ಧಾರವಾಡದಲ್ಲಿ IIT, ರಾಯಚೂರಿನಲ್ಲಿ IIIT ನಿರ್ಮಾಣ ಕಾಮಗಾರಿಗೆ ಮೋದಿ ಚಾಲನೆ

Published : Feb 10, 2019, 07:30 PM ISTUpdated : Feb 10, 2019, 07:49 PM IST
ಧಾರವಾಡದಲ್ಲಿ IIT, ರಾಯಚೂರಿನಲ್ಲಿ IIIT ನಿರ್ಮಾಣ ಕಾಮಗಾರಿಗೆ ಮೋದಿ ಚಾಲನೆ

ಸಾರಾಂಶ

ಶಿಕ್ಷಣ ಕಾಶಿ ಧಾರವಾಡದಲ್ಲಿ ಐಐಟಿ, ರಾಯಚೂರಿನಲ್ಲಿ ಐಐಐಟಿ ಕಟ್ಟಡಗಳ ನಿರ್ಮಾಣ ಸೇರಿದಂತೆ ಹಲವು ಕಾಮಗಾರಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು.

ಹುಬ್ಬಳ್ಳಿ, [ಫೆ.10] : ಇಂದು [ಭಾನುವಾರ] ವಾಣಿಜ್ಯ ನಗರಿಗೆ ಹುಬ್ಬಳ್ಳಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಹಲವು ಸರ್ಕಾರಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು. 

ಶಿಕ್ಷಣ ಕಾಶಿ ಧಾರವಾಡದಲ್ಲಿ ಐಐಟಿ, ರಾಯಚೂರಿನಲ್ಲಿ ಐಐಐಟಿ ಕಟ್ಟಡಗಳ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ಜತೆಗೆ ಧಾರವಾಡ ಅನಿಲ ವಿತರಣಾ ಯೋಜನೆ, ಮಂಗಳೂರು ತುರ್ತು ಅವಶ್ಯಕತೆಯ ಪೆಟ್ರೋಲಿಯಂ ಸಂಗ್ರಹ ಸೌಲಭ್ಯ, ಪ್ರಧಾನಮಂತ್ರಿ ಆವಾಸ್ ಯೋಜನೆಯಡಿಯಲ್ಲಿ ಧಾರವಾಡದಲ್ಲಿ ನಿರ್ಮಿಸಿರುವ ಮನೆಗಳನ್ನು ಫಲಾನುಭವಿಗಳಿಗೆ ವಿತರಣೆ.

ಇನ್ನು ದಾವಣಗೆರೆ, ಹಾವೇರಿ ಜಿಲ್ಲೆಗಳಲ್ಲಿ ನಗರಗಳ ಸಂಪರ್ಕ ಸಾಧಿಸಲು  ಈ ಭಾಗದಲ್ಲಿ ಉದ್ಯೋಗ ಅವಕಾಶಕ್ಕೆ ಪುಷ್ಠಿ ನೀಡುವ ಚಿಕ್ಕಜಾಜೂರು - ಮಾಯಕೊಂಡ ವಿಭಾಗದ ನಡುವಿನ ಹಳಿಯ ಜೋಡಿ ಮಾರ್ಗ ರಾಷ್ಟ್ರಕ್ಕೆ ಸಮರ್ಪಣೆ ಮಾಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದೇಶಪಾಂಡೆ, ಕೇಂದ್ರ ಸಚಿವ ಸದಾನಂದ ಗೌಡ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್​ ಯಡಿಯೂರಪ್ಪ, ಸಂಸದ ಪ್ರಹ್ಲ್ಲಾದ್​ ಜೋಷಿ, ಇನ್ಫೋಸಿಸ್​ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ