ಆರ್‌ಎಸ್‌ಎಸ್‌ನ ಗಣವೇಷ ತೊಟ್ಟ ಪಿಡಿಒ ಪಥ ಸಂಚಲನದಲ್ಲಿ ಭಾಗಿ : ಅಮಾನತು

Kannadaprabha News   | Kannada Prabha
Published : Oct 18, 2025, 04:55 AM IST
RSS 100 Years

ಸಾರಾಂಶ

ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್‌) ಏರ್ಪಡಿಸಿದ್ದ ಪಥ ಸಂಚಲನದಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ರಾಯಚೂರು ಜಿಲ್ಲೆ ಸಿರವಾರ ತಾಲೂಕು ಪಂಚಾಯತ್‌ ಅಭಿವೃದ್ಧಿ ಅಧಿಕಾರಿ (ಪಿಡಿಒ) ಪ್ರವೀಣ್‌ಕುಮಾರ್‌ ಕೆ.ಪಿ. ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸರ್ಕಾರ ಅಮಾನತು ಮಾಡಿದೆ.

ಬೆಂಗಳೂರು : ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್‌) ಏರ್ಪಡಿಸಿದ್ದ ಪಥ ಸಂಚಲನದಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ರಾಯಚೂರು ಜಿಲ್ಲೆ ಸಿರವಾರ ತಾಲೂಕು ಪಂಚಾಯತ್‌ ಅಭಿವೃದ್ಧಿ ಅಧಿಕಾರಿ (ಪಿಡಿಒ) ಪ್ರವೀಣ್‌ಕುಮಾರ್‌ ಕೆ.ಪಿ. ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸರ್ಕಾರ ಅಮಾನತು ಮಾಡಿದೆ.

ಪ್ರವೀಣ್‌ ಕುಮಾರ್‌ ಅವರು ಪ್ರಸ್ತುತ ಲಿಂಗಸುಗೂರು ಕ್ಷೇತ್ರದ ಬಿಜೆಪಿ ಶಾಸಕ ಮಾನಪ್ಪ ವಜ್ಜಲ್‌ ಅವರ ಆಪ್ತ ಸಹಾಯಕರಾಗಿ ನಿಯೋಜನೆ ಮೇಲೆ ಕರ್ತವ್ಯ ಮಾಡುತ್ತಿದ್ದರು.

ಕರ್ನಾಟಕ ಸಿವಿಲ್‌ ಸೇವಾ(ನಡತೆ) ನಿಯಮಗಳನ್ನು ಉಲ್ಲಂಘಿಸಿರುವುದು ಹಾಗೂ ಒಬ್ಬ ಸರ್ಕಾರಿ ನೌಕರನಿಗೆ ತರವಲ್ಲದ ರೀತಿಯಲ್ಲಿ ನಡೆದುಕೊಂಡಿರುವುದು ಮೇಲ್ನೋಟಕ್ಕೆ ಕಂಡು ಬಂದಿರುವುದರಿಂದ ಪ್ರವೀಣ್‌ ಕುಮಾರ್‌ ಅವರ ವಿರುದ್ಧ ಇಲಾಖಾ ವಿಚಾರಣೆ ಕಾಯ್ದಿರಿಸಿ ಮುಂದಿನ ಆದೇಶದವರೆಗೆ ಅಮಾನತುಗೊಳಿಸಿ ಪಂಚಾಯತ್‌ ರಾಜ್‌ ಆಯುಕ್ತೆ ಡಾ.ಅರುಂಧತಿ ಚಂದ್ರಶೇಖರ್‌ ಆದೇಶಿಸಿದ್ದಾರೆ.

ಪ್ರವೀಣ್‌ ಕುಮಾರ್‌ ಅ.12ರಂದು ಲಿಂಗಸುಗೂರು ಪಟ್ಟಣದಲ್ಲಿ ಏರ್ಪಡಿಸಿದ್ದ ಆರ್‌ಎಸ್‌ಎಸ್‌ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಸಂಘದ ಸಮವಸ್ತ್ರ ಧರಿಸಿ ಪಥಸಂಚಲನದಲ್ಲಿ ಭಾಗವಹಿಸಿದ್ದರು.

ಆರೆಸ್ಸೆಸ್ ನಿರ್ಬಂಧ ರಾಷ್ಟ್ರ ವಿರೋಧಿ ಕೃತ್ಯ: ರಾಜ್ಯ ಸರ್ಕಾರದ ವಿರುದ್ಧ ಬೊಮ್ಮಾಯಿ ವಾಗ್ದಾಳಿ

ಹಾವೇರಿ, ): ರಾಜ್ಯದಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಆಗಿದೆ. ನಾಗರಿಕರ ಹಕ್ಕು ಮೊಟಕುಗೊಳಿಸಲಾಗಿದೆ. ಆರೆಸ್ಸೆಸ್ಗೆ ನಿರ್ಬಂಧ ಹೇರಿರುವುದು ರಾಷ್ಟ್ರವಿರೋಧಿ ಕೃತ್ಯ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರಿ ನೌಕರರು ಭಾಗಿಯಾಗಬಾರದು ಅಂತಾ ಸಂವಿಧಾನ ಹೇಳಿದೆಯಾ?

ಆರೆಸ್ಸೆಸ್ ನಿರ್ಬಂಧ ಕುರಿತು ಇಂದು ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ ಅವರು, ಆರ್‌ಎಸ್‌ಎಸ್ ಸಾರ್ವಜನಿಕ ಸಾಮಾಜಿಕ ದೇಶಭಕ್ತಿ ಸಂಸ್ಥೆ. ಇದು ರಾಜಕೀಯ ಸಂಘಟನೆ ಅಲ್ಲ, ನೋಂದಣಿಯೂ ಆಗಿಲ್ಲ. ಪ್ರಧಾನಿಗಳೇ ಆರ್‌ಎಸ್‌ಎಸ್ ಸದಸ್ಯರು! ಗಣವೇಶಧಾರಿಯಾಗಿ ಸಂಘಟನೆಯಲ್ಲಿ ಸರ್ಕಾರಿ ನೌಕರ ಭಾಗಿಯಾಗಬಾರದು ಅಂತ ಯಾವ ಆದೇಶದಲ್ಲಿದೆ? ಯಾವ ಕೋರ್ಟ್ ಆದೇಶದಲ್ಲಿದೆ? ಸರ್ಕಾರಿ ನೌಕರರು ಭಾಗಿಯಾಗಬಾರದು ಎಂದು ಎಲ್ಲಿದೆ? ಪಿಡಿಓ ಅವರನ್ನ ಯಾಕೆ ಅಮಾನತು ಮಾಡಿದ್ದೀರಿ? ಕರ್ತವ್ಯಲೋಪ ಮಾಡಿದ್ದನಾ? ಭ್ರಷ್ಟಾಚಾರ ಮಾಡಿದ್ದನಾ? ಆರೆಸ್ಸೆಸ್ ಪಥಸಂಚಲನದಲ್ಲಿ ಭಾಗಿಯಾದರೆ ಅಮಾನತು ಮಾಡುವಂತೆ ಸಂವಿಧಾನದಲ್ಲಿ ಹೇಳಿದೆಯೇನು? ಎಂದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸ್ತ್ರಿರೋಗ ತಜ್ಞೆ, ಪುತ್ರನ ದುರಂತ ಅಂತ್ಯ, ರಾತ್ರಿ ಜಗಳವಾಡಿದ ಇಬ್ಬರು ಬೆಳಗ್ಗೆ ಶವವಾಗಿ ಪತ್ತೆ
ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!