ಮುಸ್ಲಿಂ 2ಬಿ ರದ್ದು ವಿರುದ್ಧ ಹೈಕೋರ್ಟ್‌ಗೆ ಅರ್ಜಿ

Published : Apr 01, 2023, 10:32 AM ISTUpdated : Apr 01, 2023, 10:49 AM IST
ಮುಸ್ಲಿಂ 2ಬಿ ರದ್ದು ವಿರುದ್ಧ ಹೈಕೋರ್ಟ್‌ಗೆ ಅರ್ಜಿ

ಸಾರಾಂಶ

ತರಾತುರಿಯಲ್ಲಿ ಕೈಗೊಂಡಿರುವ ನಿರ್ಣಯ ಸಂಪೂರ್ಣ ದೋಷಪೂರಿತ ಮತ್ತು ಕಾನೂನು ಬಾಹಿರವಾಗಿದೆ ಎಂದು ಅರ್ಜಿದಾರರ ಆಕ್ಷೇಪ. 

ಬೆಂಗಳೂರು(ಏ.01):  ಮುಸ್ಲಿಮರಿಗೆ ಹಿಂದುಳಿದ ವರ್ಗಗಳ ಪ್ರವರ್ಗ-2ಬಿ ಅಡಿಯಲ್ಲಿ ಒದಗಿಸಲಾಗಿದ್ದ ಶೇ.4ರಷ್ಟು ಮೀಸಲಾತಿಯನ್ನು ರದ್ದುಪಡಿಸಿರುವ ರಾಜ್ಯ ಸರ್ಕಾರ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. ಈ ಸಂಬಂಧ ಬೆಂಗಳೂರಿನ ಸಾಮಾಜಿಕ ಕಾರ್ಯಕರ್ತ ಮೊಹಮ್ಮದ್‌ ಆರೀಫ್‌ ಜಮೀಲ್‌ ಈ ಅರ್ಜಿ ಸಲ್ಲಿಸಿದ್ದು, ಮುಸ್ಲಿಮರ 2 ಬಿ ಮೀಸಲಾತಿ ರದ್ದುಪಡಿಸಿದ ನಂತರ ಅವರನ್ನು ‘ಆರ್ಥಿಕ ಹಿಂದುಳಿದ ವರ್ಗ’ಕ್ಕೆ (ಇಡಬ್ಲ್ಯುಎಸ್‌) ಸೇರಿಸಿ ರಾಜ್ಯ ಸರ್ಕಾರ 2023ರ ಮಾ.27ರಂದು ಹೊರಡಿಸಿರುವ ಆದೇಶವನ್ನು ರದ್ದುಪಡಿಸಬೇಕು. ಅರ್ಜಿ ಇತ್ಯರ್ಥವಾಗುವವರೆಗೆ ಸರ್ಕಾರದ ಆದೇಶದ ಜಾರಿಗೆ ಮಧ್ಯಂತರ ತಡೆ ನೀಡಬೇಕು ಎಂದು ಕೋರಿದ್ದಾರೆ.

ರಾಜ್ಯ ಸರ್ಕಾರದ ಹಿಂದುಳಿದ ವರ್ಗಗಳ ಇಲಾಖೆ ಪ್ರಧಾನ ಕಾರ್ಯದರ್ಶಿ, ಶಾಸಕಾಂಗ ಮತ್ತು ಸಂಸದೀಯ ವ್ಯವಹಾರಗಳ ಇಲಾಖೆ ಕಾರ್ಯದರ್ಶಿ, ಮತ್ತು ಕರ್ನಾಟಕ ಶಾಶ್ವತ ಹಿಂದುಳಿದ ಆಯೋಗದ ಮುಖ್ಯಸ್ಥರು ಮತ್ತು ಕರ್ನಾಟಕ ಅಲ್ಪಸಂಖ್ಯಾತರ ಆಯೋಗದ ಮುಖ್ಯಸ್ಥರನ್ನು ಅರ್ಜಿಯಲ್ಲಿ ಪ್ರತಿವಾದಿ ಮಾಡಲಾಗಿದೆ. ಅರ್ಜಿ ಇನ್ನಷ್ಟೇ ವಿಚಾರಣೆಗೆ ನಿಗದಿಯಾಗಬೇಕಿದೆ.

ಅಲ್ಪಸಂಖ್ಯಾತರಿಗೆ ಅನ್ಯಾಯವಾಗಿಲ್ಲ; ಮುಂದಿನ ದಿನಗಳಲ್ಲಿ ಹೆಚ್ಚಿನ ನ್ಯಾಯ ಸಿಗಲಿದೆ : ಪೂಜಾರಿ

ಮುಸ್ಲಿಮರಿಗೆ ಪ್ರವರ್ಗ 2ಬಿ ಅಡಿ ನೀಡಲಾಗುತ್ತಿದ್ದ ಶೇ.4ರಷ್ಟು ಮೀಸಲಾತಿಯನ್ನು ಕಸಿದುಕೊಂಡು, ಅವರನ್ನು ಇಡಬ್ಲ್ಯುಎಸ್‌ ಪ್ರವರ್ಗಕ್ಕೆ ಸೇರಿಸಿ ರಾಜ್ಯ ಸರ್ಕಾರವು 2023ರ ಮಾ.24ರಂದು ನಿರ್ಧಾರ ಕೈಗೊಂಡಿದೆ. ಮುಸ್ಲಿಮರಿಗೆ 2ಬಿ ಅಡಿಯಲ್ಲಿ ನೀಡಲಾಗುತ್ತಿದ್ದ ಶೇ.4ರಷ್ಟು ಮೀಸಲಾತಿಯನ್ನು ರಾಜ್ಯದ ಬಲಿಷ್ಠ ಸಮುದಾಯಗಳಾದ ಒಕ್ಕಲಿಗೆ ಮತ್ತು ವೀರಶೈವ-ಲಿಂಗಾಯತರಿಗೆ ತಲಾ ಶೇ.2ರಂತೆ ಹಂಚಿಕೆ ಮಾಡಲಾಗಿದೆ. ಈ ತರಾತುರಿಯಲ್ಲಿ ಕೈಗೊಂಡಿರುವ ನಿರ್ಣಯ ಸಂಪೂರ್ಣ ದೋಷಪೂರಿತ ಮತ್ತು ಕಾನೂನು ಬಾಹಿರವಾಗಿದೆ ಎಂದು ಅರ್ಜಿದಾರರು ಆಕ್ಷೇಪಿಸಿದ್ದಾರೆ.

ಅಲ್ಲದೆ, ಮುಂಬರುವ ವಿಧಾನಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರವು ರಾಜಕೀಯ ಪ್ರೇರಿತವಾಗಿ ಕೈಗೊಂಡ ನಿರ್ಧಾರ ಇದಾಗಿದೆ. ಇದರಿಂದ ಇಡಬ್ಲ್ಯೂಎಸ್‌ ವರ್ಗಗಳಿಗೆ ನಿಗದಿಪಡಿಸಲಾದ ಶೇ.10ರ ಮೀಸಲಾತಿಯಲ್ಲಿ ಸಾಮಾನ್ಯ ವರ್ಗದಡಿ ಮುಸ್ಲಿಮರು ಪೈಪೋಟಿ ಮಾಡಬೇಕಾದ ಪರಿಸ್ಥಿತಿ ಸೃಷ್ಟಿಯಾಗಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ ಎಂದು ಅರ್ಜಿದಾರರು ದೂರಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಾಜ್ಯದಲ್ಲಿ ಡ್ರಗ್ ಫ್ಯಾಕ್ಟರಿಗಳ ಅಟ್ಟಹಾಸ: ಗುಪ್ತಚರ ಇಲಾಖೆ ನಿದ್ದೆ ಮಾಡ್ತಿದೆಯೇ?- ಆರ್. ಅಶೋಕ್
ಅಯ್ಯಯ್ಯೋ.. ದೆವ್ವ ಹಿಡಿದಿದೆಯೆಂದು ಗೃಹಿಣಿಯನ್ನು ಬೇವಿನ ಕಟ್ಟಿಗೆಯಿಂದ ಥಳಿಸಿ ಕೊಲೆ!