
ಬೆಳಗಾವಿ (ಅ.4): ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಪರಮಾನಂದವಾಡಿ ಗ್ರಾಮದಲ್ಲಿ 2019 ರಲ್ಲಿ ನಡೆದ ಅತ್ಯಾ೧ಚಾರ ಮತ್ತು ಕೊಲೆ ಪ್ರಕರಣಕ್ಕೆ ಇಂದು ನ್ಯಾಯ ಸಿಕ್ಕಿದೆ. ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾ೧ಚಾರವೆಸಗಿ, ಕೊಂದು ಬಾವಿಗೆ ಎಸೆದಿದ್ದ ಆರೋಪಿ ಭರತೇಶ ಮಿರ್ಜಿಗೆ ನ್ಯಾಯಾಧೀಶೆ ಸಿ.ಎಂ ಪುಷ್ಪಲತಾ ಗಲ್ಲು ಶಿಕ್ಷೆ ವಿಧಿಸಿದ್ದಾರೆ.
ಕುಡಚಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಈ ಪ್ರಕರಣದ ತನಿಖಾಧಿಕಾರಿಯಾಗಿದ್ದ ಪಿಎಸ್ಐ ಗಿರಿಮಲ್ಲಪ್ಪ ಉಪ್ಪಾರ, ಸದ್ಯ ಅಥಣಿ ಪೊಲೀಸ್ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಶಿಕ್ಷೆಯ ಘೋಷಣೆಯ ಬಳಿಕ ಪರಮಾನಂದವಾಡಿ ಗ್ರಾಮದಲ್ಲಿ ಸಂಭ್ರಮದ ವಾತಾವರಣ ನಿರ್ಮಾಣವಾಗಿದ್ದು, 'ಮಿಡಿದ ಮನಗಳ ಸಂಗಮ' ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇದಿಕೆಯಲ್ಲಿ ಬಾಲಕಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಇದನ್ನೂ ಓದಿ: ಬೆಂಗಳೂರು: ಪತಿಯಿಂದ ವರದಕ್ಷಿಣೆ ಕಿರುಕುಳ ಆರೋಪ; ಗೃಹಿಣಿ ನೇಣಿಗೆ ಶರಣು!
ಭಾಷಣದ ವೇಳೆ ಪಿಎಸ್‌ಐ ಕಣ್ಣೀರು:
ಶ್ರದ್ಧಾಂಜಲಿ ಸಲ್ಲಿಸಿ ಬಳಿಕ ಭಾಷಣ ಮಾಡುವಾಗ ಭಾವುಕರಾದ ಪಿಎಸ್‌ಐ ಗಿರಿಮಲ್ಲಪ್ಪ ಅವರು ಬಿಕ್ಕಿಬಿಕ್ಕಿ ಅತ್ತರು. ಅಂದು ಅಪ್ರಾಪ್ತ ಬಾಲಕಿಯ ಮೇಲೆ ನಡೆದಿದ್ದ ಕ್ರೂರತನ ನೆನದು ಕಣ್ಣೀರಾಕಿದರು. ಈ ಘಟನೆ ಗ್ರಾಮಸ್ಥರಲ್ಲಿ ತೀವ್ರ ಕೋಪ ಮತ್ತು ದುಃಖವನ್ನು ಮೂಡಿಸಿತ್ತು, ಆದರೆ ಇಂದಿನ ತೀರ್ಪು ನ್ಯಾಯದ ಗೆಲುವಿನ ಸಂಕೇತವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ