
ಬೆಂಗಳೂರು : ರಾಜ್ಯಾದ್ಯಂತ ಸರ್ಕಾರಿ ಸಭೆ, ಕಾರ್ಯಕ್ರಮಗಳಲ್ಲಿ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲ್ ಬದಲಿಗೆ ಪರಿಸರ ಸ್ನೇಹಿ ಪರಿಕರಗಳನ್ನು ಬಳಸಬೇಕು. ಜತೆಗೆ ಎಲ್ಲ ಸಭೆ, ಕಾರ್ಯಕ್ರಮಗಳಲ್ಲಿ ಕಡ್ಡಾಯವಾಗಿ ನಂದಿನಿ ತಿನಿಸುಗಳನ್ನು ಬಳಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಈ ಕುರಿತು ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಟಿಪ್ಪಣಿ ಕಳುಹಿಸಿರುವ ಅವರು, ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಸರ್ಕಾರಿ ಸಭೆ, ಸಮಾರಂಭಗಳಲ್ಲಿ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲ್ ಬದಲಿಗೆ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಪರಿಕರ ಬಳಸುವಂತೆ ಸೂಚಿಸಲಾಗಿತ್ತು. ಇದನ್ನು ಕಟ್ಟುನಿಟ್ಟಾಗಿ ಪಾಲಿಸಲು ಅಗತ್ಯ ಕ್ರಮ ಕೈಗೊಳ್ಳಿ ಎಂದು ಸೂಚಿಸಿದ್ದಾರೆ.
ಮುಖ್ಯಮಂತ್ರಿ, ಇಲಾಖಾ ಸಚಿವರ ಕಚೇರಿ, ಸಚಿವಾಲಯ ಸೇರಿ ರಾಜ್ಯಾದ್ಯಂತ ಎಲ್ಲ ಸರ್ಕಾರಿ ಕಚೇರಿಗಳ ಸಭೆ, ಕಾರ್ಯಕ್ರಮಗಳಲ್ಲಿ ಸರ್ಕಾರಿ ಸ್ವಾಮ್ಯದ ಕೆಎಂಎಫ್ ನಂದಿನಿ ತಿನಿಸುಗಳನ್ನು ಕಡ್ಡಾಯವಾಗಿ ಬಳಸುವಂತೆ ಎಲ್ಲ ಇಲಾಖಾ ಮುಖ್ಯಸ್ಥರಿಗೆ ಅಗತ್ಯ ಸೂಚನೆ ನೀಡಿ ಎಂದು ಸಿದ್ದರಾಮಯ್ಯ ನಿರ್ದೇಶನ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ