
ಬೆಂಗಳೂರು (ಅ.17): ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾಗಲು ಜನರ ನಿರ್ಲಕ್ಷ್ಯ ಕಾರಣವೇ ಹೊರತು ಸರ್ಕಾರವಲ್ಲ. ಸರ್ಕಾರ ನಿಯಂತ್ರಣಕ್ಕೆ ಸಾಕಷ್ಟುಕ್ರಮಗಳನ್ನು ಕೈಗೊಳ್ಳುತ್ತಿದ್ದರೂ ಜನರು ಮಾತ್ರ ನಿಯಮಗಳನ್ನು ಪಾಲಿಸುತ್ತಿಲ್ಲ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಕಳವಳ ವ್ಯಕ್ತಪಡಿಸಿದ್ದಾರೆ.
ವಿಕಾಸಸೌಧದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ಸೂಚನೆ, ಮಾರ್ಗಸೂಚಿಗಳನ್ನು ನಾವು ಪಾಲಿಸುತ್ತಿದ್ದೇವೆಯೇ ಎಂಬುದನ್ನು ಜನರು ಆತ್ಮಾವಲೋಕನ ಮಾಡಿಕೊಳ್ಳಬೇಕು. ನನ್ನ ಮತ ಕ್ಷೇತ್ರದಲ್ಲಿ ಪ್ರತಿ ಬೂತ್‌ನ ಪ್ರತಿ ಮನೆಗೂ ಹೋಗಿ ಔಷಧಿ, ಮಾಸ್ಕ್ ಸೇರಿ ಇತರೆ ನೆರವುಗಳನ್ನು ನೀಡಿದ್ದೇನೆ. ಆದರೆ ಹೆಚ್ಚಿನ ಜನರು ಮಾಸ್ಕ್ ಧರಿಸುತ್ತಿಲ್ಲ, ಸಾಮಾಜಿಕ ಅಂತರ ಕಾಯ್ದುಕೊಳ್ಳುತ್ತಿಲ್ಲ. ಮಾಸ್ಕ್ ಧರಿಸಿ ಎಂದರೆ ಏನೂ ಆಗಲ್ಲ ಬಿಡಣ್ಣ ಅಂತಾರೆ ಎಂದು ಬೇಸರ ವ್ಯಕ್ತಪಡಿಸಿದರು.
ಶುಭ ಶುಕ್ರವಾರ ಕೊರೋನಾ ಸೋಂಕಿತರಿಗಿಂತ ಗುಣಮುಖರಾದವರ ಸಂಖ್ಯೆಯೇ ಹೆಚ್ಚು ..
ಹಳ್ಳಿಗಳಲ್ಲಿ ಕೋವಿಡ್ ಪರೀಕ್ಷೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಮಾಡಲಾಗುತ್ತಿದೆ. ಕೋವಿಡ್-19 ಎಂಬುದು ಕಾಯಿಲೆಯೇ ಇಲ್ಲ. ಪರೀಕ್ಷೆ ಮಾಡಿಸಿ ಪಾಸಿಟಿವ್ ಎಂದು ಹೇಳಿ ಆಸ್ಪತ್ರೆಗೆ ದಾಖಲಿಸಿ ಲಕ್ಷಾಂತರ ರು. ಹಣ ವಸೂಲಿ ಮಾಡುತ್ತಾರೆ ಎಂದೆಲ್ಲ ಅಪಪ್ರಚಾರ ಮಾಡುತ್ತಿದ್ದಾರೆ. ಅದೆಲ್ಲ ಸುಳ್ಳು. ಯಾವುದೇ ಲಕ್ಷಣಗಳಿದ್ದರೂ ಪರೀಕ್ಷೆ ಮಾಡಿಸಿ. ಸೋಂಕು ತಡೆಗೆ ಕಡ್ಡಾಯವಾಗಿ ಮಾಸ್ಕ್ ಹಾಕಿ, ಸಾಮಾಜಿಕ ಅಂತರ ಕಾಪಾಡಿ ಎಂದು ಮನವಿ ಮಾಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ