ಶಾಲಾ ಬಾಲಕಿಯನ್ನು ಅಡ್ಗಗಟ್ಟಿ ಅರಶಿಣ ಕೊಂಬು ಕಟ್ಟಿದ!

Published : Nov 30, 2018, 09:35 AM IST
ಶಾಲಾ ಬಾಲಕಿಯನ್ನು ಅಡ್ಗಗಟ್ಟಿ ಅರಶಿಣ ಕೊಂಬು ಕಟ್ಟಿದ!

ಸಾರಾಂಶ

ಶಾಲಾ ಬಾಲಕಿಯನ್ನು ಅಡ್ಡಗಟ್ಟಿದ ಯುವಕನೋರ್ವ ಅರಿಶಿನದ ಕೊಂಬಿರುವ ದಾರವನ್ನು ಕಟ್ಟಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.

ಮೈಸೂರು[ನ.30]: ಶಾಲೆಯಿಂದ ಮರಳಿ ಮನೆಗೆ ಹೋಗುತ್ತಿದ್ದ ಬಾಲಕಿಯನ್ನು ಅಡ್ಡಗಟ್ಟಿದ ಯುವಕನೋರ್ವ ಅರಿಶಿನದ ಕೊಂಬಿರುವ ದಾರವನ್ನು ಕಟ್ಟಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ಸಂಜೆ ನಡೆದಿದೆ.

ಗೆಳತಿಯೊಂದಿಗೆ ಮನೆಗೆ ಹೋಗುತ್ತಿದ್ದ ಬಾಲಕಿಯನ್ನು ಯುವರಿಬ್ಬರು ಅಡ್ಡಗಟ್ಟಿದ್ದಾರೆ. ಈ ವೇಳೆ ಒಬ್ಬ ಹಿಡಿದುಕೊಂಡು, ಮತ್ತೊಬ್ಬ ಅರಿಸಿನದ ದಾರವನ್ನು ಕಟ್ಟಿ, ನಾನು ನಿನ್ನನ್ನು ಮದುವೆಯಾಗಿದ್ದೇನೆ. ಈ ವಿಷಯವನ್ನು ಮನೆಯಲ್ಲಿ ತಿಳಿಸಿದರೆ ಕೊಂದು ಹಾಕುತ್ತೇನೆ ಎಂದು ಇಬ್ಬರು ಬಾಲಕಿಯರಿಗೂ ಕೊಲೆ ಬೆದರಿಕೆ ಹಾಕಿದ್ದಾನೆ.

ಮನೆಗೆ ಬಂದ ಬಾಲಕಿ ಕಣ್ಣೀರು ಹಾಕುತ್ತಿದ್ದ ವೇಳೆ ಪ್ರಕರಣ ಬೆಳಕಿಗೆ ಬಂದಿದ್ದು, ಬಾಲಕಿಯ ತಂದೆ ಬೆಟ್ಟದಪುರ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ. ಯುವಕರಿಬ್ಬರು ಪರಾರಿಯಾಗಿದ್ದು, ಬೆಟ್ಟದಪುರ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ