ಬಾಬ್ರಿ ಮಸೀದಿ ಒಡೆದಾಗ ಚಪ್ಪಾಳೆ ತಟ್ಟಿದವನಿಗೆ ಕಪಾಳಕ್ಕೆ ಹೊಡೆದಿದ್ದ ಶ್ರೀಗಳು

Kannadaprabha News   | Asianet News
Published : Dec 30, 2019, 07:38 AM IST
ಬಾಬ್ರಿ ಮಸೀದಿ  ಒಡೆದಾಗ ಚಪ್ಪಾಳೆ ತಟ್ಟಿದವನಿಗೆ ಕಪಾಳಕ್ಕೆ ಹೊಡೆದಿದ್ದ ಶ್ರೀಗಳು

ಸಾರಾಂಶ

ಬಾಬ್ರಿ ಮಸೀದಿಯನ್ನು ಕೆಡವಿದ ಸಂದರ್ಭದಲ್ಲಿ  ಚಪ್ಪಾಳೆ ತಟ್ಟಿದ್ದ ಶಿಷ್ಯನೋರ್ವನಿಗೆ ಸಿಟ್ಟಿನಿಂದ ಶ್ರೀಗಳು ಕಪಾಳಕ್ಕೆ ಹೊಡೆದಿದ್ದರು. 

ಉಡುಪಿ [ಡಿ.30]:  ಸದಾ ಮಗುವಿನ ನಗುವನ್ನು ಮೊಗದಲ್ಲಿ ತುಳುಕಿಸಿಕೊಂಡಿರುವ ಪೇಜಾವರ ಶ್ರೀಗಳಿಗೆ ಸಿಟ್ಟು ಬಂದಿರುವುದನ್ನು ಯಾರೂ ನೊಡಿಲ್ಲ. ಆದರೂ ಅವರೇ ಹೇಳುವಂತೆ ಜೀವನದಲ್ಲಿ ಒಂದೇ ಒಂದು ಬಾರಿ ಅಸಹಾಯಕರಾಗಿ, ಉದ್ವಿಗ್ನರಾಗಿ, ಸಿಟ್ಟುಗೊಂಡು ಮಠದ ಶಿಷ್ಯನೊಬ್ಬನಿಗೆ ಹೊಡೆದಿದ್ದರು.

ಅದು 1992, ಪೇಜಾವರ ಶ್ರೀಗಳು ಅಯೋಧ್ಯೆಯಲ್ಲಿ ನಡೆಯುವ ಕರಸೇವೆಗೆ ಹೋಗಿದ್ದರು. ವಿವಾದಿತ ಬಾಬ್ರಿ ಮಸೀದಿಯ ಅನತಿ ದೂರದಲ್ಲಿ ಸಣ್ಣ ವೇದಿಕೆಯೊಂದರಲ್ಲಿ ಪೇಜಾವರ ಶ್ರೀಗಳು ಮತ್ತಿತರಿದ್ದರು. ಶಾಂತವಾಗಿ ಕರಸೇವೆ ಮಾಡಿ, ರಾಮನ ಮೂರ್ತಿಯನ್ನು ಪ್ರತಿಷ್ಠಾಪಿಸುವುದಷ್ಟೇ ಅಂದಿನ ಕಾರ್ಯಕ್ರಮವಾಗಿತ್ತು. 

ಪೇಜಾವರ ಶ್ರೀಗಳ ಬಗೆಗಿನ ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

ಆದರೆ ಸೇರಿದ್ದ ಸಾವಿರ ಸಾವಿರ ಸಂಖ್ಯೆಯ ಕರಸೇವರು ಯಾರೂ ಯಾರ ಮಾತನ್ನೂ ಕೇಳುವಂತಿರಲಿಲ್ಲ. ಗುಂಪೊಂದು ಬಾಬ್ರಿ ಮಸೀದಿ ಯನ್ನೇರಿ, ನೋಡುನೋಡುತಿದ್ದಂತೆ ಗುಂಬಜ್‌ನ್ನು ಉರುಳಿಸಿಯೇ ಬಿಟ್ಟಿತು. ಪೇಜಾವರ ಶ್ರೀಗಳು ತಾಳ್ಮೆ ವಹಿಸುವಂತೆ, ಶಾಂತಿಯಿಂದಿರುವಂತೆ, ಮಸೀದಿಗೆ ಹಾನಿಯನ್ನುಂಟು ಮಾಡದಂತೆ ಪರಿಪರಿಯಾಗಿ ವಿನಂತಿಸಿದರೂ ಕರಸೇವಕರು ಗುಂಬಜನ್ನು ಉರುಳಿಸಿದರು. 

ಪೇಜಾವರ  ಶ್ರೀಗಳು ಅಸಹಾಯಕರಾಗಿ, ಪ್ರತಿಭಟಿಸಲಾಗದೆ, ಕರಸೇವರನ್ನು ನಿಯಂತ್ರಿಸಲಾಗದೇ ನಿಂತುನೋಡಬೇಕಾಯಿತು. ಆಗ ಪಕ್ಕದಲ್ಲಿ ನಿಂತಿದ್ದ ಮಠದ ಶಿಷ್ಯನೊಬ್ಬ ಖುಷಿಯಿಂದ ಜೋರಾಗಿ ಚಪ್ಪಾಳೆ ತಟ್ಟಿದ. ಅಷ್ಟೇ.. ಸಿಟ್ಟು ನೆತ್ತಿಗೇರಿದ ಪೇಜಾವರ ಶ್ರೀಗಳು ಆತನ ಕೆನ್ನೆಗೆ ಛಟೀರೆಂದು ಹೊಡೆದೇ ಬಿಟ್ಟರು. ಅವರ ಏಟಿನಲ್ಲಿ ಗುಂಬಜ್ ಒಡೆದ ಗುಂಪಿನ ಮೇಲಿದ್ದ ಅಸಮಾಧಾನವಿತ್ತು!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಡೆಲಿವರಿ ಬಾಯ್ಸ್‌ಗೆ ಲಿಫ್ಟ್ ಬಳಸಬೇಡಿ ಎಂದ ಮೇಘನಾ ಫುಡ್ಸ್; ಪೋಸ್ಟರ್ ವೈರಲ್‌ ಆಗ್ತಿದ್ದಂತೆ ಕ್ಷಮೆಯಾಚನೆ
ದರ್ಶನ್ ಗ್ಯಾಂಗ್‌ನಿಂದ ಕೊಲೆಗೀಡಾದ ರೇಣುಕಾಸ್ವಾಮಿಗೆ ಸತ್ತಮೇಲೂ ನೆಮ್ಮದಿಯಿಲ್ಲ! ಸಮಾಧಿ ಧ್ವಂಸಗೈದ ಡೆವಿಲ್ ಗ್ಯಾಂಗ್‌!