ಹುದ್ದೆಗಳ ಭರ್ತಿಗೆ ಯೋಜನೆ ರೆಡಿ ಇದೆ, ಧೈರ್‍ಯವಾಗಿರಿ: ಡಿಕೆ

Kannadaprabha News   | Kannada Prabha
Published : Feb 26, 2026, 06:39 AM IST
DK Shivakumar

ಸಾರಾಂಶ

ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಇದ್ದಾಗ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಆಗಲಿಲ್ಲ. ಕಾಂಗ್ರೆಸ್‌ ಸರ್ಕಾರ ಹಗರಣರಹಿತವಾಗಿ ಖಾಲಿ ಹುದ್ದೆ ತುಂಬಲಿದ್ದು, ಸದ್ಯದಲ್ಲೇ ಈ ಬಗ್ಗೆ ಕ್ಯಾಬಿನೆಟ್‌ನಲ್ಲೂ ಚರ್ಚಿಸಲಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು.

ಬೆಂಗಳೂರು : ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಇದ್ದಾಗ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಆಗಲಿಲ್ಲ. ಕಾಂಗ್ರೆಸ್‌ ಸರ್ಕಾರ ಹಗರಣರಹಿತವಾಗಿ ಖಾಲಿ ಹುದ್ದೆ ತುಂಬಲಿದ್ದು, ಸದ್ಯದಲ್ಲೇ ಈ ಬಗ್ಗೆ ಕ್ಯಾಬಿನೆಟ್‌ನಲ್ಲೂ ಚರ್ಚಿಸಲಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು.

ಧಾರವಾಡದಲ್ಲಿ ಸರ್ಕಾರಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಯುವಕರ ಪ್ರತಿಭಟನೆ

ಧಾರವಾಡದಲ್ಲಿ ಸರ್ಕಾರಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಯುವಕರ ಪ್ರತಿಭಟನೆ ಕುರಿತು ಬುಧವಾರ ನಗರದಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಇದ್ದಾಗ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಆಗಲಿಲ್ಲ. ಅವರ ಸಮಯದಲ್ಲಿ ಸಾಕಷ್ಟು ಹಗರಣಗಳಾದವು. ಉದ್ಯೋಗಾಕಾಂಕ್ಷಿ ಯುವಕರ ನೋವು ಅರ್ಥವಾಗುತ್ತದೆ. ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಹೇಳಿದರು.

ಹುದ್ದೆಗಳ ಭರ್ತಿ ಕುರಿತು ಯೋಜನೆ ತಯಾರಿಸಿದ್ದೇವೆ

ಹುದ್ದೆಗಳ ಭರ್ತಿ ಕುರಿತು ಯೋಜನೆ ತಯಾರಿಸಿದ್ದೇವೆ. ಕೆಪಿಎಸ್‌ಸಿ ಸೇರಿದಂತೆ ಬೇರೆ ಸಂಸ್ಥೆಗಳಿಗೆ ಹುದ್ದೆ ಭರ್ತಿಗೆ ಜವಾಬ್ದಾರಿ ನೀಡಿದ್ದೇವೆ. ಶಿಕ್ಷಕರ ಹುದ್ದೆ, ಆರೋಗ್ಯ ಇಲಾಖೆಗಳಲ್ಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಒಳಮೀಸಲಾತಿ ವಿಚಾರಕ್ಕೆ ಒಂದಷ್ಟು ಅಡಚಣೆಗಳು ಬರುತ್ತಿದೆ. ನಿರುದ್ಯೋಗಿ ಯುವಕರಿಗೆ ಶಕ್ತಿ ನೀಡಲು ಯುವನಿಧಿ ಯೋಜನೆ ಜಾರಿಗೆ ತಂದಿದ್ದೇವೆ ಎಂದು ತಿಳಿಸಿದರು.

ರಾಜ್ಯದ ಯುವಕರು ಧೈರ್ಯವಾಗಿರಿ. ನಾವು ನಿಮ್ಮ ಸಮಸ್ಯೆಗಳನ್ನು ಬಗೆಹರಿಸುತ್ತೇವೆ. ಸದ್ಯದಲ್ಲೇ ಸಚಿವ ಸಂಪುಟ ಸಭೆಯಲ್ಲಿ ಇದರ ಬಗ್ಗೆ ಚರ್ಚಿಸಿ ಶೀಘ್ರ ನಿಮಗೆ ಸಂದೇಶ ನೀಡುತ್ತೇವೆ. ಹುದ್ದೆಗಳನ್ನು ಭರ್ತಿ ಮಾಡಿದ್ದೇವೆ, ಮಾಡುತ್ತೇವೆ, ಇದಕ್ಕೆ ಬದ್ಧವಾಗಿದ್ದೇವೆ ಎಂದರು.

ವಿವಿಧ ಇಲಾಖೆಗಳಲ್ಲಿ ಬಿಲ್‌ ಬಾಕಿ ಬಗ್ಗೆ ಕೇಳಿದಾಗ, ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಅವರ ಸರ್ಕಾರದ ವೇಳೆ ಯಾವುದೇ ಆರ್ಥಿಕ ಸ್ಥಿತಿಗತಿ ನೋಡದೆ ಹೆಚ್ಚಿನ ಕಾಮಗಾರಿಗಳಿಗೆ ಅನುಮತಿ ನೀಡಲಾಯಿತು. ಈ ಕಾರಣಕ್ಕೆ ಈಗ ಸಮಸ್ಯೆ ಉಂಟಾಗಿದೆ. ನಾವು ಅನೇಕ ಗುತ್ತಿಗೆದಾರರಿಗೆ ಹಣ ಲಭ್ಯತೆ ಇಲ್ಲದೆ ಕಾಮಗಾರಿ ತೆಗೆದುಕೊಳ್ಳಬೇಡಿ ಎಂದು ಸಲಹೆ ನೀಡಿದ್ದರೂ, ಒಂದಷ್ಟು ಜನ ಕಾಮಗಾರಿ ಕೈಗೊಂಡಿದ್ದಕ್ಕೆ ಸಮಸ್ಯೆ ಅನುಭವಿಸುತ್ತಿದ್ದಾರೆ. ಸರ್ಕಾರದ ವಿರುದ್ಧ ಗುತ್ತಿಗೆದಾರರ ಪ್ರತಿಭಟನೆ ಪ್ರಸ್ತಾಪ ಸಂಬಂಧ ಅವರ ಜೊತೆ ಚರ್ಚಿಸುವುದಾಗಿ ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮೊದಲ ಬಾರಿಯ ಶಾಸಕರಿಗೆ ಸಚಿವ ಸ್ಥಾನ ಇಲ್ಲ : ಸಿಎಂ
Karnataka News Live: ಸ್ವತ್ತುಗಳಿಗೆ ನಕಲಿ ಇ-ಖಾತಾ - ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಬಿಜೆಪಿ ಮುಖಂಡ ಎನ್‌.ಆರ್‌.ರಮೇಶ್‌ ಆಗ್ರಹ