112 ಹುದ್ದೆ ನೇಮಕಾತಿ ಮುಂದುವರಿಕೆಗೆ ಕೆಪಿಎಸ್ಸಿಗೆ ನೀಡಿದ್ದ ಅನುಮತಿ ವಾಪಸ್!

Kannadaprabha News, Ravi Janekal |   | Kannada Prabha
Published : Dec 06, 2025, 07:04 AM IST
KPSC recruitment cancellation

ಸಾರಾಂಶ

ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಮತ್ತು ಸಾರಿಗೆ ಇಲಾಖೆಯ ಮೋಟಾರು ವಾಹನ ನಿರೀಕ್ಷಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಮುಂದುವರೆಸಲು ನೀಡಿದ್ದ ಅನುಮತಿಯನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಡಿಪಿಎಆರ್) ಹಿಂಪಡೆದಿದೆ. ಎಸ್ಸಿ ಒಳ ಮೀಸಲಾತಿ ಅಳವಡಿಕೆ ಹಿನ್ನೆಲೆ ಈ ನಿರ್ಧಾರ.

ಬೆಂಗಳೂರು (ಡಿ.6): ಕರ್ನಾಟಕ ಲೋಕಸೇವಾ ಆಯೋಗದಿಂದ ಲೋಕೋಪಯೋಗಿ ಇಲಾಖೆಯಲ್ಲಿನ ಸಹಾಯಕ ಕಾರ್ಯಪಾಲಕ ಎಂಜಿನಿಯರ್ 42 ಹುದ್ದೆಗಳು ಹಾಗೂ ಸಾರಿಗೆ ಇಲಾಖೆಯ ಮೋಟಾರು ವಾಹನ ನಿರೀಕ್ಷಕರು 76 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಮುಂದುವರೆಸಲು ನೀಡಿದ್ದ ಅನುಮತಿಯನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಡಿಪಿಎಆರ್) ಹಿಂಪಡೆದಿದೆ.

ಎಸ್ಸಿ ಒಳ ಮೀಸಲಾತಿ ಹಿನ್ನೆಲೆ ನಿರ್ಧಾರ?

2024ರ ಸೆಪ್ಟೆಂಬರ್‌ನಲ್ಲಿ 42 ಹುದ್ದೆಗಳು ಹಾಗೂ 2024ರ ಮಾರ್ಚ್ ತಿಂಗಳಲ್ಲಿ 70 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿತ್ತು. ಎಸ್ಸಿ ಒಳ ಮೀಸಲಾತಿ ಅಳವಡಿಕೆಗಾಗಿ ಹೊಸ ಅಧಿಸೂಚನೆಗಳಿಗೆ ತಡೆ ನೀಡಿರುವ ಜೊತೆಗೆ ತಿದ್ದುಪಡಿ ಅಧಿಸೂಚನೆಗಳನ್ನು ಕೂಡ ರದ್ದುಪಡಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಈ ಎರಡು ನೇಮಕಾತಿಗಳಿಗೂ ತಿದ್ದುಪಡಿ ಅಧಿಸೂಚನೆ ಹೊರಡಿಸಿದ್ದರೂ ವಿಶೇಷ ಪ್ರಕರಣವೆಂದು ಪರಿಗಣಿಸಿ, ನೇಮಕಾತಿ ಮುಂದುವರೆಸುವಂತೆ ಸರ್ಕಾರದ ಪತ್ರದ ಅನ್ವಯ ಡಿಪಿಎಆರ್‌ನಿಂದ ಅ.9ರಂದು ಕೆಪಿಎಸ್‌ಸಿಗೆ ಪತ್ರ ಬರೆಯಲಾಗಿತ್ತು. ಆದರೆ, ಡಿ.4ರಂದು ಅನುಮತಿಯನ್ನು ವಾಪಸ್ ಪಡೆಯಲಾಗಿದೆ ಎಂದು ಡಿಪಿಎಆರ್ ತಿಳಿಸಿದೆ.

ಅಭ್ಯರ್ಥಿಗಳ ಒತ್ತಾಯ:

76 ಹುದ್ದೆಗಳಿಗೆ ಈಗಾಗಲೇ ಪರೀಕ್ಷೆ ನಡೆದಿದ್ದು, ಫಲಿತಾಂಶ ಪ್ರಕಟಣೆ ಬಾಕಿ ಇರುವ ಕಾರಣ ನೇಮಕ ಪ್ರಕ್ರಿಯೆ ಮುಂದುವರೆಸುವಂತೆ ಪರೀಕ್ಷೆ ಬರೆದಿದ್ದ ಅಭ್ಯರ್ಥಿಗಳು ಸರ್ಕಾರವನ್ನು ಒತ್ತಾಯಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ನ್ಯಾಷನಲ್‌ ಹೆರಾಲ್ಡ್‌ ಕೇಸ್‌ನಲ್ಲಿ ಡಿಕೆಗೆ ದಿಲ್ಲಿ ಪೊಲೀಸ್‌ ನೋಟಿಸ್‌
ಬೆಂಗಳೂರು: ಸೈಬರ್ ವಂಚನೆ ತಡೆಗೆ ಎಐ ಅಸ್ತ್ರ ಪ್ರಯೋಗ