಸರಿ ಎಂದು ಸಮಾಜದವರು ಕೇಳುತ್ತಿದ್ದಾರೆ. ಮುಂದಿನ ದಿನಗಳಲ್ಲಿ ರಾಜ್ಯ ಸಚಿವ ಸಂಪುಟಕ್ಕೆ ಇನ್ನೂ ಮೂವರನ್ನು ಸೇರಿಸಿಕೊಳ್ಳಬೇಕು. ಪಂಚಮಸಾಲಿ ಸಮಾಜದ ಶಕ್ತಿ ಏನು ಎಂಬುವುದು ಈ ಚುನಾವಣೆಯಲ್ಲಿ ಗೊತ್ತಾಗಿದೆ. ಕಾಂಗ್ರೆಸ್ ಪಕ್ಷದ ಆಂತರಿಕ ವಿಷಯ ಏನೇ ಇರಲಿ. ಪಂಚಮಸಾಲಿಗಳಿಗೆ ಹೆಚ್ಚಿನ ಸ್ಥಾನ ನೀಡಬೇಕು ಎಂದು ಹೇಳಿದರು. 

click me!