
ಬೆಂಗಳೂರು(ಸೆ.27): ರಾಜ್ಯದಲ್ಲಿ ಸೋಮವಾರದಿಂದ ಫಿಸಿಕಲ್ ಕೋರ್ಟ್ ಕಲಾಪ (ಭೌತಿಕ ವಿಚಾರಣೆ) ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ನ್ಯಾಯಾಲಯಗಳಿಗೆ ಹಾಜರಾಗುವ ಸಾಕ್ಷಿದಾರರು ಹಾಗೂ ಆರೋಪಿಗಳಿಗೆ ಕೊರೋನಾ ರ‍್ಯಾಪಿಡ್ ಆ್ಯಂಟಿಜೆನ್ ಟೆಸ್ಟ್ ನಡೆಸಲು ಕ್ರಮ ಕೈಗೊಳ್ಳುವಂತೆ ಹೈಕೋರ್ಟ್ ಸರ್ಕಾರಕ್ಕೆ ನಿರ್ದೇಶಿಸಿದೆ.
ಕೊರೋನಾ ನಡುವೆಯೂ ನ್ಯಾಯಾಲಯಗಳನ್ನು ಸುರಕ್ಷಿತವಾಗಿ ಮತ್ತು ನಿರಂತರವಾಗಿ ನಡೆಸುವ ನಿಟ್ಟಿನಲ್ಲಿ ಹೈಕೋರ್ಟ್ ದಾಖಲಿಸಿಕೊಂಡಿರುವ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ನೀಡಿದೆ. ಹೈಕೋರ್ಟ್ ಹೊರಡಿಸಿರುವ ಮಾರ್ಗಸೂಚಿಗಳ ಪ್ರಕಾರ ಸೆ.28ರ ಸೋಮವಾರದಿಂದ 55 ನ್ಯಾಯಾಲಯಗಳಲ್ಲಿ ಫಿಸಿಕಲ್ ಕೋರ್ಟ್ ಕಲಾಪ ಆರಂಭವಾಗಲಿದೆ. ಇನ್ನುಳಿದ ನ್ಯಾಯಾಲಯಗಳು ಅ.5 ಮತ್ತು 12ರಿಂದ ಕಾರ್ಯಾರಂಭ ಮಾಡಲಿವೆ. ಸಂಚಾರಿ ಪರೀಕ್ಷಾ ಘಟಕಗಳನ್ನು ಸ್ಥಾಪಿಸಲು ಸಾಧ್ಯವಿರುವ ಕುರಿತು ಪರಿಶೀಲಿಸುವಂತೆಯೂ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.
ಕೋರ್ಟ್ ಕಾರ್ಯ ವೈಖರಿ ಬಗ್ಗೆ ಕಟು ಶಬ್ದ ಬಳಸಿ ಟೀಕೆ: ಲಾಯರ್‌ಗೆ ಜಡ್ಜ್ ತರಾಟೆ
ಈ ಹಿನ್ನೆಲೆಯಲ್ಲಿ ನ್ಯಾಯಾಲಯಗಳಲ್ಲಿ ಭೌತಿಕ ಕಲಾಪ ಆರಂಭವಾಗುತ್ತಿರುವ ಕಾರಣ ಸರ್ಕಾರ ನ್ಯಾಯಾಲಯಗಳಿಗೆ ಬರುವ ಆರೋಪಿಗಳು ಹಾಗೂ ಸಾಕ್ಷಿದಾರರಿಗೆ ರ‍್ಯಾಪಿಡ್ ಆ್ಯಂಟಿಜೆನ್ ಟೆಸ್ಟ್ ನಡೆಸಲು ಕ್ರಮ ಕೈಗೊಳ್ಳಬೇಕು. ಈ ಸಂಬಂಧ ಜಿಲ್ಲಾ ಪ್ರಧಾನ ನ್ಯಾಯಾಧೀಶರು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಉಪ ವಿಭಾಗಾಧಿಕಾರಿಗಳ ಜೊತೆ ಸಭೆ ನಡೆಸಿ ಚರ್ಚಿಸಬೇಕು ಎಂದು ಸೂಚಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ