
ಬೆಂಗಳೂರು(ಜ.12): 'ಅಯೋಧ್ಯೆಯಲ್ಲಿ ಜ.22ರಂದು ನಡೆಯಲಿರುವ ರಾಮಲಲ್ಲಾ ಪ್ರತಿಷ್ಠಾಪನಾ ಕಾರ್ಯಕ್ರಮವನ್ನು ಒಂದು ಪಕ್ಷದ ಕಾರ್ಯಕ್ರಮವಾಗಿ ಮಾಡಿರುವುದರಿಂದ ಸದರಿ ಸಮಾರಂಭದಲ್ಲಿ ಭಾಗವಹಿಸದಿರುವ ಕಾಂಗ್ರೆಸ್ ವರಿಷ್ಠರ ತೀರ್ಮಾನ ಸರಿಯಾಗಿದೆ. ಇದಕ್ಕೆ ನನ್ನ ಬೆಂಬಲವಿದೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬಿಜೆಪಿಯವರು ಜಾತಿ, ಧರ್ಮ, ಪಕ್ಷ-ಪಂಥವನ್ನು ಮೀರಿ ಸರ್ವರನ್ನೂ ಒಳಗೊಂಡು ಭಕ್ತಿ ಮತ್ತು ಗೌರವದಿಂದ ನಡೆಸಬೇಕಿದ್ದ ಧಾರ್ಮಿಕ ಕಾಠ್ಯಕ್ರಮವನ್ನು ಪಕ್ಷದ ಕಾಠ್ಯಕ್ರಮ ಮಾಡಿದ್ದಾರೆ. ತನ್ಮೂಲಕ ಪ್ರಧಾನಿ ನರೇಂದ್ರ ಮೋದಿ ಮತ್ತು ಸಂಘ ಪರಿವಾರದ ನಾಯಕರು ಶ್ರೀರಾಮನಿಗೆ ಹಾಗೂ ದೇಶದ 140 ಕೋಟಿ ಜನತೆಗೆ ಆಗೌರವವನ್ನುಂಟು ಮಾಡಿದ್ದಾರೆ. ಹೀಗಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರ ತೀರ್ಮಾನ ಸರಿಯಾಗಿದೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ರಾಮಮಂದಿರ ಕಾರ್ಯಕ್ರಮ ಬಹಿಷ್ಕರಿಸಿ ಕಾಂಗ್ರೆಸ್‌ನವರಿಂದ ಅವಮಾನ: ರಾಮುಲು
ಹಿಂದೂಗಳಿಗೆ ಮಾಡಿರುವ ದ್ರೋಹ:
'ಧಾರ್ಮಿಕ ಕಾರ್ಯಕ್ರಮವನ್ನು ರಾಜಕೀಯ ಪ್ರಚಾರದ ಅಭಿಯಾನ ವನ್ನಾಗಿ ಮಾಡಿದ್ದು ಸಮಸ್ತ ಹಿಂದೂ ಬಾಂಧವರಿಗೆ ಮಾಡಿರುವ ದ್ರೋಹ. ಹಿಂದೂ ಧರ್ಮದ ಸಂಸ್ಕೃತಿ ಬಗ್ಗೆ ಪ್ರತಿನಿತ್ಯ ಉಪದೇಶ ನೀಡುವ ಆರ್‌ಎಸ್‌ಎಸ್ ನಾಯಕರು ಅಪೂರ್ಣಗೊಂಡಿರುವ ಶ್ರೀರಾಮನ ದೇವ ಸ್ಥಾನವನ್ನು ಉದ್ಘಾಟಿಸಲು ಹೊರಟಿದ್ದಾರೆ ಎಂದು ಕಿಡಿ ಕಾರಿದ್ದಾರೆ.
ಹಿಂದೂಗಳನ್ನು ಒಡೆಯುವ ಕಾರ್ಯಕ್ರಮ:
ರಾಮಮಂದಿರದಲ್ಲಿ ಶೈವರು-ಶಾಕ್ತರಿಗೆ ಅಧಿಕಾರ ಇಲ್ಲ ಎಂಬ ರಾಮ ಮಂದಿರ ಟ್ರಸ್ಟ್‌ನ ಕಾವ್ಯದರ್ಶಿಯವರ ಹೇಳಿಕೆ ವಿವಾದ ಸೃಷ್ಟಿಸಿದೆ. ಇದು ನಿಜವೆಂದಾದರೆ ಇದು ಸಮಸ್ತ ಶೈವ ಆರಾ ಧಕರಿಗೆಮಾಡಿರುವ ಅವಮಾನ. ಇದೇರೀತಿ ರಾಮಮಂದಿ ರವನ್ನು ರಾಜಕೀಯಕ್ಕಾಗಿದುರುಪಯೋಗಮಾಡುತ್ತಿರುವು ದನ್ನು ವಿರೋಧಿಸಿ ನಾಲ್ವರು ಶಂಕರಾಚಾರ್ಯರು ಪ್ರತಿ ಷ್ಠಾಪನಾ ಕಾರ್ಯಕ್ರಮವನ್ನು ಬಹಿಷ್ಕರಿಸಿದ್ದಾರೆ. : ಸಮಸ್ತ ಹಿಂದೂಗಳನ್ನು ಹಿಂದೂಗಳನ್ನು ಒಗ್ಗೂಡಿಸಬೇಕಾಗಿದ್ದ ಕಾಠ್ಯಕ್ರಮವನ್ನ ಬಿಜೆಪಿಯ ರಾಜಕೀಯದಿಂದಾಗಿ ಹಕೀಯದಿಂದಾಗಿ ಹಿಂದೂಗಳನ್ನು ಹಿಂದೂಗಳನ್ನು ಒಡ ಒಡೆ ಯುವ ಕಾಠ್ಯಕ್ರಮವಾಗಿರುವುದು ದುರಂತ ಎಂದಿದ್ದಾರೆ.
ರಾಮಮಂದಿರ ವಿರುದ್ಧ ಅಪಸ್ವರವೂ ಜೋರು: ಕಾಂಗ್ರೆಸ್ ಗೈರಿಗೆ ಸಿದ್ದು, ಸಂಪುಟ ಸಚಿವರ ಬೆಂಬಲ
ಚುನಾವಣೆಗಾಗಿ ರಾಮಮಂದಿರ ಉದ್ಘಾಟನೆ: ನರೇಂದ್ರ ಮೋದಿ ಅವರಿಗೆ ತಮ್ಮ ಸಾಧನೆಯನ್ನು ಮತದಾರರ ಮುಂದಿಟ್ಟು ಚುನಾವಣೆಯನ್ನು ಗೆಲ್ಲುವ ಆತ್ಮವಿಶ್ವಾಸ ಇಲ್ಲ. ಇದಕ್ಕಾಗಿ ಅವಸರದಿಂದ ಅಪೂರ್ಣ ಸ್ಥಿತಿಯಲ್ಲಿರುವ ರಾಮ ಮಂದಿರವನ್ನು ಉದ್ಘಾಟಿಸಿ ಈ ಮೂಲಕ ಹಿಂದುತ್ವದ ಅಲೆಯನ್ನು ಬಡಿದೆಬ್ಬಿಸಿ ಅದರ ಮರೆಯಲ್ಲಿ ತಮ್ಮ ವೈಫಲ್ಯವನ್ನು ಮುಚ್ಚಿಹಾಕುವ ಪ್ರಯತ್ನ ನಡೆಸಿದ್ದಾರೆ ಎಂದು ಟೀಕಾಪ್ರಹಾರ ನಡೆಸಿದ್ದಾರೆ.
ಶ್ರೀರಾಮನ ಮೇಲೆ ನಂಬಿಕೆ, ಭಕ್ತಿ ಇದ್ದವರು ಪ್ರತಿದಿನ ಆತನನ್ನು ಪೂಜಿಸುವುದು ಧಾರ್ಮಿಕ ಕರ್ತವ್ಯ. ಶ್ರೀರಾಮನನ್ನು ರಾಜಕೀಯಕ್ಕೆ ಬಳಸುವವರ ವಿರುದ್ಧ ದನಿ ಎತ್ತುವುದು ಕೂಡಾ ಅಷ್ಟೇ ಪವಿತ್ರವಾದ ಧಾರ್ಮಿಕ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ