
ಬೆಂಗಳೂರು (ಆ.4): ಡಾಂಬರೀಕರಣ ಕಾಮಗಾರಿಯ ಹಿನ್ನೆಲೆಯಲ್ಲಿ ಪೀಣ್ಯ ಮೇಲ್ಸೇತುವೆ ಮೇಲೆ ಆ.3 ರಿಂದ 12 ರವರೆಗೆ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ಎಲ್ಲ ರೀತಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.
ರಾಷ್ಟ್ರೀಯ ಹೆದ್ದಾರಿ-4 ರ ಪೀಣ್ಯ ಎಲಿವೇಟೆಡ್ ಫೈಓವರ್ (ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಮೇಲ್ಸೇತುವೆ) ಮೇಲೆ ಡಾಂಬರೀಕರಣ ಕಾಮಗಾರಿಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕೈಗೊಳ್ಳಲಾಗಿದ್ದು, ಸಾರ್ವಜನಿಕರ ಸುಗಮ ಸಂಚಾರದ ದೃಷ್ಟಿಯಿಂದ ಆ.3 ರಿಂದ 12 ರವರೆಗೆ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಹಾಗೂ ಶನಿವಾರ ಮತ್ತು ಭಾನುವಾರ ರಾತ್ರಿ 12 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ತುಮಕೂರು ಕಡೆಗೆ ಹೋಗುವ ಎಲ್ಲ ರೀತಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದು ಸಂಚಾರಿ ಪೊಲಿಸರು ತಿಳಿಸಿದ್ದಾರೆ.
\Bಸಂಚಾರ ನಿರ್ಬಂಧ: \Bರಾಷ್ಟ್ರೀಯ ಹೆದ್ದಾರಿ-4 ರ ಪೀಣ್ಯ ಎಲಿವೇಟೆಡ್ ಫ್ಲೈಓವರ್ ಮೇಲೆ ಎಸ್.ಆರ್.ಎಸ್ ಅಪ್ಪರ್ ರ್ಯಾಂಪ್‌ನಿಂದ ಕೆನ್ನಮೆಟಲ್ ವಿಡಿಯಾ ಡೌನ್ ರ್ಯಾಂಪ್‌ವರೆಗೆ ಸಂಚಾರ ನಿರ್ಬಂಧಿಸಲಾಗಿದೆ.
\Bಪರ್ಯಾಯ ಮಾರ್ಗ: \Bನಗರದಿಂದ ನೆಲಮಂಗಲ ಕಡೆಗೆ ಸಂಚರಿಸುವ ವಾಹನಗಳು ಎಸ್.ಆರ್.ಎಸ್ ಅಪ್ಪರ್ ರ್ಯಾಂಪರ್ ಪ್ಲೈ ಓವರ್ ಕೆಳಭಾಗದ ಎನ್.ಹೆಚ್-4 ರಸ್ತೆ ಮತ್ತು ಸರ್ವಿಸ್ ರಸ್ತೆ ಮೂಲಕ ಎಸ್.ಆರ್.ಎಸ್ ಜಂಕ್ಷನ್, ಪೀಣ್ಯ ಪೊಲೀಸ್ ಠಾಣೆ ಜಂಕ್ಷನ್ ಜಾಲಹಳ್ಳಿ ಕ್ರಾಸ್, ದಾಸರಹಳ್ಳಿ ಜಂಕ್ಷನ್, 8ನೇ ಮೈಲಿ ಜಂಕ್ಷನ್, ಪಾರ್ಲೆ-ಜಿ ಟೋಲ್ ಮೂಲಕ ಸಂಚರಿಸಬಹುದಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ