
ಉಡುಪಿ(ಡಿ.06): ಮುಖ್ಯಮಂತ್ರಿಗಳು ತಾವು ಒಂದು ಸಮುದಾಯದ ಪರವಾಗಿದ್ದೇವೆ ಎಂದು ಹೇಳುವುದು ಸರಿಯಲ್ಲ, ಇದರಿಂದ ಬಹುಸಂಖ್ಯಾತ ಹಿಂದೂ ಸಮಾಜಕ್ಕೆ ನೋವಾಗುತ್ತದೆ ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಎಚ್ಚರಿಕೆ ನೀಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರ ಮುಸ್ಲಿಮರನ್ನು ಓಲೈಸುವ ಹೇಳಿಕೆಗೆ ಪೇಜಾವರ ಶ್ರೀಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಅವರು ಒಂದು ಸಮುದಾಯ ವರ್ಗದ ಜೊತೆ ನಿಲ್ಲುತ್ತೇವೆ, ನಿಮ್ಮ ಪಾಲು ಕೊಡುತ್ತೇವೆ ಎನ್ನುವುದು ಎಷ್ಟು ಸರಿ ಎಂದು ಶ್ರೀಗಳು ತೀವ್ರವಾಗಿ ಪ್ರಶ್ನಿಸಿದ್ದಾರೆ.
ಸನಾತನಧರ್ಮ ಎಂಬುದು ಸದಾಕಾಲ ಇರುವಂತದ್ದು; ಪೇಜಾವರಶ್ರೀ
ಸಿಎಂ ಹೇಳಿಕೆಯಿಂದ ಹಿಂದೂ ಸಮಾಜವನ್ನು ಯಾರೂ ಕೇಳುವವರಿಲ್ಲ ಎಂಬ ಭಾವನೆ ಬರುತ್ತದೆ. ಇಂತಹ ಹೇಳಿಕೆಯಿಂದ ಹಿಂದೂ ಸಮಾಜಕ್ಕೆ ನೋವಾಗುತ್ತದೆ ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ