PM Modi Bengaluru visit: ಪಶ್ಚಿಮ ಬಂಗಾಳ ಗೆದ್ದ ಮೋದಿಗೆ ಮೇ 10ಕ್ಕೆ ಬೆಂಗಳೂರಲ್ಲಿ ಅಭಿನಂದನೆ

Kannadaprabha News   | Kannada Prabha
Published : May 07, 2026, 06:05 AM IST
PM Modi visit Bengaluru on May 10 BJP celebrate West Bengal election victory in HAL

ಸಾರಾಂಶ

PM Modi Bengaluru visit: ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿನ ಚುನಾವಣಾ ಗೆಲುವಿನ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಮೇ 10 ರಂದು ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ, ರಾಜ್ಯ ಬಿಜೆಪಿ ಬೆಂಗಳೂರಿನ ಎಚ್‌ಎಎಲ್‌ ವಿಮಾನ ನಿಲ್ದಾಣದ ಬಳಿ ಬೃಹತ್ ಅಭಿನಂದನಾ ಸಮಾರಂಭವನ್ನು ಆಯೋಜಿಸಿದೆ.

ಬೆಂಗಳೂರು (ಮೇ.7): ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಜಯಭೇರಿ ಬಾರಿಸಿದ ಬಳಿಕ ಇದೇ ಭಾನುವಾರ (ಮೇ 10) ಕರ್ನಾಟಕಕ್ಕೆ ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಜ್ಯ ಬಿಜೆಪಿ ವತಿಯಿಂದ ಬೃಹತ್ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ.

ಅಂದು ಬೆಳಗ್ಗೆ ದೆಹಲಿಯಿಂದ ಆಗಮಿಸಲಿರುವ ಮೋದಿ ಅವರಿಗೆ ನಗರದ ಎಚ್‌ಎಎಲ್‌ ವಿಮಾನ ನಿಲ್ದಾಣದ ಬಳಿ ಅಭಿನಂದನೆ ಸಲ್ಲಿಸಲಾಗುತ್ತದೆ. ಸುಮಾರು 15 ಸಾವಿರಕ್ಕೂ ಪಕ್ಷದ ಕಾರ್ಯಕರ್ತರು ಸೇರಲಿದ್ದಾರೆ. ಇದಕ್ಕಾಗಿ ಮೋದಿ ಅವರ ಕಚೇರಿ ಸುಮಾರು ಅರ್ಧ ಗಂಟೆ ಕಾಲ ಸಮಯ ನಿಗದಿಪಡಿಸಿದೆ. ಮೋದಿ ಅವರು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಮೋದಿ ಅವರು ನಗರದ ಕನಕಪುರ ರಸ್ತೆಯಲ್ಲಿನ ಆರ್ಟ್ ಆಫ್ ಲಿವಿಂಗ್‌ನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸುತ್ತಿದ್ದಾರೆ. ಅದೇ ವೇಳೆ ಬಿಜೆಪಿ ವತಿಯಿಂದ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಈ ಹಿನ್ನೆಲೆಯಲ್ಲಿ ಬುಧವಾರ ಬಿಜೆಪಿ ಕಚೇರಿಯಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು. ವಿಪಕ್ಷ ನಾಯಕ ಆರ್.ಅಶೋಕ್ ಅವರು ನೇತೃತ್ವ ವಹಿಸಿದ್ದರು. ಸಭೆಯಲ್ಲಿ ಮಾಜಿ ಸಚಿವರಾದ ಅರವಿಂದ ಲಿಂಬಾವಳಿ, ಡಾ.ಸಿ.ಎನ್‌.ಅಶ್ವತ್ಥನಾರಾಯಣ, ಕೆ.ಗೋಪಾಲಯ್ಯ, ಎಸ್.ಆರ್‌.ವಿಶ್ವನಾಥ್, ಎಸ್‌.ಮುನಿರಾಜು, ಸಿ.ಕೆ.ರಾಮಮೂರ್ತಿ, ರಾಜ್ಯ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.

ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್‌, ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ದಾಖಲಿಸಿದೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವವೇ ಕಾರಣ. ಮೋದಿ ಅವರು ಮೇ 10 ರಂದು ಬೆಂಗಳೂರಿಗೆ ಬರಲಿದ್ದು, ಎಚ್‌ಎಎಲ್‌ ವಿಮಾನ ನಿಲ್ದಾಣದ ಪಾರ್ಕಿಂಗ್‌ನಲ್ಲಿ ವಿಶೇಷ ಕಾರ್ಯಕ್ರಮ ನಡೆಸಿ ಎಲ್ಲ ಕಾರ್ಯಕರ್ತರ ಜೊತೆಗೆ ಅಭಿನಂದನೆ ಸಲ್ಲಿಸಲಿದ್ದೇವೆ. ಸುಮಾರು 15 ಸಾವಿರ ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಪ್ರಧಾನಿ ಅರ್ಧ ಗಂಟೆ ಭಾಷಣ ಮಾಡಲಿದ್ದಾರೆ ಎಂದು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಾಸಲೀಲೆ ಪ್ರಕರಣದ ಆರೋಪಿ ಡಿಜಿಪಿ ರಾಮಚಂದ್ರ ರಾವ್ ಅಮಾನತು ರದ್ದು; ಮತ್ತೆ ಉನ್ನತ ಹುದ್ದೆ ನಿಯೋಜಿಸಿದ ಸರ್ಕಾರ!
'ಶಾಸಕರ ಟಿಕೆಟ್ ವ್ಯಾಮೋಹಕ್ಕೆ ಬೆಂಗಳೂರು ಬಲಿ', IPL ಫೈನಲ್ ಅಹಮದಾಬಾದ್‌ಗೆ ಶಿಫ್ಟ್: ನಿಖಿಲ್ ಕುಮಾರಸ್ವಾಮಿ ಕಿಡಿ