
ಬೆಂಗಳೂರು (ನ.30): ಜನಪ್ರತಿನಿಧಿಗಳು ಆಸ್ತಿ ವಿವರ ನೀಡದ ಹಿನ್ನೆಲೆ, ಕಳೆದ ವರ್ಷದ ಅವಧಿ ಮತ್ತು ಈ ಅವಧಿಯಲ್ಲಿ ಆಸ್ತಿ ವಿವರ ಸಲ್ಲಿಸದ ಜನಪ್ರತಿನಿಧಿಗಳ ಪಟ್ಟಿಯನ್ನು ಕರ್ನಾಟಕ ಲೋಕಾಯುಕ್ತ ಸಾರ್ವಜನಿಕ ಪ್ರಕಟಣೆ ಮೂಲಕ ಹೊರಡಿಸಿದೆ.
ಜೂನ್ 30ರೊಳಗೆ ಪ್ರತಿ ವರ್ಷ ಎಲ್ಲ ಜನಪ್ರತಿನಿಧಿಗಳು ಆಸ್ತಿ ವಿವರ ಸಲ್ಲಿಸಬೇಕು. ಜನಪ್ರತಿನಿಧಿಗಳು ಪ್ರತಿವರ್ಷ ಲೋಕಾಯುಕ್ತಕ್ಕೆ ತಮ್ಮ ಆಸ್ತಿ ವಿವರ ಸಲ್ಲಿಸುವುದು ಕಡ್ಡಾಯ ಹೀಗಿದ್ದೂ ಕೆಲವರು ಈ ಬಗ್ಗೆ ನಿರ್ಲಕ್ಷ್ಯ ವಹಿಸಿರುವ ಹಿನ್ನೆಲೆ 2022-23 ನೇ ಸಾಲಿನಲ್ಲಿ ಆಸ್ತಿ ವಿವರ ಸಲ್ಲಿಸದ ಶಾಸಕರ ಮಾಹಿತಿ ಪ್ರಕಟ ಪಡಿಸಿದೆ.
ಕಳೆದ ಬಾರಿ ಸಚಿವರಾಗಿದ್ದ ಶ್ರೀರಾಮುಲು, ಕೆ.ಸಿ ನಾರಾಯಣಗೌಡ, ಎಸ್. ಅಂಗಾರ ಆಸ್ತಿ ವಿವರ ಸಲ್ಲಿಸದೇ ಲೋಪವೆಸಗಿದ್ದರು. ಈ ಬಾರಿ ರಹೀಂಖಾನ್, ಕೆ.ಎನ್ ರಾಜಣ್ಣ, ಜಮೀರ್ ಅಹಮ್ಮದ್ ಖಾನ್, ರಾಮಲಿಂಗ ರೆಡ್ಡಿ, ಕೆ.ಎಚ್ ಮುನಿಯಪ್ಪರಿಂದಲೂ ಆಸ್ತಿ ವಿವರ ಸಲ್ಲಿಸಿಲ್ಲ. ಕಳೆದ ವಿಧಾನಸಭೆ ಅವಧಿಯ 81 ಮಂದಿ ಶಾಸಕರಿಂದ ಆಸ್ತಿ ವಿವರ ಸಲ್ಲಿಸಿಲ್ಲ. ಈ ಬಾರಿ ವಿಧಾನಸಭೆ ಅವಧಿಯ 51 ಮಂದಿ ಶಾಸಕರಿಂದ ಆಸ್ತಿ ವಿವರ ಸಲ್ಲಿಕೆ ಆಗಿಲ್ಲ. 21 ಮಂದಿ ವಿಧಾನ ಪರಿಷತ್ ಸದಸ್ಯರಿಂದಲೂ ಆಸ್ತಿ ವಿವರ ಸಲ್ಲಿಕೆ ಆಗಿಲ್ಲ.
ಸಿಸಿ ಕ್ಲಿಯರೆನ್ಸ್ ಮಾಡಲು ಹಣಕ್ಕೆ ಬೇಡಿಕೆ ಭ್ರಷ್ಟಾಚಾರದ ಕೂಪವಾಗಿರೋ ಬಳ್ಳಾರಿ ಆರ್‌ಟಿಒ ಕಚೇರಿ!
ಜೂನ್ 30 ರ ಬಳಿಕ ಆಸ್ತಿ ವಿವರ ಸಲ್ಲಿಕೆ ಮಾಡಿರುವ ಸಚಿವ ಮಧು ಬಂಗಾರಪ್ಪ, ಮಾಜಿ ಸಚಿವ ಮುರಿಗೇಶ್ ನಿರಾಣಿ. ಅವಧಿ ಮುಗಿದ ಬಳಿಕ ಆಸ್ತಿ ವಿವರ ಸಲ್ಲಿಕೆ ಮಾಡಿರುವ 10 ಮಂದಿ ಶಾಸಕರು, ಒಬ್ಬ ವಿಧಾನ ಪರಿಷತ್ ಸದಸ್ಯ. ಇನ್ನು ಆಸ್ತಿ ವಿವರ ಸಲ್ಲಿಸದ ಶಾಸಕರು, ಸಚಿವರಿಗೆ ನೋಟಿಸ್ ಕಳಿಸಿದ ಲೋಕಾಯುಕ್ತ. ಸೆಪ್ಟಂಬರ್ 1 ರಂದೇ ನೊಟೀಸ್ ನೀಡಿದ್ದರೂ ಇಲ್ಲಿವರೆಗೆ ಆಸ್ತಿ ವಿವರ ಸಲ್ಲಿಸದೇ ನಿರ್ಲಕ್ಷ್ಯ ತೋರಿಸಿರುವ ಶಾಸಕರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ