ಇದೀಗ ಬಂದ ಹೆಲ್ತ್ ಬುಲೆಟಿನ್: ಗಂಭೀರ ಸ್ಥಿತಿಯಲ್ಲಿ ಪೇಜಾವರ ಶ್ರೀ

By Suvarna NewsFirst Published Dec 26, 2019, 8:13 PM IST
Highlights

ನ್ಯೂಮೋನಿಯಾದಿಂದಾಗಿ  ಪೇಜಾವರ ಶ್ರೀಗಳು ಮಣಿಪಾಲದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆದ್ರೆ ಅವರಿಗೆ ಕೃತಕ ಉಸಿರಾಟ ವ್ಯವಸ್ಥೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಇಂದು [ಗುರುವಾರ] ಕೆಎಂಸಿ  ಆಸ್ಪತ್ರೆಯಿಂದ  7ನೇ ಹೆಲ್ತ್ ಬುಲೆಟಿನ್ ಬಿಡುಗಡೆಯಾಗಿದೆ. ಹಾಗಾದ್ರೆ ಇದೀಗ ಬಂದ ಹೆಲ್ತ್ ಬುಲೆಟಿನ್ ನಲ್ಲಿ ಶ್ರೀಗಳ ಆರೋಗ್ಯ ಹೇಗಿದೆ..? ಈ ಕೆಳಗಿನಂತಿದೆ ನೋಡಿ ಹೆಲ್ತ್ ಬುಲೆಟಿನ್
 

ಉಡುಪಿ, [ಡಿ.26]: ಪೇಜಾವರ ಶ್ರೀಗಳ ಆರೋಗ್ಯದಲ್ಲಿ ಹೆಚ್ಚೇನೂ ಸುಧಾರಣೆಯಾಗಿಲ್ಲ ಎಂದು ಮಣಿಪಾಲ ಕೆಎಂಸಿ ಆಸ್ಪತ್ರೆಯಿಂದ ಬಿಡುಗಡೆಯಾದ  ಹೆಲ್ತ್ ಬುಲೆಟಿನ್ ನಲ್ಲಿ ವೈದ್ಯರು ತಿಳಿಸಿದ್ದಾರೆ.

ಇಂದು [ಗುರುವಾರ] KMC  ಆಸ್ಪತ್ರೆಯಿಂದ  7ನೇ ಹೆಲ್ತ್ ಬುಲೆಟಿನ್ ಬಿಡುಗಡೆಯಾಗಿದ್ದು. ಶ್ರೀಗಳ ಆರೋಗ್ಯ ಗಂಭೀರ ಸ್ಥಿತಿಯಲ್ಲಿಯೇ ಇದೆ ಎಂದು ವೈದ್ಯರು ಹೆಲ್ತ್ ಬುಲೆಟಿನ್ ನಲ್ಲಿ ಉಲ್ಲೇಖವಾಗಿದೆ.

ಪೇಜಾವರ ಶ್ರೀ ಚಿಕಿತ್ಸೆಗೆ ಏಮ್ಸ್‌ ಸಹಾಯ

ಪೇಜಾವರ ಶ್ರೀಗಳು ಇನ್ನೂ ಕೂಡ ಜೀವ ರಕ್ಷಕ ಸಾಧನಗಳ ಅಳವಡಿಕೆಯಲ್ಲಿ ಇದ್ದಾರೆ. ಪ್ರಜ್ಞಾ ಸ್ಥಿತಿಯಲ್ಲಿ ನಿನ್ನೆಯಿಂದ ಹೆಚ್ಚೇನೂ ಸುಧಾರಣೆ ಕಂಡುಬಂದಿಲ್ಲ. ಗಂಭೀರ ಸ್ಥಿತಿಯಲ್ಲೇ ಕೃತಕ ಉಸಿರಾಟ ವ್ಯವಸ್ಥೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆ ಅಧೀಕ್ಷಕರು ತಿಳಿಸಿದರು.

ಪೇಜಾವರ ಶ್ರೀ: 3 ದಿನಗಳಿಂದ ಪ್ರಜ್ಞೆ ಬಂದಿಲ್ಲ, ಕೃತಕ ಉಸಿರಾಟ ಮುಂದುವರಿಕೆ

ಬೆಂಗಳೂರಿನ ಮಣಿಪಾಲ ಆಸ್ಪತ್ರೆಯ  ತಜ್ಞರ ನೆರವಿನ ಜತೆಗೆ ದೆಹಲಿಯ ಏಮ್ಸ್ ವೈದ್ಯ ತಜ್ಞರ ಸಲಹೆ-ಸೂಚನೆಗಳ ಮೇರೆಗೆ ಚಿಕಿತ್ಸೆ ಮುಂದುವರೆದಿದೆ. ಡಿಸೆಂಬರ್ 20ರಂದು ಪೇಜಾವರ ಶ್ರೀಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ.

 ಮತ್ತೊಂದೆಡೆ ಶ್ರೀಗಳು ಬೇಗ ಗುಣಮುಖರಾಗಲೆಂದು ರಾಜ್ಯದ ವಿವಿಧೆಡೆ ಪೂಜೆ-ಪುನಸ್ಕಾರಗಳು ನಡೆಯುತ್ತಿವೆ. 

click me!