Electric Buses: ಪ್ರತಿ ಜಿಲ್ಲೆಗೆ 20-25 ಎಲೆಕ್ಟ್ರಿಕ್ ಬಸ್ ನೀಡಲು ಚಿಂತನೆ: ಎಚ್‌ಡಿ ಕುಮಾರಸ್ವಾಮಿ

Kannadaprabha News   | Kannada Prabha
Published : Jun 08, 2025, 06:38 AM IST
Union Minister HD Kumaraswamy (File Photo/ANI)

ಸಾರಾಂಶ

ಪ್ರತಿ ಜಿಲ್ಲೆಗೂ 20 ರಿಂದ 25 ಎಲೆಕ್ಟ್ರಿಕ್ ಬಸ್‌ಗಳನ್ನು ನೀಡುವ ಚಿಂತನೆ ನಡೆದಿದ್ದು, ಶೀಘ್ರದಲ್ಲೇ ಒದಗಿಸಲಾಗುವುದು ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ. ರಾಜ್ಯಕ್ಕೆ 14 ಸಾವಿರ, ಬೆಂಗಳೂರಿಗೆ 4500 ಎಲೆಕ್ಟ್ರಿಕ್ ಬಸ್‌ಗಳನ್ನು ಒದಗಿಸಲಾಗಿದೆ ಎಂದರು.

ಮಂಡ್ಯ (ಜೂ.8): ಮುಂದಿನ ದಿನಗಳಲ್ಲಿ ಪ್ರತಿ ಜಿಲ್ಲೆಗೆ 20 ರಿಂದ 25 ಎಲೆಕ್ಟ್ರಿಕ್ ಬಸ್‌ಗಳನ್ನು ನೀಡುವ ಚಿಂತನೆಯನ್ನು ನಡೆಸಲಾಗಿದೆ. ಅವುಗಳನ್ನು ಶೀಘ್ರಗತಿಯಲ್ಲಿ ಒದಗಿಸುವ ಕೆಲಸ ಮಾಡುವುದಾಗಿ ಕೇಂದ್ರ ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಶನಿವಾರ ಮಂಡ್ಯದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ದೇಶದಲ್ಲಿ ಕಾರ್ಬನ್ ಡೈ ಆಕ್ಸೈಡ್‌ ಅನ್ನು ಶೂನ್ಯಗೊಳಿಸುವ ಸಂಕಲ್ಪ ಮಾಡಿರುವ ಕೇಂದ್ರ ಸರ್ಕಾರ, ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಗೆ ಹೆಚ್ಚಿನ ಮಹತ್ವ ನೀಡಿದೆ. ರಾಜ್ಯಕ್ಕೆ 14 ಸಾವಿರ ಎಲೆಕ್ಟ್ರಿಕ್ ಬಸ್‌ಗಳನ್ನು ಕೊಟ್ಟಿದ್ದೇನೆ. ದೇಶದ ಇತರೆ ರಾಜ್ಯಗಳಿಗೆ 2 ಸಾವಿರ ಎಲೆಕ್ಟ್ರಿಕ್ ಬಸ್‌ಗಳನ್ನು ಒದಗಿಸಿದ್ದು, ಬೆಂಗಳೂರು ಒಂದಕ್ಕೇ 4500 ಎಲೆಕ್ಟ್ರಿಕ್ ಬಸ್‌ಗಳನ್ನು ನೀಡಿದ್ದೇನೆ ಎಂದು ತಿಳಿಸಿದರು.

ರಾಜ್ಯದಲ್ಲಿ ಕೈಗಾರಿಕೆಗಳನ್ನು ತರಬೇಕು. ನನ್ನ ಮೇಲೆ ಅಪಾರ ನಿರೀಕ್ಷೆ ಇಟ್ಟುಕೊಂಡಿರುವ ಮಂಡ್ಯ ಜಿಲ್ಲೆಯ ಜನರಿಗೆ ಉದ್ಯೋಗ ಸೃಷ್ಟಿಯಾಗುವಂತೆ ಕಾರ್ಖಾನೆಗಳನ್ನು ತರಬೇಕೆಂಬ ಹೆಬ್ಬಯಕೆ ನನ್ನದು. ಆದರೆ, ರಾಜ್ಯಸರ್ಕಾರ ಅದಕ್ಕೆ ಪೂರಕವಾಗಿ ಸಹಕಾರವನ್ನು ಕೊಡುತ್ತಿಲ್ಲ. ಬೃಹತ್ ಕೈಗಾರಿಕೆಗಳು, ದೊಡ್ಡ ದೊಡ್ಡ ಕಾರ್ಖಾನೆಗಳನ್ನು ಸ್ಥಾಪಿಸುವುದಕ್ಕೆ ರಾಜ್ಯ ಸರ್ಕಾರದ ಸಹಕಾರವೂ ಅಗತ್ಯ. ಆ ನಿಟ್ಟಿನಲ್ಲಿ ಸರ್ಕಾರದ ಸಹಕಾರವನ್ನು ಪಡೆಯುವುದಕ್ಕೆ ಪ್ರಯತ್ನಿಸುತ್ತಿದ್ದೇನೆ ಎಂದು ಹೇಳಿದರು.ಕಾವೇರಿ ಆರತಿಗೆ ₹100 ಕೋಟಿ ಯಾಕೆ ಬೇಕು? ನಮ್ಮ ಪುಟ್ಟರಾಜು ಕೆರೆತೊಣ್ಣೂರಿನಲ್ಲಿ ಇಂತಹ ಕಾರ್ಯಕ್ರಮ ಮಾಡಿದಾಗ ಎಷ್ಟು ಖರ್ಚಾಯಿತು ಎಂದು ಕೇಳಿ. ಇಷ್ಟೊಂದು ಬೃಹತ್ ಮೊತ್ತ ವೆಚ್ಚ ಮಾಡುವುದು ಏತಕ್ಕೆ? ₹100 ಕೋಟಿ ಖರ್ಚು ಮಾಡುವುದಕ್ಕೆ ನನ್ನ ವಿರೋಧವಿದೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಭಟ್ಕಳ ತಹಸೀಲ್ದಾರ್ ಕಚೇರಿಗೆ ಬಾಂಬ್ ಬೆದರಿಕೆ: ಇಮೇಲ್‌ನಲ್ಲಿ ಡಿಎಂಕೆ ವಿರುದ್ಧ ಅಸಂಬದ್ಧ ಆರೋಪ
ದಾವಣಗೆರೆ: ಶಾಸಕ ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಕಲಾಪ ಮುಂದಕ್ಕೆ ಇದೇ ಮೊದಲು