ಮೋದಿ ಕರ್ನಾಟಕ ಪ್ರವಾಸ, ಪ್ರಧಾನಿ ಕಾರ್ಯಾಲಯದಿಂದ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

By Suvarna News  |  First Published Jun 16, 2022, 7:45 PM IST

* ಪ್ರಧಾನಿ ನರೇಂದ್ರ ಮೋದಿ ಕರ್ನಾಟಕ ಪ್ರವಾಸ
* ಜೂನ್ 21, 22ರಂದು ವಿವಿದ ಕಾರ್ಯಕ್ರಮಗಳಲ್ಲಿ ಮೋದಿ ಭಾಗಿ
* ಪ್ರಧಾನಿ ಕಾರ್ಯಾಲಯದಿಂದ ತಾತ್ಕಾಲಿಕ ವೇಳಾಪಟ್ಟಿ


ಬೆಂಗಳೂರು, (ಜೂನ್.16):  ಪ್ರಧಾನಿ ನರೇಂದ್ರ ಮೋದಿ ಅವರು ಜೂನ್ 20 ಮತ್ತು 21ರಂದು ಎರಡು ದಿನಗಳ ಕಾಲ ಕರ್ನಾಟಕ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಹಿನ್ನೆಲೆಯಲ್ಲಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ.  

ಎರಡು ದಿನಗಳ ಕಾಲ ಬೆಂಗಳೂರು ಮತ್ತು ಮೈಸೂರಿನಲ್ಲಿ ನಡೆಯುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದು, ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಇನ್ನು ಪ್ರಧಾನಿ ನರೇಂದ್ರ ಮೋದಿ ಅವರು ಯಾವೆಲ್ಲ ಕಾರ್ಯಕ್ರಮಗಳಲ್ಲಿ ಭಾವಹಿಸಲಿದ್ದಾರೆ ಎನ್ನುವ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಧಾನಿ ಕಾರ್ಯಾಲಯ ಬಿಡುಗಡೆ ಮಾಡಿದೆ.ಅದು ಈ ಕೆಳಗಿನಂತಿದೆ ನೋಡಿ

Tap to resize

Latest Videos

ಜೂ. 20, 21ಕ್ಕೆ ಕರ್ನಾಟಕದಲ್ಲಿ ಪ್ರಧಾನಿ ಮೋದಿ ಹವಾ..!

ಮೋದಿ ಕಾರ್ಯಕ್ರಮಗಳ ವಿವರ
ಜೂನ್ 21( ಮೊದಲ ದಿನ)

* ಜೂನ್ 20 ರಂದು ಬೆಳಗ್ಗೆ 11.55ಕ್ಕೆ ವಿಶೇಷ ವಿಮಾನದ ಮೂಲಕ ಬೆಂಗಳೂರಿನ ಯಲಹಂಕ ವಾಯುನೆಲೆಗೆ ಆಗಮನ.
* ಮಧ್ಯಾಹ್ನ 12.20ಕ್ಕೆ ಹೆಲಿಕಾಪ್ಟರ್ ಮೂಲಕ ಕೊಮ್ಮಘಟ್ಟ ಹೆಲಿಪ್ಯಾಡ್ ಗೆ ಆಗಮನ
* ಮಧ್ಯಾಹ್ನ 12.30ರಿಂದ 1.45 ರವರೆಗೆ ಬೆಂಗಳೂರು ಸಬ್ ಅರ್ಬನ್ ರೈಲು ಯೋಜನೆಗೆ ಶಂಕುಸ್ಥಾಪನೆ ಹಾಗೂ ರೈಲ್ವೇ ರೋಡ್ ಯೋಜನೆ ಮತ್ತು ಬಹು ಮಾದರಿ ಲಾಜಿಸ್ಟಿಕ್ ಪಾರ್ಕ್ ಗೆ ಶಂಕುಸ್ಥಾಪನೆ

* ಮಧ್ಯಾಹ್ನ 2.30 ರಿಂದ 3.30 ರವರೆಗೆ ಜ್ಞಾನಭಾರತಿ ಆವರಣದಲ್ಲಿ ಅಂಬೇಡ್ಕರ್ ಸ್ಕೂಲ್ ಆಫ್ ಎಕಾನಾಮಿಕ್ಸ್ ಉದ್ಘಾಟನೆ, ಅಂಬೇಡ್ಕರ್ ಪ್ರತಿಮೆ ಅನಾವರಣ, 150 ಮೇಲ್ದರ್ಜೆಗೇರಿಸಲ್ಪಟ್ಟ ಐಟಿಐ ಗಳ ಲೋಕಾರ್ಪಣೆ
* ಸಂಜೆ 4 ಗಂಟೆಗೆ ಬೆಂಗಳೂರಿನಿಂದ ಮೈಸೂರಿಗೆ ಹೆಲಿಕಾಫ್ಟರ್ ಮೂಲಕ ಪ್ರಯಾಣ
* ಸಂಜೆ 4.50ಕ್ಕೆ ಮೈಸೂರಿಗೆ ಆಗಮನ.
* ಸಂಜೆ 5 ಗಂಟೆಗೆ ಮಹಾರಾಜ ಕಾಲೇಜು ಮೈದಾನದಲ್ಲಿ ಐಐಎಸ್ ಹೆಚ್ ಎಕ್ಸಲೆನ್ಸ್ ಸೆಂಟರ್ ಲೋಕಾರ್ಪಣೆ ಮತ್ತು ವಿವಿಧ ಯೋಜನೆಗಳ ಫಲಾನುಭವಿಗಳ ಜೊತೆ ಸಂವಾದ.

* ಸಂಜೆ 6.30ಕ್ಕೆ ಸುತ್ತೂರು ಮಠಕ್ಕೆ ಭೇಟಿ, ವೇದ ಪಾಠಶಾಲಾ ಕಟ್ಟಡ ಲೋಕಾರ್ಪಣೆ
* ರಾತ್ರಿ 7.30 ಚಾಮುಂಡಿ ಬೆಟ್ಟಕ್ಕೆ ಭೇಟಿ
* ರಾತ್ರಿ 8.10ಕ್ಕೆ ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ವಾಸ್ತವ್ಯ

ಜೂನ್ 21ರ ವಿವರ(ಎರಡನೇ ದಿನ)
* ಜೂನ್ 21 ರಂದು ಬೆಳಗ್ಗೆ 6.30 ಕ್ಕೆ ಮೈಸೂರು ಅರಮನೆ ಮುಂಭಾಗ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಭಾಗಿ
* ಬೆಳಗ್ಗೆ 8 ಗಂಟೆಗೆ ಅರಮನೆ ಮುಂಭಾಗದಲ್ಲಿ ವಸ್ತು ಪ್ರದರ್ಶನ ವೀಕ್ಷಣೆ
* ಬೆಳಗ್ಗೆ 8.30ಕ್ಕೆ ಮೈಸೂರು ಅರಮನೆಗೆ ಭೇಟಿ
* ಬೆಳಗ್ಗೆ 9.25 ಕ್ಕೆ ಮೈಸೂರಿನಿಂದ ವಿಶೇಷ ವಿಮಾನದ ಮೂಲಕ ತಿರುವನಂತಪುರಕ್ಕೆ ಪ್ರಯಾಣ.

click me!