
ಮಂಗಳೂರು (ಜು.10) : ನೃತ್ಯ ಕಲಿಕೆಯಿಂದ ಜೀವನದಲ್ಲಿ ತಾಳ್ಮೆ ಸಹನೆ ಏಕಾಗ್ರತೆ ಬೆಳೆಯಲು ಸಾಧ್ಯ ಎಂದು ಸ್ಪೀಕರ್ ಯು.ಟಿ. ಖಾದರ್ ಅಭಿಪ್ರಾಯಪಟ್ಟರು. ಅವರು ನಗರದ ಪುರಭವನದಲ್ಲಿ ಭರತಾಂಜಲಿ ಕೊಟ್ಟಾರ ಮಂಗಳೂರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಯೋಗದಲ್ಲಿ ಭಾನುವಾರ ಆಯೋಜಿಸಿರುವ ‘ನೃತ್ಯಾಮೃತಂ-2023’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಭರತನಾಟ್ಯ ಮತ್ತು ಯಕ್ಷಗಾನ ಕರಾವಳಿಯ ಎರಡು ಕಣ್ಣುಗಳು. ಮನುಷ್ಯ ಸುಸಂಸ್ಕೃತ ಜೀವನಕ್ಕೆ ಕಲಾಭಿರುಚಿಯನ್ನು ಬೆಳೆಸಿಕೊಳ್ಳುವುದು ಅತ್ಯಗತ್ಯ. ಭರತನಾಟ್ಯ ಕಲೆಯು ಆಧ್ಯಾತ್ಮಿಕ ವಿಷಯಗಳ ಅರಿವನ್ನು ನೀಡುತ್ತದೆ. ಕಲೆಯಲ್ಲಿ ಪ್ರಸಿದ್ಧಿ ಪಡೆಯಬೇಕಾದರೆ ಕಠಿಣ ಪರಿಶ್ರಮ ಅತ್ಯಗತ್ಯ. ಸನಾತನ ಭಾರತೀಯ ಸಂಸ್ಕೃತಿ, ಸಂಸ್ಕಾರಗಳನ್ನು ಮಕ್ಕಳಿಗೆ ಹಾಗೂ ಯುವ ಜನಾಂಗಕ್ಕೆ ತಿಳಿಸಿದಾಗ ಮಾತ್ರ ಮುಂದಿನ ಪೀಳಿಗೆಗೆ ಸುಂಸ್ಕೃತರಾಗಲು ನಾವು ಹಾಗೂ ಕಲಾವಿದರು ಪ್ರಯತ್ನ ಮಾಡಬೇಕು ಎಂದರು.
ಪತ್ರಕರ್ತರಿಗೂ ‘ಆರೋಗ್ಯ ಭಾಗ್ಯ’ ನೀಡಲು ಸಿಎಂ ಜತೆ ಚರ್ಚೆ: ಸ್ಪೀಕರ್ ಯು.ಟಿ.ಖಾದರ್
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್, ಗಿರಿ ಪ್ರಕಾಶ್ ತಂತ್ರಿ, ನಾಟ್ಯ ಗುರು ಕಲಾಶ್ರೀ ಕಮಲಾ ಭಟ್ ಇದ್ದರು.
ಭರತಾಂಜಲಿ ನಿರ್ದೇಶಕ ಶ್ರೀಧರ ಹೊಳ್ಳ ಸ್ವಾಗತಿಸಿದರು. ನಿರ್ದೇಶಕಿ ವಿದುಷಿ ಪ್ರತಿಮಾ ಶ್ರೀಧರ್ ವಂದಿಸಿದರು.
ವಿಧಾನಸಭೆಯೊಳಗೆ ಸಂವಿಧಾನ ಪೀಠಿಕೆ ಓದು; ಸ್ಪೀಕರ್ ಖಾದರ್ ಹೊಸ ಸಂಪ್ರದಾಯ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ