Latest Videos

ನಾಳೆ ಪ್ರಧಾನಿ ಮೋದಿ- ಸಿದ್ದರಾಮಯ್ಯ ಭೇಟಿ

By Kannadaprabha NewsFirst Published Jun 28, 2024, 10:50 AM IST
Highlights

ಪ್ರಧಾನಿಗಳು ಶನಿವಾರ ಭೇಟಿ ಮಾಡಲು ಸಮಯ ಕೊಟ್ಟಿದ್ದಾರೆ. ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಸಹ ಭೇಟಿಗೆ ಸಮಯ ನೀಡಿದ್ದಾರೆ. ಹಣಕಾಸು ಸಚಿವೆ ನಿರ್ಮಲಾ ಸೀತಾ ರಾಮನ್‌ ಅವರನ್ನು ಭೇಟಿ ಮಾಡಲಾಗುವುದು. ಗೃಹ ಸಚಿವ ಅಮಿತ್ ಶಾ ಅವರ ಸಮಯಾವಕಾಶವನ್ನು ಕೇಳಿದ್ದು, ಇನ್ನೂ ಸಮಯ ಕೊಟ್ಟಿಲ್ಲ. ಶೀಘ್ರದಲ್ಲಿಯೇ ಸಮಯ ನೀಡಲಿದ್ದಾರೆ: ಮುಖ್ಯಮಂತ್ರಿ ಸಿದ್ದರಾಮಯ್ಯ 
 

ಬೆಂಗಳೂರು(ಜೂ.28):  ರಾಜ್ಯ ಅಭಿವೃದ್ಧಿ ಯೋಜನೆಗಳಿಗೆ ಅನುದಾನ ಸೇರಿದಂತೆ ಇತರೆ ವಿಚಾರಗಳ ಕುರಿತು ಚರ್ಚಿಸುವ ಸಂಬಂಧ ಶನಿವಾರ ಪ್ರಧಾನಿ ನರೇಂದ್ರ ಮೋದಿ ಭೇಟಿಗೆ ಸಮಯ ನಿಗದಿಯಾಗಿದ್ದು, ಕೇಂದ್ರದ ವಿವಿಧ ಇಲಾಖೆಗಳ ಸಚಿವರನ್ನು ಸಹ ಭೇಟಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಗುರುವಾರ ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಪ್ರಧಾನಿಗಳು ಶನಿವಾರ ಭೇಟಿ ಮಾಡಲು ಸಮಯ ಕೊಟ್ಟಿದ್ದಾರೆ. ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಸಹ ಭೇಟಿಗೆ ಸಮಯ ನೀಡಿದ್ದಾರೆ. ಹಣಕಾಸು ಸಚಿವೆ ನಿರ್ಮಲಾ ಸೀತಾ ರಾಮನ್‌ ಅವರನ್ನು ಭೇಟಿ ಮಾಡಲಾಗುವುದು. ಗೃಹ ಸಚಿವ ಅಮಿತ್ ಶಾ ಅವರ ಸಮಯಾವಕಾಶವನ್ನು ಕೇಳಿದ್ದು, ಇನ್ನೂ ಸಮಯ ಕೊಟ್ಟಿಲ್ಲ. ಶೀಘ್ರದಲ್ಲಿಯೇ ಸಮಯ ನೀಡಲಿದ್ದಾರೆ ಎಂದು ಹೇಳಿದರು.

ಕರ್ನಾಟಕದ ಸಂಸದರಿಗೆ ಸಿಎಂ ಬೇಡಿಕೆ ಪಟ್ಟಿ: ರಾಜಕೀಯ ಮರೆತು ಸಂಸತ್ತಿನಲ್ಲಿ ಧ್ವನಿ ಎತ್ತಬೇಕಿದೆ, ಸಿದ್ದು

ಕೇಂದ್ರ ಬಜೆಟ್‌ ಸಂಬಂಧರಾಜ್ಯದ ಯೋಜನೆಗಳಪಟ್ಟಿಯನ್ನು ಸಚಿವ ಕೃಷ್ಣ ಬೈರೇಗೌಡ ಮೂಲಕ ಕೇಂದ್ರ ಸರ್ಕಾರಕ್ಕೆ ಸಲ್ಲಿಸ ಲಾಗಿದೆ. ಬಜೆಟ್ ಪೂರ್ವಭಾವಿ ಸಭೆಗೆ ಹೋಗಲು ಸಾಧ್ಯವಾಗಿಲ್ಲ. ಆದರೆ, ಭಾಷಣ ರೆಡಿ ಮಾಡಿ ಕಳುಹಿಸಿದ್ದೇನೆ ಎಂದರು. ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಒಟ್ಟಿಗೆ ಸಭಾಧ್ಯಕ್ಷರನ್ನು ಪೀಠಕ್ಕೆ ಕರೆದು ಕೊಂಡ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಅದು ಒಂದು ಸಂಪ್ರದಾಯ ಎಂದು ಹೇಳಿದರು.

click me!